AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಲ್ಫಾ ಮೆನ್ ಲವ್ ವೈಲೆನ್ಸ್’ ಸಿನಿಮಾ ಫಸ್ಟ್ ಲುಕ್; ಹೀರೋ ಆದ ಹೇಮಂತ್ ಕುಮಾರ್

ಹೇಮಂತ್ ಕಮಾರ್ ಅವರು ‘ಆಲ್ಫಾ ಮೆನ್ ಲವ್ ವೈಲೆನ್ಸ್’ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ವಿಜಯ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಫಸ್ಟ್​ ಲುಕ್ ಬಿಡುಗಡೆ ಮಾಡಲಾಗಿದೆ. ‘ಆಲ್ಫಾ ಮೆನ್ ಲವ್ ವೈಲೆನ್ಸ್’ ಸಿನಿಮಾದಲ್ಲಿ ಆ್ಯಕ್ಷನ್, ಕ್ರೈಮ್ ಕಹಾನಿ ಇರಲಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಆಲ್ಫಾ ಮೆನ್ ಲವ್ ವೈಲೆನ್ಸ್’ ಸಿನಿಮಾ ಫಸ್ಟ್ ಲುಕ್; ಹೀರೋ ಆದ ಹೇಮಂತ್ ಕುಮಾರ್
Hemanth Kumar
ಮದನ್​ ಕುಮಾರ್​
|

Updated on: Feb 26, 2025 | 3:50 PM

Share

‘ಆಲ್ಫಾ ಮೆನ್ ಲವ್ ವೈಲೆನ್ಸ್’ ಸಿನಿಮಾ ಅನೌನ್ಸ್ ಆಗಿದೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ಹೀರೋ ಹೇಮಂತ್ ಕಮಾರ್ ಅವರು ಕಾಲಿಟ್ಟಿದ್ದಾರೆ. ಸಖತ್ ಮಾಸ್ ಸಿನಿಮಾ ಇದಾಗಿದ್ದು, ಪೋಸ್ಟರ್ ಮೂಲಕ ನಟ ಹೇಮಂತ್ ಅವರು ಗಮನ ಸೆಳೆಯುತ್ತಿದ್ದಾರೆ. ಇಂದು (ಫೆಬ್ರವರಿ 26) ಶಿವರಾತ್ರಿ ಹಬ್ಬದ ಪ್ರಯುಕ್ತ ‘ಆಲ್ಫಾ ಮೆನ್ ಲವ್ ವೈಲೆನ್ಸ್’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಆ್ಯಕ್ಷನ್ ಜೊತೆಗೆ ಅಪ್ಪ-ಮಗನ ಎಮೋಷನ್ ಕೂಡ ಹೈಲೆಟ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ.

ನಿರ್ದೇಶಕ ವಿಜಯ್ ಅವರು ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಹೊಸ ಹೀರೋನನ್ನು ಪರಿಚಯ ಮಾಡುತ್ತಿದ್ದಾರೆ. ಈ ಮೊದಲು ‘ಗೀತಾ’ ಹಾಗೂ ‘ಹೊಯ್ಸಳ’ ಸಿನಿಮಾಗಳನ್ನು ನಿರ್ದೇಶಿಸಿದ್ದ ವಿಜಯ್ ಅವರಿಗೆ ಇದು 3ನೇ ಸಿನಿಮಾ. ಸದ್ಯ ‘ಆಲ್ಫಾ ಮೆನ್ ಲವ್ ವೈಲೆನ್ಸ್’ ಸಿನಿಮಾದ ಮೊದಲ ಲುಕ್ ರಿಲೀಸ್ ಆಗಿದೆ. ನಾಯಕ ಹೇಮಂತ್ ಅವರು ರಗಡ್ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.

‘ಆಲ್ಫಾ ಮೆನ್ ಲವ್ ವೈಲೆನ್ಸ್’ ಸಿನಿಮಾದಲ್ಲಿ ಆ್ಯಕ್ಷನ್ ಹಾಗೂ ಕ್ರೈಮ್ ಭಯಾನಕಥೆ ಎಷ್ಟಿರುತ್ತೆ ಎಂಬುದು ಪೋಸ್ಟರ್ ನೋಡಿದರೆ ತಿಳಿಯುತ್ತದೆ. ಈ ಚಿತ್ರದಲ್ಲಿ ಮೂರು ಪಾತ್ರಗಳು ಪ್ರಮುಖವಾಗಿ ಬರುವುದರಿಂದ ಆಲ್ಫಾ ಎಂದು ಟೈಟಲ್ ಇಡಲಾಗಿದೆ ಎಂದಿದ್ದಾರೆ ನಿರ್ದೇಶಕ ವಿಜಯ್. ‘ಆಲ್ಫಾ’ ಟೈಟಲ್ ಜೊತೆಗೆ ‘ಮೆನ್ ಲವ್ ವೈಲೆನ್ಸ್’ ಎಂಬ ಟ್ಯಾಗ್ ಲೈನ್ ಗಮನ ಸೆಳೆಯುತ್ತಿದೆ.

‘ಆಲ್ಫಾ ಮೆನ್ ಲವ್ ವೈಲೆನ್ಸ್’ ಚಿತ್ರದ ಮೂಲಕ ಆನಂದ್ ಕುಮಾರ್ ಅವರು ನಿರ್ಮಾಪಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಎಲ್ ಎ’ ನಿರ್ಮಾಣ ಸಂಸ್ಥೆ ಮೂಲಕ ‘ಆಲ್ಫಾ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಹೀರೋ ಆಗಿ ಎಂಟ್ರಿ ನೀಡುತ್ತಿರುವ ಹೀರೋ ಹೇಮಂತ್ ಕುಮಾರ್ ಅವರು ಸಿನಿಮಾಗಾಗಿ ಸಖತ್ ತಯಾರಿ ಮಾಡಿಕೊಂಡು ಬಂದಿದ್ದಾರೆ.

ಇದನ್ನೂ ಓದಿ: ಹಾಯಾಗಿ ದೆಹಲಿ, ಮುಂಬೈ ಸುತ್ತಾಡಲಿರುವ ಪವಿತ್ರಾ ಗೌಡ; ಸಿಕ್ತು ಕೋರ್ಟ್​ ಅನುಮತಿ

ನಿರ್ದೇಶಕ ಮತ್ತು ನಟ ರಾಘು ಶಿವಮೊಗ್ಗ ಅವರ ಬಳಿ ಹೇಮಂತ್ ಕುಮಾರ್ ನಟನೆಯ ತಯಾರಿ ನಡೆಸಿದ್ದಾರೆ. ಅರ್ಜುನ್ ಅವರ ಜತೆ ಫೈಟ್ ಅಭ್ಯಾಸ ಮಾಡಿದ್ದಾರೆ. ಭೂಷಣ್ ಪತ್ನಿ ಬಳಿ ಹೇಮಂತ್ ಕುಮಾರ್ ಡಾನ್ಸ್ ಕಲಿತಿದ್ದಾರೆ. ಅಲ್ಲದೇ ಮಾರ್ಶಲ್ ಆರ್ಟ್ಸ್​ ಕೂಡ ಕಲಿತು ಬಂದಿದ್ದಾರೆ. ಹೇಮಂತ್ ಅವರಿಗೆ ನಾಯಕಿಯಾಗಿ ಯಾರು ಅಭಿನಯಿಸಲಿದ್ದಾರೆ ಹಾಗೂ ಉಳಿದ ಪಾತ್ರವರ್ಗದಲ್ಲಿ ಯಾರೆಲ್ಲ ಇರಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ‘ಆಲ್ಫಾ ಮೆನ್ ಲವ್ ವೈಲೆನ್ಸ್’ ಚಿತ್ರಕ್ಕೆ ಕಾರ್ತಿಕ್ ಅವರ ಛಾಯಾಗ್ರಹಣ, ಅನೂಪ್ ಸೀಳಿನ್ ಅವರ ಸಂಗೀತ, ಮಾಸ್ತಿ ಅವರ ಸಂಭಾಷಣೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ