AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಪ್ರಕರಣದ ಬೆನ್ನಲ್ಲೇ ಹೊರಬಿತ್ತು ದರ್ಶನ್ ಮತ್ತೊಂದು ಕೇಸ್; ಪರಿಹಾರ ಕೇಳಲು ಹೋದವರಿಗೆ ಮಾಡಿದ್ದೇನು?

ಹತ್ತು ವರ್ಷಗಳ ಹಿಂದಿನ ಕರಾಳ ಘಟನೆಯನ್ನು ಟಿವಿ9 ಕನ್ನಡದ ಎದುರು ಸಂತ್ರಸ್ತ ಕುಟುಂಬದವರು ರಿವೀಲ್ ಮಾಡಿದ್ದಾರೆ. ಪರಿಹಾರ ಕೇಳಲು ಹೋದವರಿಗೆ ನಾಯಿ ಛೂ ಬಿಟ್ಟು ವಿಕೃತಿ ಮೆರೆಯಲಾಗಿದೆ. ನಟ ದರ್ಶನ್ ಹೀರೋ ಅಲ್ಲ ವಿಲನ್ ಎಂದು ಸಂತ್ರಸ್ತರು ಆಕ್ರೋಶ ಹೊರಹಾಕಿದ್ದಾರೆ.

ಕೊಲೆ ಪ್ರಕರಣದ ಬೆನ್ನಲ್ಲೇ ಹೊರಬಿತ್ತು ದರ್ಶನ್ ಮತ್ತೊಂದು ಕೇಸ್; ಪರಿಹಾರ ಕೇಳಲು ಹೋದವರಿಗೆ ಮಾಡಿದ್ದೇನು?
ದರ್ಶನ್
ಸೂರಜ್ ಪ್ರಸಾದ್ ಎಸ್ಎನ್
| Edited By: |

Updated on: Jun 13, 2024 | 8:29 AM

Share

ನಟ ದರ್ಶನ್ (Darshan) ಅವರಿಗೆ ರೇಣುಕಾಸ್ವಾಮಿ ಕುಟುಂಬದವರು ಹಿಡಿಶಾಪ ಹಾಕುತ್ತಿದ್ದಾರೆ. ದರ್ಶನ್ ಹಾಗೂ ಅವರ ಗ್ಯಾಂಗ್ ಸೇರಿಕೊಂಡು ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ದರ್ಶನ್ ಅವರ ಹಳೆಯ ಪ್ರಕರಣಗಳು ಈಗ ಬೆಳಕಿಗೆ ಬರುತ್ತಿವೆ. ಪರಿಹಾರ ಕೇಳಲು ಹೋದ ಸಂತ್ರಸ್ತರ ವಿರುದ್ಧ ದರ್ಶನ್ ಯಾವ ರೀತಿ ನಡೆದುಕೊಂಡಿದ್ದರು ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ. ಇದರಿಂದ ದರ್ಶನ್ ಹಾಗೂ ಗ್ಯಾಂಗ್​ನ ಮತ್ತೊಂದು ಕರಾಳ ಮುಖ ಬಯಲಾಗಿದೆ.

ಹತ್ತು ವರ್ಷಗಳ ಹಿಂದಿನ ಕರಾಳ ಘಟನೆಯನ್ನು ಟಿವಿ9 ಕನ್ನಡದ ಎದುರು ಸಂತ್ರಸ್ತ ಕುಟುಂಬದವರು ರಿವೀಲ್ ಮಾಡಿದ್ದಾರೆ. ಪರಿಹಾರ ಕೇಳಲು ಹೋದವರಿಗೆ ನಾಯಿ ಛೂ ಬಿಟ್ಟು ವಿಕೃತಿ ಮೆರೆಯಲಾಗಿದೆ. ನಟ ದರ್ಶನ್ ಹೀರೋ ಅಲ್ಲ ವಿಲನ್ ಎಂದು ಸಂತ್ರಸ್ತರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ನ್ಯಾಯಕ್ಕಾಗಿ ಸಂತ್ರಸ್ತ ಕುಟುಂಬಸ್ಥರು ಟಿವಿ9 ಕನ್ನಡವನ್ನು ಸಂಪರ್ಕಿಸಿದ್ದಾರೆ.

ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್​ಹೌಸ್​ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಬದುಕು ನರಕಮಯ ಆಗಿದೆ. ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್ ಸಂತ್ರಸ್ತ ವ್ಯಕ್ತಿ. ಕೆಲಸ ಮಾಡುವ ವೇಳೆ ಇವರಿಗೆ ಎತ್ತು ಕೊಂಬಿನಿಂದ ತಿವಿದಿತ್ತು. ಎತ್ತಿನ ಕೊಂಬು ಕಣ್ಣಿನಿಂದ ತೂರಿ ತಲೆ ಬುರುಡೆಯ ಹೊರಗೆ ಬಂದಿತ್ತು. ಇದರಿಂದ ಅವರ ಕಣ್ಣು ಹೋಗಿದೆ. ಮಹೇಶ್ ಅವರನ್ನು ದರ್ಶನ್ ಕಡೆಯವರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಮನೆಗೆ ತಂದು ಬಿಟ್ಟು ಹೋಗಿದ್ದಾರೆ. ಆ ಬಳಿಕ ದರ್ಶನ್ ಈ ಕುಟುಂಬದ ಕಡೆ ತಿರುಗಿಯೂ ನೋಡಿಲ್ಲ.

ಇದನ್ನೂ ಓದಿ: ‘ದರ್ಶನ್ ಕಿವಿಗೆ ಅಶ್ಲೀಲ ಮೆಸೇಜ್ ವಿಚಾರ ಬೀಳಬಾರದಿತ್ತು’; ಜೈಲಿನಲ್ಲಿ ಮರುಗಿದ ಪವಿತ್ರಾ ಗೌಡ  

ಪರಿಹಾರ ಕೇಳಲು ಕಾರ್ಮಿಕನ ಸಂಬಂಧಿಕರು ಫಾರ್ಮ್ ಹೌಸ್​ಗೆ ಹೋದರೆ ಡಿ ಗ್ಯಾಂಗ್ ಸಾಕುನಾಯಿ ಛೂ ಬಿಟ್ಟಿತ್ತಂತೆ. ಬಳಿಕ ಮೈಸೂರಿನ ಹೊಟೇಲ್​ಗೆ ಮಾತುಕತೆಗೆ ಕರೆಸಿ ರೌಡಿಗಳಿಂದ ಬೆದರಿಕೆ ಹಾಕಲಾಗಿತ್ತು. ವಿಚಾರ ಹೊರಗಡೆ ಬಾಯಿಬಿಟ್ರೆ ಪರಿಸ್ಥಿತಿ ನೆಟ್ಟಗಿರಲ್ಲ ಎಂದು ದರ್ಶನ್ ಹಾಗೂ ಅವರ ಗ್ಯಾಂಗ್ ಬೆದರಿಸಿತ್ತು. ಹತ್ತು ವರ್ಷಗಳಿಂದ ಮಹೇಶ್ ಹಾಸಿಗೆ ಹಿಡಿದಿದ್ದಾರೆ. ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ. ದರ್ಶನ್​ಗೆ ಹಿಡಿಶಾಪ ಹಾಕುತ್ತಾ ಮಹೇಶ್ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೂರಜ್ ಪ್ರಸಾದ್ ಎಸ್ಎನ್
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು