Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?

Kantara Box Office Collection: ಕರಾವಳಿ ನೆಲೆದ ಕಥೆಗೆ ಎಲ್ಲ ಪ್ರದೇಶದ ಜನರೂ ಮನಸೋತಿದ್ದಾರೆ. ರಿಷಬ್​ ಶೆಟ್ಟಿ ಅವರ ನಟನೆ, ನಿರ್ದೇಶನಕ್ಕೆ ತೆಲುಗು ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
ರಿಷಬ್ ಶೆಟ್ಟಿ, ಅಲ್ಲು ಅರವಿಂದ್
Follow us
TV9 Web
| Updated By: ಮದನ್​ ಕುಮಾರ್​

Updated on: Oct 18, 2022 | 7:36 AM

ದೇಶವೇ ತಿರುಗಿ ನೋಡುವಂತಹ ಸಿನಿಮಾಗಳನ್ನು ಚಂದನವನದ ನಿರ್ದೇಶಕರು ಮಾಡುತ್ತಿದ್ದಾರೆ. ಹಾಗಾಗಿ ಕನ್ನಡದ ಸಿನಿಮಾಗಳ ಮೇಲೆ ಪರಭಾಷೆ ಮಂದಿಗೆ ಒಂದು ಭರವಸೆ ಮೂಡಿದೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ ‘ಕಾಂತಾರ’ (Kantara) ಸಿನಿಮಾ. ಈ ಚಿತ್ರ ಕನ್ನಡದಲ್ಲಿ ಅಬ್ಬರಿಸುತ್ತಿರುವಾಗಲೇ ಪರಭಾಷೆಗಳಿಗೂ ಡಬ್​ ಆಗಿ ಉತ್ತಮ ಪ್ರದರ್ಶನ ನೀಡುತ್ತಿದೆ. ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ವರ್ಷನ್​ನಿಂದ ನಿರೀಕ್ಷೆಗೂ ಮೀರಿದ ಲಾಭ ಆಗುತ್ತಿದೆ. ತೆಲುಗು ಮಂದಿ ಈ ಚಿತ್ರವನ್ನು (Kantara Telugu) ಸಖತ್​ ಇಷ್ಟಪಡುತ್ತಿದ್ದಾರೆ. ಇದರಿಂದ ಅಲ್ಲು ಅರ್ಜುನ್​ ತಂದೆ ಅಲ್ಲು ಅರವಿಂದ್​ ಅವರ ಜೇಬು ತುಂಬುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಕಡೆಯಿಂದ ತೆಲುಗು ವಿತರಣೆ ಹಕ್ಕುಗಳನ್ನು ಖರೀದಿಸಿದ ಅಲ್ಲು ಅರವಿಂದ್​ (Allu Aravind) ಅವರು ಈ ಚಿತ್ರದಿಂದ ಸಖತ್​ ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ, ಅಲ್ಲು ಅರವಿಂದ್​ ಅವರು ‘ಕಾಂತಾರ’ ಚಿತ್ರದ ತೆಲುಗು ವಿತರಣೆ ಹಕ್ಕನ್ನು ಖರೀದಿಸಿದ್ದು ಕೇವಲ 3 ಕೋಟಿ ರೂಪಾಯಿಗೆ. ಈಗಾಗಲೇ ಅವರಿಗೆ ಬಾಕ್ಸ್​ ಆಫೀಸ್​ನಲ್ಲಿ ಅಷ್ಟು ಕಲೆಕ್ಷನ್​ ಆಗಿದೆ. ನಂತರ ಬರುತ್ತಿರುವುದೆಲ್ಲವೂ ಲಾಭದ ಲೆಕ್ಕ. ಹಾಗಾಗಿ, ಅವರ ಮುಖದಲ್ಲಿ ನಗು ಮೂಡಿದೆ ಎಂದು ಹೇಳಲಾಗುತ್ತಿದೆ.

ಕರಾವಳಿ ನೆಲೆದ ಕಥೆಗೆ ಎಲ್ಲ ಪ್ರದೇಶದ ಜನರೂ ಮನಸೋತಿದ್ದಾರೆ. ರಿಷಬ್​ ಶೆಟ್ಟಿ ಅವರ ನಟನೆ, ನಿರ್ದೇಶನಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತೆಲುಗು ಮಾತ್ರವಲ್ಲದೇ ಹಿಂದಿಯಲ್ಲೂ ಈ ಸಿನಿಮಾ ಗಮನಾರ್ಹ ಮಟ್ಟದಲ್ಲಿ ಕಲೆಕ್ಷನ್​ ಮಾಡುತ್ತಿದೆ. ಹೊರರಾಜ್ಯಗಳ ಚಿತ್ರಮಂದಿರಗಳು ಹೌಸ್​ಫುಲ್ ಆಗುತ್ತಿವೆ. ಇದು ಸ್ಯಾಂಡಲ್​ವುಡ್​ ಪಾಲಿಗೆ ಹೆಮ್ಮೆ ತಂದಿದೆ.

ಇದನ್ನೂ ಓದಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Sapthami Gowda: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ಹೆಚ್ಚಿತು ನಟಿ ಸಪ್ತಮಿ ಗೌಡ ಡಿಮ್ಯಾಂಡ್​
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​
Image
Rishab Shetty: ಐಎಂಡಿಬಿಯಲ್ಲಿ ಗಮ್ಮತ್​ ರೇಟಿಂಗ್​ ಪಡೆದ ‘ಕಾಂತಾರ’; ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ರಿಷಬ್​ ಸಿನಿಮಾ

ಉತ್ತರ ಭಾರತದಲ್ಲಿ ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ಸಿನಿಮಾ ನೋಡಿ ಬಂದ ಪ್ರೇಕ್ಷಕರು ಪಾಸಿಟಿವ್​ ವಿಮರ್ಶೆ ಹಂಚಿಕೊಳ್ಳುತ್ತಿದ್ದಾರೆ. ಅದರ ಪರಿಣಾಮವಾಗಿ ದಿನದಿಂದ ದಿನಕ್ಕೆ ಚಿತ್ರದ ಕಲೆಕ್ಷನ್​ ಹೆಚ್ಚುತ್ತಿದೆ. ಬಾಯಿ ಮಾತಿನ ಪ್ರಚಾರ ಈ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ. ವಿಜಯ್​ ಕಿರಗಂದೂರು ಅವರು ನಿರ್ಮಾಣ ಮಾಡಿರುವ ‘ಕಾಂತಾರ’ ಸಿನಿಮಾದಿಂದ ‘ಹೊಂಬಾಳೆ ಫಿಲ್ಸ್ಮ್​’ ಸಂಸ್ಥೆಗೆ ಬಹುಕೋಟಿ ರೂಪಾಯಿ ಲಾಭ ಆಗಿದೆ.

ಈ ಸಿನಿಮಾದಿಂದ ರಿಷಬ್​ ಶೆಟ್ಟಿ ಅವರಿಗೆ ದೇಶಾದ್ಯಂತ ಡಿಮ್ಯಾಂಡ್​ ಹೆಚ್ಚಿದೆ. ಅಚ್ಯುತ್​ ಕುಮಾರ್​, ಕಿಶೋರ್​, ಸಪ್ತಮಿ ಗೌಡ, ಮಾನಸಿ ಸುಧೀರ್​ ಮುಂತಾದವರ ನಟನೆಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಅಂತಿಮವಾಗಿ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ