‘ಜಾತಿ ನಿಂದನೆ ಮಾಡಿಲ್ಲ, ಎಫ್ಐಆರ್​ ರದ್ದು ಮಾಡಿ’; ಹೈಕೋರ್ಟ್ ಮೊರೆಹೋದ ನಟ ಉಪೇಂದ್ರ

‘ಉಪೇಂದ್ರ ಅವರು ಜಾತಿ, ಸಮುದಾಯಗಳ ನಡುವೆ ಸಾಮರಸ್ಯಕ್ಕೆ ಯತ್ನಿಸುತ್ತಿದ್ದಾರೆ. ಪ್ರಚಾರ ಪಡೆಯಲೆಂದು ನನ್ನ ವಿರುದ್ಧ ದೂರು ದಾಖಲಿಸಲಾಗಿದೆ.  ವಾಟ್ಸಾಪ್​​​ ಮೂಲಕ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ’ ಎಂದು ಉಪೇಂದ್ರ ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

‘ಜಾತಿ ನಿಂದನೆ ಮಾಡಿಲ್ಲ, ಎಫ್ಐಆರ್​ ರದ್ದು ಮಾಡಿ’; ಹೈಕೋರ್ಟ್ ಮೊರೆಹೋದ ನಟ ಉಪೇಂದ್ರ
ಉಪೇಂದ್ರ
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 14, 2023 | 1:32 PM

ನಟ ಉಪೇಂದ್ರ (Upendra) ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ತನಿಖೆ ನಡೆಯುತ್ತಿದೆ. ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರಗೆ ನೋಟಿಸ್ ಜಾರಿ ಮಾಡಲಾಗಿದೆ. ಈ ಮಧ್ಯೆ  ಎಫ್ಐಆರ್ ರದ್ದು ಕೋರಿ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ. ನಟ ಉಪೇಂದ್ರ ಅರ್ಜಿಯಲ್ಲಿನ ಸಂಪೂರ್ಣ ವಿವರ ಟಿವಿ9ಗೆ ಲಭ್ಯವಾಗಿದೆ. ಕೋರ್ಟ್ ಯಾವ ರೀತಿಯಲ್ಲಿ ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

‘ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಒಳ್ಳೆಯದನ್ನು ಮಾಡುವಾಗಲೂ ಟೀಕಿಸುವವರು ಇದ್ದೇ ಇರುತ್ತಾರೆ. ಈ ಮಾತಿಗೆ ಪೂರಕವಾಗಿ ಮಾತ್ರವೇ ಗಾದೆ ಬಳಸಲಾಗಿದೆ. ಆಕ್ಷೇಪ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿ ಕ್ಷಮೆ ಕೋರಿದ್ದೇನೆ. ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿನಿಂದನೆಯಲ್ಲ. ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ಎಸಗಿಲ್ಲ. ಸಮಾಜದಲ್ಲಿನ ತಾರತಮ್ಯದ ವಿರುದ್ಧ ನಾನು ಹೋರಾಡುತ್ತಿದ್ದೇನೆ’ ಎಂದು ಉಪೇಂದ್ರ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

‘ಉಪೇಂದ್ರ ಅವರು ಜಾತಿ, ಸಮುದಾಯಗಳ ನಡುವೆ ಸಾಮರಸ್ಯಕ್ಕೆ ಯತ್ನಿಸುತ್ತಿದ್ದಾರೆ. ಪ್ರಚಾರ ಪಡೆಯಲೆಂದು ನನ್ನ ವಿರುದ್ಧ ದೂರು ದಾಖಲಿಸಲಾಗಿದೆ.  ವಾಟ್ಸಾಪ್​​​ ಮೂಲಕ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಪೊಲೀಸರು ಉಪೇಂದ್ರಗೆ ಕಿರುಕುಳ ನೀಡಲು ಬಯಸಿದ್ದಾರೆ. ಹೀಗಾಗಿ ಎಫ್‌ಐಆರ್​​​​ಗಳಿಗೆ ತಡೆಯಾಜ್ಞೆ ನೀಡಬೇಕು’ ಎಂದು ಉಪೇಂದ್ರ ಹೈಕೋರ್ಟ್​ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಉಪೇಂದ್ರ ಲೈವ್​ನಲ್ಲಿ ಹೇಳಿದ ಮಾತಿನಿಂದ ಇಂದಿನವರೆಗೆ ಆದ ಬೆಳವಣಿಗೆಗಳ ಮಾಹಿತಿಯ ಟೈಮ್​ಲೈನ್​.. 

ಇತ್ತೀಚೆಗೆ ಲೈವ್​ನಲ್ಲಿ ಮಾತನಾಡಿದ್ದ ಉಪೇಂದ್ರ ಅವರು ಆಕ್ಷೇಪಾರ್ಹ ಪದದ ಬಳಕೆ ಮಾಡಿದ್ದರು. ಈ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಅವರು ಕ್ಷಮೆ ಕೇಳಿದ ಹೊರತಾಗಿಯೂ ಅನೇಕರು ಸಿಟ್ಟಿಗೆದ್ದಿದ್ದಾರೆ. ನಟನ ವಿರುದ್ಧ ದೂರು ದಾಖಲಾಗಿದೆ. ಈ ದೂರನ್ನು ಆಧರಿಸಿ ಬೆಂಗಳೂರಿನ ಚೆನ್ನಮ್ಮನಕೆರೆ ಪೊಲೀಸರು ಎಫ್​ಐಆರ್ ದಾಖಲು ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?