AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶ್ ಇಂಡಿಯಾ ಬಾಕ್ಸ್ ಆಫೀಸ್​ ಹೊಡೆದ್ರು, ನಾವು ವರ್ಲ್ಡ್​​ನ ಹೊಡಿತೀವಿ’; ‘ವಿಕ್ರಾಂತ್ ರೋಣ’ ಬಗ್ಗೆ ಉಪೇಂದ್ರ ಮಾತು

‘ಕೆಜಿಎಫ್ 2’ ಸಿನಿಮಾ ಮಾಡಿದ ಮೋಡಿ ತುಂಬಾ ದೊಡ್ಡದು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಕಲೆಕ್ಷನ್ ಮಾಡಿದೆ. ಈ ಚಿತ್ರವನ್ನು ‘ವಿಕ್ರಾಂತ್ ರೋಣ’ ಸಿನಿಮಾ ಮೀರಿಸಲಿದೆ ಎಂಬರ್ಥದಲ್ಲಿ ಮಾತನಾಡಿದ್ದಾರೆ ಉಪೇಂದ್ರ.

‘ಯಶ್ ಇಂಡಿಯಾ ಬಾಕ್ಸ್ ಆಫೀಸ್​ ಹೊಡೆದ್ರು, ನಾವು ವರ್ಲ್ಡ್​​ನ ಹೊಡಿತೀವಿ’; ‘ವಿಕ್ರಾಂತ್ ರೋಣ’ ಬಗ್ಗೆ ಉಪೇಂದ್ರ ಮಾತು
ಯಶ್​-ಉಪೇಂದ್ರ-ಸುದೀಪ್
TV9 Web
| Edited By: |

Updated on:Jul 26, 2022 | 9:12 PM

Share

‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ಜುಲೈ 28ರಂದು ತೆರೆಗೆ ಬರುತ್ತಿದೆ. ವಿಶ್ವಾದ್ಯಂತ ನಾನಾ ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗುತ್ತಿದೆ. ‘ವಿಕ್ರಾಂತ್ ರೋಣ’ ರಿಲೀಸ್​ಗೂ ಮೊದಲು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಉಪೇಂದ್ರ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದರು. ಅವರು ಸುದೀಪ್ (Sudeep) ಆ್ಯಂಡ್ ಟೀಂಗೆ ಶುಭಾಶಯ ಕೋರಿದ್ದಾರೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್ ಆಳಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

‘ಹಲವು ವರ್ಷಗಳ ಹಿಂದೆ ಸುದೀಪ್ ಸಿಕ್ಕಿದ್ದರು.  ಡೈರೆಕ್ಟರ್ ಆಗಬೇಕು ಅಂತ ಬಂದಿದ್ರು. ಡೈರೆಕ್ಟರ್ ಯಾಕೆ ಆಗ್ತೀರಾ? ಇಷ್ಟು ಎತ್ತರ ಇದ್ದೀರ, ಹೀರೋ ಆಗಿ ಅಂತ ಹೇಳಿದೆ. ಅವರು ಹೀರೋ ಆಗಿ, ನಂತರ ಸೂಪರ್ ಸ್ಟಾರ್ ಆದರು. ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ’ ಎಂದು ಕಿಚ್ಚನ ಬಗ್ಗೆಯ ಮೆಚ್ಚುಗೆ ಮಾತುಗಳನ್ನು ಆಡಿದರು ಉಪೇಂದ್ರ.

‘ಕೆಜಿಎಫ್ 2’ ಸಿನಿಮಾ ಮಾಡಿದ ಮೋಡಿ ತುಂಬಾ ದೊಡ್ಡದು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಕಲೆಕ್ಷನ್ ಮಾಡಿದೆ. ಈ ಚಿತ್ರವನ್ನು ‘ವಿಕ್ರಾಂತ್ ರೋಣ’ ಸಿನಿಮಾ ಮೀರಿಸಲಿದೆ ಎಂಬರ್ಥದಲ್ಲಿ ಮಾತನಾಡಿದ್ದಾರೆ ಉಪೇಂದ್ರ. ‘ಇದು ಪ್ಯಾನ್ ಇಂಡಿಯಾ ಸಿನಿಮಾ ಅಲ್ಲ, ಪ್ಯಾನ್ ವರ್ಲ್ಡ್​ ಸಿನಿಮಾ. ಕನ್ನಡಿಗರು ಯಾರಿಗೂ ಕಡಿಮೆ ಇಲ್ಲ ಎಂದು ಯಶ್ ಇಂಡಿಯಾದ ಬಾಕ್ಸ್ ಆಫೀಸ್​ ಹೊಡೆದರು. ನಾವು ವಿಶ್ವನ (ವರ್ಲ್ಡ್​ ಬಾಕ್ಸ್ ಆಫೀಸ್​) ಹೊಡಿತೀವಿ’ ಎಂದರು ಉಪೇಂದ್ರ.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

ಇದನ್ನೂ ಓದಿ: ‘ವಿಕ್ರಾಂತ್ ರೋಣ’ ಪ್ರೀ-ರಿಲೀಸ್ ಇವೆಂಟ್ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಮೇಲೆ ‘ವಿಕ್ರಾಂತ್ ರೋಣ’ ಚಿತ್ರಕ್ಕೆ ವಿಶೇಷ ಅರ್ಥ ನೀಡಿದರು ಉಪೇಂದ್ರ. ‘ಇದು ವಿಕ್ರಾಂತ್ ರೋಣ ಅಲ್ಲ, ವಿಕ್ಟರಿ ರೋಣ. ಬೇಗ ಪಾರ್ಟಿ ಕೊಡಿ’ ಎಂದು ನಿರ್ಮಾಪಕ ಜಾಕ್ ಮಂಜು ಬಳಿ ಹೇಳಿದರು ಉಪೇಂದ್ರ. ಈ ಮೂಲಕ ಚಿತ್ರಕ್ಕೆ ಗೆಲುವು ಪಕ್ಕಾ ಎಂದರು. ಬೆಂಗಳೂರಿನ ಲುಲು ಮಾಲ್​ನಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ನಡೆದಿದೆ. ಈ ಇವೆಂಟ್​ಗೆ ಫ್ಯಾನ್ಸ್ ಕಿಕ್ಕಿರಿದು ನೆರೆದಿದ್ದರು. ಈ ಬಗ್ಗೆ ಉಪೇಂದ್ರ ಮಾತನಾಡಿ, ‘ಎಲ್ಲ ಕಾರ್ಯಕ್ರಮಕ್ಕೂ ಈ ಕಳೆ ಬರಲ್ಲ’ ಎಂದು ಸಂತಸ ಹೊರಹಾಕಿದರು.

Published On - 9:11 pm, Tue, 26 July 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ