AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಲ್ಫಾ’ ಟ್ರೇಲರ್​ನಲ್ಲಿ ಗಮನ ಸೆಳೆದ ಹೊಸ ಪ್ರತಿಭೆ ಹೇಮಂತ್; ಕಾರ್ತಿಕ್​ ಮಹೇಶ್​​ಗೆ ನೆಗೆಟಿವ್ ಪಾತ್ರ

ಹೇಮಂತ್ ಕುಮಾರ್ ‘ಆಲ್ಫಾ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಫೆಬ್ರವರಿ 20ಕ್ಕೆ ರಿಲೀಸ್ ಆಗಲಿರುವ ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಡ್ರಗ್ಸ್, ಪ್ರೇಮಕಥೆ ಒಳಗೊಂಡ ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೇಮಂತ್ ಫೈಟ್, ಡ್ಯಾನ್ಸ್‌ನಲ್ಲಿ ಶ್ರಮ ಹಾಕಿರುವುದನ್ನು ಟ್ರೇಲರ್‌ನಲ್ಲಿ ನೋಡಬಹುದು.

‘ಆಲ್ಫಾ’ ಟ್ರೇಲರ್​ನಲ್ಲಿ ಗಮನ ಸೆಳೆದ ಹೊಸ ಪ್ರತಿಭೆ ಹೇಮಂತ್; ಕಾರ್ತಿಕ್​ ಮಹೇಶ್​​ಗೆ ನೆಗೆಟಿವ್ ಪಾತ್ರ
ಹೇಮಂತ್-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on:Feb 07, 2026 | 2:14 PM

Share

ಕನ್ನಡ ಚಿತ್ರರಂಗಕ್ಕೆ ಹೊಸ ಹೊಸ ಪ್ರತಿಭೆಗಳ ಎಂಟ್ರಿ ಆಗುತ್ತಲೇ ಇರುತ್ತದೆ. ಈಗ ಹೇಮಂತ್ ಕುಮಾರ್ ಹೆಸರಿನ ಹೊಸ ಪ್ರತಿಭೆ ‘ಆಲ್ಫಾ’ ಸಿನಿಮಾ ಮೂಲಕ ಎಂಟ್ರಿ ಕೊಡಲು ರೆಡಿ ಆಗಿದ್ದಾರೆ. ಫೆಬ್ರವರಿ 20ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್ ಸಖತ್ ರಾ ಆಗಿದೆ.

ಹೇಮಂತ್ ಅವರು ‘ಆಲ್ಫಾ’ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಹಾಕಿದ್ದಾರೆ. ಅವರು ಫೈಟ್, ಡ್ಯಾನ್ಸ್​ ಶ್ರದ್ಧೆಯಿಂದ ಕಲಿತಿರೋದು ಟ್ರೇಲರ್ ಅಲ್ಲಿ ನೋಡಿದರೆ ಗೊತ್ತಾಗುತ್ತದೆ. ಟ್ರೇಲರ್ ನೋಡಿದರೆ ಡ್ರಗ್ಸ್ ಹಾಗೂ ಇತರ ವಿಷಯಗಳ ಬಗ್ಗೆ ನಿರ್ದೇಶಕರು ಹೇಳಲು ಹೊರಟಂತೆ ಇದೆ. ಈ ಚಿತ್ರದಲ್ಲಿ ಒಂದು ಸುಂದರ ಪ್ರೇಮಕಥೆ ಕೂಡ ಇದೆ.

ಇದನ್ನೂ ಓದಿ: ‘ಆಲ್ಫಾ ಮೆನ್ ಲವ್ ವೈಲೆನ್ಸ್’ ಸಿನಿಮಾ ಫಸ್ಟ್ ಲುಕ್; ಹೀರೋ ಆದ ಹೇಮಂತ್ ಕುಮಾರ್

‘ಆಲ್ಫಾ’ ಸಿನಿಮಾದಲ್ಲಿ ಕಾರ್ತಿಕ್ ನಟಿಸುತ್ತಿದ್ದಾರೆ ಎಂದಾಗಲೇ ಸಾಕಷ್ಟು ಚರ್ಚೆಗಳು ನಡೆದವು. ಈಗ ಸಿನಿಮಾದಲ್ಲಿ ಅವರ ಅವತಾರ ರಿವೀಲ್ ಆಗಿದೆ. ಈ ಸಿನಿಮಾದಲ್ಲಿ ಅವರದ್ದು ನೆಗೆಟಿವ್ ಪಾತ್ರ ಎಂಬುದು ಸ್ಪಷ್ಟವಾಗಿದೆ. ಆದರೆ, ಪಾತ್ರ ಪ್ರಾಮುಖ್ಯತೆ ಇದೆ ಎಂಬ ಕಾರಣಕ್ಕೆ ಅವರು ಸಿನಿಮಾನ ಒಪ್ಪಿಕೊಂಡಿದ್ದಾರೆ.

ಹೇಮಂತ್ ಕುಮಾರ್ ತಂದೆ ಆನಂದ್ ಕುಮಾರ್ ಅವರು ಮಗನಿಗಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ವಿಜಯ್ ಎನ್​ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಹೇಮಂತ್ ಜೊತೆ ಅಯಾನಾ, ಗೋಪಿಕಾ ಸುರೇಶ್, ಅಚ್ಯುತ್ ಕುಮಾರ್, ಬಾಲು ನಾಗೇಂದ್ರ, ಕಾರ್ತಿಕ್ ಮಹೇಶ್, ರಮೇಶ್ ಇಂದಿರಾ, ಗಿರಿರಾಜ್, ರಾಘು ಶಿವಮೊಗ್ಗ, ವಿನಯ್ ಬಿದ್ದಪ್ಪ ನಟಿಸಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಮಾಸ್ತಿ ಅವರು ಚಿತ್ರಕ್ಕೆ ಡೈಲಾಗ್ ಬರೆದಿದ್ದಾರೆ. ಫೆಬ್ರವರಿ 20ರಂದು ಈ ಚಿತ್ರವನ್ನು ಕಣ್ತುಂಬಿಕೊಳ್ಳಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:17 pm, Sat, 7 February 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!