Chetan Ahimsa: ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್​ ಮಾಡಿದ ನಟ ‘ಆ ದಿನಗಳು’ ಚೇತನ್ ಅರೆಸ್ಟ್​

Aa Dingalu Chetan Arrest: ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B  ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

Chetan Ahimsa: ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್​ ಮಾಡಿದ ನಟ ‘ಆ ದಿನಗಳು’ ಚೇತನ್ ಅರೆಸ್ಟ್​
Follow us
ರಾಜೇಶ್ ದುಗ್ಗುಮನೆ
|

Updated on:Mar 21, 2023 | 12:09 PM

ತಮ್ಮ ನೇರ ಹೇಳಿಕೆ, ಸಿದ್ಧಾಂತಗಳ ಮೂಲಕ ‘ಆ ದಿನಗಳು ಚೇತನ್​’ (Aa Dingalu Chetan) ಸುದ್ದಿ ಆಗುತ್ತಾ ಇರುತ್ತಾರೆ. ಅವರಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಈಗ ಅವರು ಮತ್ತೆ ಅರೆಸ್ಟ್​ ಆಗಿದ್ದಾರೆ. ಶೇಷಾದ್ರಿಪುರ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಚೇತನ್ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎನ್ನುವ ಆರೋಪ ಬಂತು.ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡುವ ಕಾರ್ಯ ಆಗಿದೆ. ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಚೇತನ್ ಅವರನ್ನು ಅರೆಸ್ಟ್ ಮಾಡಲಾಗಿತ್ತು.

ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B  ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಸದ್ಯ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಹಿಂದೂಪರ ಸಂಘಟನೆಗಳು ಚೇತನ್ ವಿರುದ್ಧ ದೂರು ನೀಡಿದ್ದವು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಚೇತನ್ ಟ್ವೀಟ್​ನಲ್ಲೇನಿದೆ?

‘ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಇದು ಒಂದು ಸುಳ್ಳು.

1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ ಇದು ಒಂದು ಸುಳ್ಳು.

ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು `ಸತ್ಯವೇ ಸಮಾನತೆ’ ಎಂದು ಅವರು ಬರೆದುಕೊಂಡಿದ್ದರು.

ಕಳೆದ ವರ್ಷವೂ ಅರೆಸ್ಟ್ ಆಗಿದ್ದ ಚೇತನ್..

ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಚೇತನ್ ಕುಮಾರ್ ಅವರು ಅರೆಸ್ಟ್ ಆಗಿದ್ದರು. ಚೇತನ್ ಟ್ವೀಟ್​ ಒಂದನ್ನು ಮಾಡಿದ್ದರು. ಹಿಜಾಬ್​ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್​ ಜಡ್ಜ್​​ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಬಂಧನ ಆಗಿತ್ತು.  ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ನಂತರ ಬಿಡುಗಡೆ ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:39 am, Tue, 21 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ