ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿದು, ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಿಸಿದ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ನಟ ಸುದೀಪ ಅಭಿಮಾನಿಗಳು ಅವರ ಜನ್ಮ ದಿನವನ್ನ ವಿಶೇವಾಗಿ ಆಚರಿಸಿದರು. ತಮ್ಮ ನೆಚ್ಚಿನ ನಾಯಕ ನಟನ ಹುಟ್ಟುಹಬ್ಬ ಬಂತೆಂದರೆ ಸಾಕು ಹಾರ ತುರಾಯಿ, ಹಾಲಿನಿ ಅಭಿಷೇಕ, ಕುರಿ, ಕೋಳಿ, ಕೋಣ ಬಲಿ ನೀಡಿ ಅಭಿಮಾನ ತೋರ್ಪಡಿಸುವ ಅಭಿಮಾನಿಗಳ ನಡುವೆ, ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ವಿಭಿನ್ನವಾಗಿ ನಟ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬವನ್ನ ಆಚರಿಸಿದೆ.

ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿದು, ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಿಸಿದ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್
ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿದು, ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಿಸಿದ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್
Edited By:

Updated on: Sep 13, 2021 | 12:58 PM

ದಾವಣಗೆರೆ: ಕಿಚ್ಚ ಸುದೀಪ್(Kiccha Sudeep) ಸಿನಿಮಾಗಳಲ್ಲಿ ಎಷ್ಟೇ ಬ್ಯುಸಿ ಇದ್ರೂ ಸದ್ದಿಲ್ಲದೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿ ಸೈ ಎಂದೆನಿಸಿಕೊಂಡಿರುತ್ತಾರೆ. ಅಭಿಮಾನಿಗಳು, ಮಕ್ಕಳ ಸಹಾಯಕ್ಕೆ ಸದಾ ಸಿದ್ಧರಾಗಿರುತ್ತಾರೆ. ಇವರ ಇಂತಹ ಸಮಾಜಿಮುಖಿ ಕಾರ್ಯಕ್ರಮಗಳ ಜೊತೆಗೆ ಇವರ ಅಭಿಮಾನಿಗಳು ಕೂಡ ಕೈ ಜೋಡಿಸಿದ್ದು ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ನಿಂದ(All India Badshah Kiccha Sudeep Fans Association) ಸರ್ಕಾರಿ ಶಾಲೆಯ ಮೂರು ಕೊಠಡಿಗಳಿಗೆ ಸುಣ್ಣ ಬಣ್ಣ ಬಳಿದು, ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗಿದೆ.

ಸೆಪ್ಟೆಂಬರ್ 02ರಂದು ಕಿಚ್ಚ ಸುದೀಪ್ ತನ್ನ ಹುಟ್ಟಹಬ್ಬವನ್ನು ಆಚರಿಸಿಕೊಂಡಿದ್ದು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ನಟ ಸುದೀಪ ಅಭಿಮಾನಿಗಳು ಅವರ ಜನ್ಮ ದಿನವನ್ನ ವಿಶೇವಾಗಿ ಆಚರಿಸಿದರು. ತಮ್ಮ ನೆಚ್ಚಿನ ನಾಯಕ ನಟನ ಹುಟ್ಟುಹಬ್ಬ ಬಂತೆಂದರೆ ಸಾಕು ಹಾರ ತುರಾಯಿ, ಹಾಲಿನಿ ಅಭಿಷೇಕ, ಕುರಿ, ಕೋಳಿ, ಕೋಣ ಬಲಿ ನೀಡಿ ಅಭಿಮಾನ ತೋರ್ಪಡಿಸುವ ಅಭಿಮಾನಿಗಳ ನಡುವೆ, ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ವಿಭಿನ್ನವಾಗಿ ನಟ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬವನ್ನ ಆಚರಿಸಿದೆ.

ಉಚ್ಚಂಗಿದುರ್ಗದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮೂರು ಕೊಠಡಿಗಳಿಗೆ ಸುಣ್ಣ ಬಣ್ಣ ಬಳಿದು, ಮಕ್ಕಳಿಗೆ ಬೇಕಾಗುವ ಕಲಿಕಾ ಸಾಮಾಗ್ರಿಗಳನ್ನು ವಿತರಣೆ ಮಾಡುವ ಮೂಲಕ ತಮ್ಮ ನೆಚ್ಚಿನ ನಾಯಕ ನಟನ ಹುಟ್ಟು ಹಬ್ಬವನ್ನು ವಿಭಿನ್ನವಾಗಿ ಆಚರಿಸಿ ಗಮನ ಸೆಳೆದರು. ಸುದೀಪ್ ಅಭಿಮಾನಿಗಳ ಕಾರ್ಯಕ್ಕೆ ಗ್ರಾಮಸ್ಥರು, ಮಕ್ಕಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ವತಿಯಿಂದ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುತ್ತಿರುವುದು

ಇದನ್ನೂ ಓದಿ: ಕೊರೊನಾಗೆ ಸೆಡ್ಡು ಹೊಡೆದು ಹಳೇ ಚಾರ್ಮ್​ ಪಡೆದ ಸುದೀಪ್​; ಫೋಟೋ ನೋಡಿ ವಾವ್​ ಎಂದ ಫ್ಯಾನ್ಸ್​

ಕನ್ನಡ ಶಾಲೆಗಾಗಿ ಮತ್ತೊಂದು ಮಹತ್ವದ ಕಾರ್ಯ ಕೈಗೊಂಡ ಕಿಚ್ಚ ಸುದೀಪ್​ ಚಾರಿಟೇಬಲ್​ ಟ್ರಸ್ಟ್​