‘ಕಾಂತಾರ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಬರಲಿ ಎಂಬುದು ನನ್ನ ಆಶಯವೂ ಆಗಿತ್ತು’; ಅಲ್ಲು ಅರ್ಜುನ್

‘ಮಾರುತಿ ನಗರ ಸುಬ್ರಮಣ್ಯಂ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಪ್ರೀ-ರಿಲೀಸ್ ಇವೆಂಟ್​ನಲ್ಲಿ ಅಲ್ಲು ಅರ್ಜುನ್ ಅವರು ಮಾತನಾಡಿದ್ದಾರೆ. ‘ನ್ಯಾಷನಲ್ ಅವಾರ್ಡ್​ ಗೆದ್ದ ಎಲ್ಲರಿಗೂ ಅಭಿನಂದನೆಗಳು’ ಎಂದಿರೋ ಅವರು ‘ಕಾಂತಾರ’ ತಂಡಕ್ಕೆ ಶುಭಾಶಯ ಕೋರಿದ್ದಾರೆ.

‘ಕಾಂತಾರ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಬರಲಿ ಎಂಬುದು ನನ್ನ ಆಶಯವೂ ಆಗಿತ್ತು’; ಅಲ್ಲು ಅರ್ಜುನ್
ರಿಷಬ್-ಅಲ್ಲು ಅರ್ಜುನ್

Updated on: Aug 23, 2024 | 7:05 AM

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಇದರಿಂದ ಅವರ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾಗೆ ಕನಿಷ್ಠ ಒಂದಾದರೂ ಅವಾರ್ಡ್​ ಸಿಕ್ಕೇ ಸಿಗುತ್ತದೆ ಅನ್ನೋದು ಅನೇಕರ ನಂಬಿಕೆ ಆಗಿತ್ತು. ಅದರಂತೆ ಆಗಿದೆ. ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಅವಾರ್ಡ್ ಸಿಕ್ಕರೆ, ‘ಕಾಂತಾರ’ ಚಿತ್ರಕ್ಕೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿದೆ. ಇಡೀ ತಂಡಕ್ಕೆ ಅಲ್ಲು ಅರ್ಜುನ್ ಅವರು ಅಭಿನಂದನೆ ತಿಳಿಸಿದ್ದಾರೆ

ಇತ್ತೀಚೆಗೆ ಹೈದರಾಬಾದ್​ನಲ್ಲಿ ‘ಮಾರುತಿ ನಗರ ಸುಬ್ರಹ್ಮಣ್ಯ’ ಚಿತ್ರದ ಪ್ರೀ ರೀಲೀಸ್ ಇವೆಂಟ್ ನಡೆದಿದೆ. ರಾವ್ ರಮೇಶ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ‘ಕಾಂತಾರ’ ತಂಡಕ್ಕೆ ಶುಭ ಕೋರಿದ್ದಾರೆ.

‘ನ್ಯಾಷನಲ್ ಅವಾರ್ಡ್​ ಗೆದ್ದ ಎಲ್ಲರಿಗೂ ಅಭಿನಂದನೆಗಳು. ನನಗೆ ಹಿಂದಿನ ವರ್ಷ ರಾಷ್ಟ್ರ ಪ್ರಶಸ್ತಿ ಬಂದಾಗ ಮುಂದಿನ ವರ್ಷ ಕಾಂತಾರ ಚಿತ್ರಕ್ಕೆ ಅವಾರ್ಡ್ ಬಂದರೆ ಚೆನ್ನಾಗಿರುತ್ತಿತ್ತು ಎಂದು ಮನಸಾರೆ ಅಂದುಕೊಂಡಿದ್ದೆ. ರಿಷಬ್ ಶೆಟ್ಟಿಗೂ ಅವಾರ್ಡ್ ಸಿಕ್ಕಿದೆ. ಅವರಿಗೂ ಅಭಿನಂದನೆ’ ಎಂದು ಅಲ್ಲು ಅರ್ಜುನ್ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಲ್ಲು ಅರ್ಜುನ್ ಅವರು ಕಳೆದ ವರ್ಷ ‘ಪುಷ್ಪ’ ಸಿನಿಮಾ ನಟನೆಗೆ ಅತ್ಯುತ್ತಮ ನಟ ಅವಾರ್ಡ್ ಪಡೆದುಕೊಂಡಿದ್ದರು. ಅವರಿಗೆ ಕನ್ನಡಿಗರೂ ಅಭಿನಂದನೆ ತಿಳಿಸಿದ್ದರು. ಈಗ ಕನ್ನಡದವರಿಗೆ ಅವಾರ್ಡ್ ಬಂದಾಗ ಅವರು ಮನಸಾರೆ ಹಾರೈಸಿದ್ದಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಾರೆ.

ಇದನ್ನೂ ಓದಿ: ‘ಬೇರೆಯದೇ ರೀತಿಯಲ್ಲಿ ಸಿನಿಮಾ ಬರ್ತಿದೆ’; ಸುಕುಮಾರ್ ಎದುರೇ ಘೋಷಿಸಿದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ ಎಂಬುದನ್ನು ಅವರು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಇನ್ನು ರಿಷಬ್ ಅವರು ‘ಕಾಂತಾರ: ಚಾಪ್ಟರ್ 1’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Fri, 23 August 24

ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us