ಬೈಕ್ ಏರಿ ಕನ್ನಡಕ್ಕೆ ಬಂದಿದ್ದಾರೆ ನಟಿ ಅಕ್ಷಿತಾ: ಈಕೆ ಬಲು ವೇಗದ ‘ರೇಸರ್’

ತೆಲುಗು ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ಕನ್ನಡತಿ ಅಕ್ಷಿತಾ ಸತ್ಯನಾರಾಯಣ ಈಗ ರೇಸರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.

ಬೈಕ್ ಏರಿ ಕನ್ನಡಕ್ಕೆ ಬಂದಿದ್ದಾರೆ ನಟಿ ಅಕ್ಷಿತಾ: ಈಕೆ ಬಲು ವೇಗದ ರೇಸರ್
ಅಕ್ಷಿತಾ ಸತ್ಯನಾರಾಯಣ್

Updated on: Jun 18, 2023 | 10:45 PM

ಕನ್ನಡ ಚಿತ್ರರಂಗಕ್ಕೆ (Sandalwood) ಹೊಸ ನಾಯಕಿ ಪರಿಚಯವಾಗುತ್ತಿದ್ದಾರೆ. ಈ ಹಿಂದೆ ತೆಲುಗು ಧಾರಾವಾಹಿಯಲ್ಲಿ (Serial) ನಟಿಸಿದ್ದ ಆದರೆ ಕನ್ನಡತಿಯೇ ಆಗಿರು ಅಕ್ಷಿತಾ ಸತ್ಯನಾರಾಯಣ್ ರೇಸರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದು, ನಾಯಕಿಯನ್ನು ಪರಿಚಯಿಸುವ ಖಡಕ್ ಆದ ಪ್ರೋಮೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಐಶಾರಾಮಿ ರೇಸ್ ಬೈಕ್ (Bike) ಏರಿ ಮಾದಕ ಲುಕ್​ನಲ್ಲಿ ನಟಿ ಅಕ್ಷಿತಾ ಸತ್ಯನಾರಾಯಣ್ ಕಾಣಿಸಿಕೊಂಡಿದ್ದಾರೆ.

ರೇಸರ್’ ಸಿನಿಮಾ ಮೂಲಕ ನಿರ್ಮಾಪಕ ಹಾಗೂ ನಿರ್ದೇಶಕರು ಆಗಿರುವ ವಿಷ್ಣುಕಾಂತ್ ಅವರ ಪುತ್ರ ಭರತ್ ವಿಷ್ಣುಕಾಂತ್ ನಿರ್ದೇಶನಕ್ಕಿಳಿದಿದ್ದಾರೆ. ಬೈಕ್ ರೇಸಿಂಗ್ ಕುರಿತ ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗುತ್ತಿದೆ. ಈ ಚಿತ್ರದ ಹೀರೋಯಿನ್ ಇಂಟ್ರೂಡಕ್ಷನ್ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ತೆಲುಗು ಸೀರಿಯಲ್ ಮೂಲಕ ನಟನಾ ವೃತ್ತಿ ಆರಂಭಿಸಿದ್ದ ಅಕ್ಷಿತಾ ಸತ್ಯನಾರಾಯಣ್ ರೇಸರ್ ಮೂಲಕ ಕನ್ನಡ ಸಿನಿಮಾ ಲೋಕಕ್ಕೆ ಪದಾರ್ಪಣೆ ಮಾಡಿದ್ದಾರೆ. ಮೂಲತಃ ಕನ್ನಡದವರೇ ಆದ ಅಕ್ಷಿತಾ ಮಾಡೆಲ್ ಜಗತ್ತಿಗೆ ಚಿರಪರಿಚಿತರು. 2020ರ VK ನವತಾರೆ ಕಿರೀಟ ಮುಡಿಗೇರಿಸಿಕೊಂಡಿರುವ ಅವರೀಗ ನಾಯಕಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ರೇಸರ್, ಗ್ಯಾರೇಜ್ ನಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ಅದಕ್ಕೆ ಸಿನಿಮ್ಯಾಟಿಕ್ ಟಚ್ ಕೊಟ್ಟು ಕಥೆ ಹೆಣೆಯಲಾಗಿದೆ. ಸಿನಿಮಾಕ್ಕಾಗಿ ನಾಯಕಿ ಅಕ್ಷಿತಾ ಸತ್ಯನಾರಾಯಣ್ ಬೈಕ್ ರೇಸ್ ಕಲಿತಿದ್ದಾರೆ. ದುಬಾರಿ ಬೆಲೆ ಬೈಕ್ ಏರಿ ಅಕ್ಷಿತಾ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿರುವ ಮೋಷನ್ ಪೋಸ್ಟರ್ ಬಿಡುಗಡೆ ಆಗಿದ್ದು ಮೋಷನ್ ಪೋಸ್ಟರ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾದಲ್ಲಿ ಅಕ್ಷಿತಾ ಸಿನಿಮಾದಲ್ಲಿ ಬಬ್ಲಿ ಹುಡುಗಿಯ ಪಾತ್ರ ನಿಭಾಯಿಸಿದ್ದಾರೆ.

ಕಳೆದ ಜನವರಿಯಲ್ಲಿ ಸೆಟ್ಟೇರಿದ್ದ ರೇಸರ್ ಸಿನಿಮಾದ 35ರಷ್ಟು ಭಾಗ ಚಿತ್ರೀಕರಣ ಮುಗಿದಿದೆ. ಇದೇ ತಿಂಗಳಾತ್ಯಂತಕ್ಕೆ ಹಾಡುಗಳ ಚಿತ್ರೀಕರಣ ನಡೆಯಲಿದೆ. ಭಾಯ್ ಎಂಬ ದೊಡ್ಡ ಪಾತ್ರಕ್ಕಾಗಿ ಮಲಯಾಳಂ, ಕನ್ನಡದ ಇಬ್ಬರು ದೊಡ್ಡ ಸ್ಟಾರ್ ಗಳನ್ನು ಅಪ್ರೋಚ್ ಮಾಡಲಾಗಿದೆ. ಸಂದೇಶ್ ಪ್ರಸನ್ನ ನಾಯಕನಾಗಿ ನಟಿಸುತ್ತಿದ್ದು, ಯಶ್ ಶೆಟ್ಟಿ, ಕಾಕ್ರೋಚ್ ಸುಧಿ, ಬಾಲ ರಾಜ್ವಾಡಿ, ಕಾಮಿಡಿ ಕಿಲಾಡಿ ಸೂರಜ, ಸ್ವಾತಿ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಮೈಸೂರು ಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದೆ. ಭರತ್ ವಿಷ್ಣುಕಾಂತ್ ನಿರ್ದೇಶನದ ಜೊತೆಗೆ ಭರತ್ ಫಿಲಂಸ್ ನಡಿ ತಾವೇ ರೇಸರ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us