AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈ ಮುಗಿದು ಕೇಳಿಕೊಳ್ತೀನಿ, ಆ ತಪ್ಪು ಮಾಡಬೇಡಿ’; ಮುಖವಾಡ ಹಾಕಿದ ಫ್ಯಾನ್ಸ್​ಗೆ ಅನಿರುದ್ಧ್ ಎಚ್ಚರಿಕೆ

ವಿಷ್ಣುವರ್ಧನ್ ಅವರ 75ನೇ ಜನ್ಮದಿನಾಚರಣೆಯ ಸಮೀಪದಲ್ಲಿ ಹಲವಾರು ವಿವಾದಗಳು ಉದ್ಭವಿಸಿವೆ. ಅವರ ಸಮಾಧಿ ಸ್ಥಳದ ವಿವಾದ ಇನ್ನೂ ಬಗೆಹರಿದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನಕಾರಾತ್ಮಕ ಕಾಮೆಂಟ್‌ಗಳು ಕುಟುಂಬಕ್ಕೆ ಕಳವಳ ಉಂಟುಮಾಡಿವೆ. ಅನಿರುದ್ಧ್ ಅವರು ಸಾಮಾಜಿಕ ಜಾಲತಾಣದಲ್ಲಿ ನಕಾರಾತ್ಮಕ ಕಾಮೆಂಟ್‌ಗಳನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ್ದಾರೆ.

‘ಕೈ ಮುಗಿದು ಕೇಳಿಕೊಳ್ತೀನಿ, ಆ ತಪ್ಪು ಮಾಡಬೇಡಿ’; ಮುಖವಾಡ ಹಾಕಿದ ಫ್ಯಾನ್ಸ್​ಗೆ ಅನಿರುದ್ಧ್ ಎಚ್ಚರಿಕೆ
ಅನಿರುದ್ಧ್-ವಿಷ್ಣು
ರಾಜೇಶ್ ದುಗ್ಗುಮನೆ
|

Updated on: Sep 17, 2025 | 2:57 PM

Share

ವಿಷ್ಣುವರ್ಧನ್ (Vishnuvardhan) ಜನ್ಮದಿನ ಸಮೀಪಿಸುತ್ತಿದ್ದಂತೆ ಹಲವು ವಿವಾದಗಳು ಕೂಡ ಸೃಷ್ಟಿ ಆಗಿವೆ. ಈ ಮೊದಲು ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿಯನ್ನು ನೆಲಸಮ ಮಾಡುವ ಕೆಲಸ ಮಾಡಲಾಯಿತು. ಆ ಬಳಿಕ ವಿಷ್ಣು ಸಮಾಧಿ ಜಾಗವನ್ನು ತಮಗೆ ನೀಡುವಂತೆ ಅಭಿಮಾನಿಗಳು ಬೇಡಿಕೆ ಇಟ್ಟರೂ ಯಾವುದೇ ಪ್ರಯೋಜನ ಆಗಿಲ್ಲ. ಮತ್ತೊಂದು ಕಡೆ ಸಮಾಧಿ ಜಾಗದಲ್ಲಿ ಬರ್ತ್​ಡೇ ಆಚರಿಸಬಾರದು ಎಂದು ಸ್ವತಃ ಕೋರ್ಟ್ ಆದೇಶ ನೀಡಿದೆ. ಹೀಗಿರುವಾಗಲೇ ಅನಿರುದ್ಧ್ ಅವರು ಒಂದು ಎಚ್ಚರಿಕೆ ನೀಡಿದ್ದಾರೆ.

‘ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಕುಟುಂಬದ ವಿರುದ್ಧ ನಕಾರಾತ್ಮಕ ಕಾಮೆಂಟ್​ಗಳು ಬರುತ್ತಿವೆ. ನಾನು ಹಿಂದೆ ಕೂಡ ಅಭಿಮಾನಿಗಳ ಸಮ್ಮುಖದಲ್ಲಿ, ಮಾಧ್ಯಮದ ಎದುರು ಎಚ್ಚರಿಕೆ ನೀಡಿದ್ದೆ. ಇದೇ ತರಹದ ಕಾಮೆಂಟ್​ಗಳು ಬರುತ್ತಿದ್ದರೆ ಅಂಥವರ ವಿರುದ್ಧ ದೂರು ದಾಖಲಿಸುತ್ತೇನೆ ಎಂದಿದ್ದೆ. ಆದರೂ ಕೂಡ ಈ ಕಾಮೆಂಟ್​ಗಳು ನಿಲ್ಲುತ್ತಿಲ್ಲ’ ಎಂದು ಅನಿರುದ್ಧ್ ಹೇಳಿದ್ದಾರೆ.

‘ಸೆಪ್ಟೆಂಬರ್ 16ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇನೆ. ಇದನ್ನು ಮತ್ತೆ ಮುಂದುವರಿಸಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಇನ್ನೊಂದು ಬಾರಿ ಕೈ ಮುಗಿದು ಕಳಕಳಿಯಿಂದ ಕೇಳಿಕೊಳ್ಳುತ್ತೇನೆ. ಸಾಮಾಜಿಕ ಜಾಲತಾಣದಲ್ಲಿ, ವೇದಿಕೆ ಮೇಲೆ ಈ ರೀತಿ ಕಮೆಂಟ್ ಮಾಡಿ ಸಮಸ್ಯೆ ತಂದುಕೊಳ್ಳಬೇಡಿ’ ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ
Image
ಊಟದ ವಿಚಾರದಲ್ಲಿ ಸಖತ್ ಮೂಡಿ ಆಗಿದ್ದ ವಿಷ್ಣುವರ್ಧನ್
Image
‘ಪ್ರಿಯಾಂಕಾ ಗಂಭೀರ ಅಫೇರ್ ಹೊಂದಿದ್ದು ನಿಜ’; ನಿರ್ದೇಶಕನ ದೊಡ್ಡ ಹೇಳಿಕೆ
Image
ಒಟಿಟಿಗೆ ಬಂದರೂ ಥಿಯೇಟರ್​​ನಲ್ಲಿ ಪ್ರದರ್ಶನ ಕಾಣುತ್ತಿದೆ ‘ಸು ಫ್ರಮ್ ಸೋ’
Image
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

ಅಭಿಮಾನದ ಮುಖವಾಡ ಹಾಕಿಕೊಂಡ ಕೆಲವರು ಕೆಟ್ಟ ಕೆಲಸ ಮಾಡುತ್ತಿದ್ದಾರೆ, ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬರೆಯುತ್ತಿದ್ದಾರೆ ಎಂದು ಅನಿರುದ್ಧ್ ಅವರು ಈ ಮೊದಲು ಹೇಳಿದ್ದರು.

ಇದನ್ನೂ ಓದಿ: ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆಗೆ ಅನುಮತಿ ನಿರಾಕರಣೆ: ಅಡಚಣೆ ಯಾರಿಂದ?

ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಜನ್ಮದಿನ. ಅವರು ಬದುಕಿದ್ದರೆ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಈ ವಿಶೇಷ ಸಂದರ್ಭದಲ್ಲಿ ‘ಯಜಮಾನರ ಅಮೃತ ಮಹೋತ್ಸವ’ವನ್ನಾಗಿ ಆಚರಿಸಲು ನಿರ್ಧರಸಲಾಗಿತ್ತು. ಆದರೆ, ಆ ಬಳಿಕ ಯಾವುದೇ ಅಪ್​​ಡೇಟ್ ಕೂಡ ಬಂದಿಲ್ಲ. ಇದನ್ನು ಆಚರಿಸೋದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್