AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಹಾದಿ ಅನುಸರಿಸಿದ ಅಲ್ಲು ಅರ್ಜುನ್​; ಪುಷ್ಪ ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್​

‘ಅಲಾ ವೈಕುಂಠಪುರಂಲೋ' ಸಿನಿಮಾ ನಂತರ ಅಲ್ಲು ಅರ್ಜುನ್​ 'ಪುಷ್ಪ' ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ 'ಪುಷ್ಪ' ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಯಶ್​ ಹಾದಿ ಅನುಸರಿಸಿದ ಅಲ್ಲು ಅರ್ಜುನ್​; ಪುಷ್ಪ ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್​
ಅಲ್ಲು ಅರ್ಜುನ್​-ಯಶ್​
ರಾಜೇಶ್ ದುಗ್ಗುಮನೆ
|

Updated on:May 06, 2021 | 5:27 PM

Share

ಬಾಹುಬಲಿ ಎರಡು ಭಾಗಗಳಲ್ಲಿ ತೆರೆಗೆ ಬಂದಿತ್ತು. ಯಶ್​ ನಟನೆಯ ಕೆಜಿಎಫ್​ ಕೂಡ ಎರಡು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಕೆಜಿಎಫ್​ ಚಾಪ್ಟರ್​-1 ಈಗಾಗಲೇ ರಿಲೀಸ್​ ಆಗಿದ್ದರೆ, ಜುಲೈನಲ್ಲಿ ಚಾಪ್ಟರ್​-2​ ರಿಲೀಸ್​ ಆಗುತ್ತಿದೆ. ಈಗ ಅಲ್ಲು ಅರ್ಜುನ್​ ಕೂಡ ಇದೇ ಹಾದಿ ಅನುಸರಿಸುತ್ತಿದ್ದಾರಂತೆ. ಪುಷ್ಪ ಸಿನಿಮಾ ಎರಡು ಪಾರ್ಟ್​ಗಳಲ್ಲಿ ತೆರೆಗೆ ಬರಲಿದೆ ಎನ್ನುವ ಸುದ್ದಿ ಹರಿದಾಡಿದೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ರಂಗಸ್ಥಲಂ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ರಂಗಸ್ಥಳಂ ಸಿನಿಮಾ ಕತೆ ಹಳ್ಳಿ ಹಿನ್ನೆಲೆಯಲ್ಲಿ ಸಾಗಿತ್ತು. ಪುಷ್ಪ ಸಿನಿಮಾ ಕಾಡಿನ ಹಿನ್ನೆಲೆ ಹೊಂದಿದೆ. ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ. ಇದೇ ಆಗಸ್ಟ್​ 13ರಂದು ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ. ಹೀಗಿರುವಾಗಲೇ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ.

ಕೆಜಿಎಫ್​ ಸಿನಿಮಾವನ್ನು ಎರಡು ಪಾರ್ಟ್​ ಮೂಲಕ ರಿಲೀಸ್​ ಮಾಡಬೇಕು ಎಂಬುದು ಪ್ರಿ-ಪ್ರೊಡಕ್ಷನ್​ ಹಂತದಲ್ಲೇ ನಿರ್ಧಾರ ಮಾಡಲಾಗಿತ್ತು. ಆದರೆ, ಪುಷ್ಪ ಸಿನಿಮಾ ಶೂಟಿಂಗ್​ ವೇಳೆ ನಿರ್ದೇಶಕ ಸುಕುಮಾರ್​ಗೆ ಈ ಆಲೋಚನೆ ಬಂದಿದೆಯಂತೆ. ಹೀಗಾಗಿ, ಈ ಸಿನಿಮಾವನ್ನು ಎರಡು ಪಾರ್ಟ್​ಗಳಲ್ಲಿ ರಿಲೀಸ್​ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇದಕ್ಕೆ ಅಲ್ಲು ಅರ್ಜುನ್​ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮೊದಲ ಪಾರ್ಟ್​ ಆಗಸ್ಟ್​ನಲ್ಲಿ ತೆರೆಗೆ ಬರಲಿದ್ದು, 2022 ಅಂತ್ಯದ ವೇಳೆಗೆ ಎರಡನೇ ಭಾಗ ತೆರೆಗೆ ಬರಲಿದೆ.

ಅಲ್ಲು ಅರ್ಜುನ್​ ನಟನೆಯ ಆರ್ಯ ಸಿನಿಮಾ ಎರಡು ಎರಡು ಪಾರ್ಟ್​ಗಳಲ್ಲಿ ತೆರೆಗೆ ಬಂದಿತ್ತು. ಆದರೆ, ಎರಡೂ ಪಾರ್ಟ್​ಗಳಿಗೆ ಒಂದಕ್ಕೊಂದು ಸಂಬಂಧ ಇರಲಿಲ್ಲ. ಇದನ್ನು ನಿರ್ದೇಶನ ಮಾಡಿದ್ದು ಸುಕುಮಾರ್​. ಬಾಹುಬಲಿ-1 ಹಾಗೂ ಬಾಹುಬಲಿ-2 ಎರಡೂ ಹಿಟ್​ ಆಗಿದ್ದವು. ಈಗ ಕೆಜಿಎಫ್​-1 ಹಿಟ್​ ಆಗಿದೆ. ಕೆಜಿಎಫ್​-2 ಮೇಲೆ ದೊಡ್ಡ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಪುಷ್ಪ ಸಿನಿಮಾದಲ್ಲಿ ಹೇಳುವ ವಿಚಾರ ಸಾಕಷ್ಟು ಇರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ:  ರಾಕಿಂಗ್ ಸ್ಟಾರ್ ಯಶ್​ಗೆ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆ ಸರಿಪಡಿಸೋ ಭರವಸೆ ನೀಡಿರೊ ಸಾರಿಗೆ ಸಚಿವ ಲಕ್ಷ್ಮಣ ಸವದಿ

ಕೆಜಿಎಫ್​-2 ಹಿಂದಿ ಅವತರಣಿಕೆ​ಗೆ ಯಶ್​ ಡಬ್​ ಮಾಡ್ತಾರಾ?; ಇಲ್ಲಿದೆ ಉತ್ತರ

Published On - 5:11 pm, Thu, 6 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!