AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಯ್ ರಾವ್ ವಿರುದ್ಧ ದೂರಿನ ಬಳಿಕ ಪತ್ನಿ ಸಪ್ನಾ ಮೊದಲ ಪ್ರತಿಕ್ರಿಯೆ

Ajay Rao's wife: ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಪ್ನಾ ಅವರು ದೂರು ದಾಖಲು ಮಾಡಿದ್ದಾರೆ. ಪ್ರಸ್ತುತ ದೂರು ಮಾತ್ರವೇ ದಾಖಲಾಗಿದ್ದು, ವಿಚ್ಛೇದನದ ಉದ್ದೇಶ ಇಲ್ಲ ಎನ್ನಲಾಗುತ್ತಿದೆ. ಇದೀಗ ಅಜಯ್ ರಾವ್ ಪತ್ನಿ ಸಪ್ನಾ ಅವರು ಇನ್​ಸ್ಟಾಗ್ರಾಂನಲ್ಲಿ ಈ ಬಗ್ಗೆ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ಅಜಯ್ ರಾವ್ ವಿರುದ್ಧ ದೂರಿನ ಬಳಿಕ ಪತ್ನಿ ಸಪ್ನಾ ಮೊದಲ ಪ್ರತಿಕ್ರಿಯೆ
Ajay Rao Sapna
ಮಂಜುನಾಥ ಸಿ.
|

Updated on:Aug 17, 2025 | 5:29 PM

Share

ಕನ್ನಡ ಚಿತ್ರರಂಗದ ಜನಪ್ರಿಯ ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಪ್ನಾ ಅವರು ಅಜಯ್ ರಾವ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪರಸ್ಪರ ವಿಚ್ಛೇದನವನ್ನು ಈ ದಂಪತಿ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತಾದರೂ ಅದು ಸುಳ್ಳಾಯ್ತು. ಸಪ್ನಾ ಅವರು ಪತಿಯ ವಿರುದ್ಧ ದೂರು ದಾಖಲಿಸಿದ ಬಳಿಕ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೇಳಿಕೆ ಹಂಚಿಕೊಂಡಿದ್ದಾರೆ.

‘ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ, ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿ ದಿನ ಧೈರ್ಯವನ್ನ ಕುಡಿಸುತ್ತೇದ್ದಿನೇ, ನನ್ನನ್ನು ತೀವ್ರವಾಗಿ ಪರೀಕ್ಷಿಸುತ್ತಿರುವ ಸವಾಲುಗಳನ್ನು ಎದುರಿಸುತ್ತಿದ್ದೇನೆ. ಪ್ರಿಯ ಸ್ನೇಹಿತರೆ, ಸಹೋದರರೆ, ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನ ಪುನರ್ ನಿರ್ಮಿಸಲು ಮತ್ತು ನಮ್ಮ ದಾಂಪತ್ಯ ಜೀವನವನ್ನ ಪುನಃ ನಿರ್ಮಿಸಿಕೊಳ್ಳಲು ನಿಮ್ಮ ಪ್ರಾರ್ಥನೆ ಗಳನ್ನ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ. ಮತ್ತು ನಾನು ಅತ್ಯಂತ ಗೌರವದಿಂದ ತಿಳಿಸಲು ಬಯಸುವುದೇನೆಂದರೆ ಈ ವಿಷಯ ನಮ್ಮ ವೈಯಕ್ತಿಕ, ಅಳವಾದ ಭಾವನತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂದಿಸಿದ್ದು ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ತಿಳಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ:Breaking: ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು, ನಟನ ವಿರುದ್ಧ ದೂರು ನೀಡಿದ ಪತ್ನಿ

ವಿಶೇಷವೆಂದರೆ ಪೋಸ್ಟ್​ನ ಕೊನೆಯಲ್ಲಿ ತಮ್ಮ ಹೆಸರನ್ನು ಸಪ್ನಾ ಅಜಯ್ ರಾವ್ ಎಂದು ನಮೂದಿಸಿದ್ದಾರೆ. ಆ ಮೂಲಕ ತಮಗೆ ವಿಚ್ಛೇದನ ಪಡೆದುಕೊಳ್ಳುವ ಉದ್ದೇಶ ಇಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಯಪಡಿಸಿದ್ದಾರೆ. ಇಂಗ್ಲೀಷ್ ಮತ್ತು ಕನ್ನಡದಲ್ಲಿ ತಮ್ಮ ಈ ಪೋಸ್ಟ್​ ಅನ್ನು ಇನ್​ಸ್ಟಾಗ್ರಾಂನಲ್ಲಿ ಸಪ್ನಾ ಅಜಯ್ ರಾವ್ ಹಂಚಿಕೊಂಡಿದ್ದಾರೆ.

ಇದೇ ವಿಷಯದ ಬಗ್ಗೆ ನಿನ್ನೆ ಪ್ರತಿಕ್ರಿಯಿಸಿದ್ದ ನಟ ಅಜಯ್ ರಾವ್, ‘ಈ ಸೂಕ್ಷ್ಮ ಸಮಯದಲ್ಲಿ, ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸುವಂತೆ ಹಾಗೂ ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದ ಯಾವುದೇ ಸುದ್ದಿಯನ್ನು ಹಂಚಿಕೊಳ್ಳುವುದನ್ನು ಅಥವಾ ಹರಡುವುದನ್ನು ದೂರವಿಡುವಂತೆ ತಮ್ಮನ್ನು ವಿನಮ್ರವಾಗಿ ವಿನಂತಿಸುತ್ತೇನೆ. ಪ್ರತಿಯೊಂದು ಕುಟುಂಬವೂ ಸವಾಲುಗಳನ್ನು ಎದುರಿಸುತ್ತದೆ, ಅವುಗಳನ್ನು ಖಾಸಗಿಯಾಗಿ ಉಳಿಯುವಂತೆ ಸಹಕರಿಸಿ ಎಂದು ಎಲ್ಲರಲ್ಲಿ ಹೃತ್ಪೂರ್ವಕ ವಿನಂತಿ. ನಿಮ್ಮ ಮನವೊಲಿಕೆ, ಬೆಂಬಲ ಮತ್ತು ವಿವೇಕ ನಮಗೆ ಅತ್ಯಂತ ಮುಖ್ಯ’ ಎಂದಿದ್ದರು.

ಅಜಯ್ ರಾವ್ ಹಾಗೂ ಸಪ್ನಾ ಅವರುಗಳು 2014ರ ಡಿಸೆಂಬರ್ ತಿಂಗಳಲ್ಲಿ ಮದುವೆ ಆಗಿದ್ದರು. ಇಬ್ಬರಿಗೂ ಚರಿಷ್ಮಾ ಹೆಸರಿನ ಹೆಣ್ಣು ಮಗುವಿದೆ. ಸಪ್ನಾ ಐಟಿ ಸಂಸ್ಥೆಯ ಉದ್ಯೋಗಿಯಾಗಿದ್ದಾರೆ. ಅಜಯ್ ರಾವ್ ಕೌಟುಂಬಿಕ ವಿಷಯಗಳ ಬಗ್ಗೆ ಎಲ್ಲೂ ಮಾತನಾಡುತ್ತಿರಲಿಲ್ಲ. ಸಿನಿಮಾದ ಕಾರ್ಯಕ್ರಮಗಳಿಗೂ ಸಹ ಅಜಯ್ ರಾವ್ ಪತ್ನಿ ಬರುತ್ತಿರಲಿಲ್ಲ. ಇದೀಗ ಏಕಾ ಏಕಿ ಪತಿಯ ವಿರುದ್ಧ ಕೌಟುಂಬಿಕ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ ಸಪ್ನಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Sun, 17 August 25

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್