AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೆರಿಕಾ ಅಮೆರಿಕಾ 2’ ಚಿತ್ರ ಘೋಷಿಸಿದ ನಾಗತಿಹಳ್ಳಿ ಚಂದ್ರಶೇಖರ್

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಅಮೆರಿಕಾ ಅಮೆರಿಕಾ 2' ಚಿತ್ರ ಘೋಷಣೆಯಾಗಿದೆ. ಇದರ ಚಿತ್ರೀಕರಣ ಈಗಾಗಲೇ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ನಿರೂಪ್, ಪೃಥ್ವಿ ಅಂಬಾರ್ ಮತ್ತು ಶಾನ್ವಿ ಮುಖ್ಯ ಭೂಮಿಕೆಯಲ್ಲಿದ್ದು, ಸಹನಾ ವಿಜಯಕುಮಾರ್ ಅವರ 'ಕ್ಷಮೆ' ಕಾದಂಬರಿ ಆಧರಿತ ಚಿತ್ರ ಇದಾಗಿದೆ. KVN ಪ್ರೊಡಕ್ಷನ್ಸ್ ವಿತರಣೆಯ ಜವಾಬ್ದಾರಿ ಹೊತ್ತಿದ್ದು, ಸಿನಿರಸಿಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.

‘ಅಮೆರಿಕಾ ಅಮೆರಿಕಾ 2’ ಚಿತ್ರ ಘೋಷಿಸಿದ ನಾಗತಿಹಳ್ಳಿ ಚಂದ್ರಶೇಖರ್
ಅಮೆರಿಕಾ ಅಮೆರಿಕಾ
ರಾಜೇಶ್ ದುಗ್ಗುಮನೆ
|

Updated on: Jul 01, 2026 | 4:35 PM

Share

ಮುಖ್ಯಾಂಶಗಳು

  • 'ಅಮೆರಿಕಾ ಅಮೆರಿಕಾ 2' ಸಿನಿಮಾ ಘೋಷಿಸಿದ ನಾಗತಿಹಳ್ಳಿ ಚಂದ್ರಶೇಖರ್
  • ನಿರೂಪ್ ಭಂಡಾರಿ, ಪೃಥ್ವಿ ಅಂಬಾರ್ ಹಾಗೂ ಶಾನ್ವಿ ಶ್ರೀವಾಸ್ತವ್ ಕಾಂಬಿನೇಷನ್‌ನಲ್ಲಿ ಮೂಡಿಬರಲಿದೆ ಹೊಸ ಕಥೆ
  • ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ಸ್ ವಿತರಣೆ

ಕನ್ನಡ ಚಿತ್ರರಂಗದ ಸಾರ್ವಕಾಲಿಕ ಕ್ಲಾಸಿಕ್ ಸಿನಿಮಾಗಳಲ್ಲಿ ಒಂದಾದ ‘ಅಮೆರಿಕಾ ಅಮೆರಿಕಾ’ (America America) ಸೃಷ್ಟಿಸಿದ್ದ ಹವಾ ಅಷ್ಟಿಷ್ಟಲ್ಲ. ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆ್ಯಕ್ಷನ್ ಕಟ್ ಹೇಳಿದ್ದ ಆ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೂಪರ್ ಹಿಟ್ ಆಗಿತ್ತು. ಇದೀಗ ‘ಅಮೆರಿಕಾ ಅಮೆರಿಕಾ 2’ ಸಿನಿಮಾ ಸಿದ್ಧವಾಗುತ್ತಿದ್ದು, ಸಿನಿರಸಿಕರಲ್ಲಿ ಭಾರೀ ಕುತೂಹಲ ಹಾಗೂ ಭರಪೂರ ನಿರೀಕ್ಷೆ ಮೂಡಿಸಿದೆ. ಸದ್ಯದ ಮಾಹಿತಿ ಪ್ರಕಾರ, ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್ ಈಗಾಗಲೇ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ನಾಗತಿಹಳ್ಳಿ ಚಂದ್ರಶೇಖರ್ ಅವರು ಟೈಟಲ್ ಏನಿರಬಹುದು ಎಂದು ಊಹಿಸುವಂತೆ ಪೋಸ್ಟ್ ಮಾಡಿದ್ದರು. ‘ಅಮೆರಿಕಾ ಅಮೆರಿಕಾ’, ‘ಅಮೃತಧಾರೆ’, ‘ನನ್ನ ಪ್ರೀತಿಯ ರಾಮು’, ‘ಮಾತಾಡ್ ಮಾತಾಡು ಮಲ್ಲಿಗೆ’ ಚಿತ್ರ ತಂಡದಿಂದ ಜುಲೈ 1ರಂದು ಹೊಸ ಟೈಟಲ್ ರಿವೀಲ್ ಮಾಡೋದಾಗಿ ತಿಳಿಸಿದ್ದರು. ಇದಕ್ಕೆ ಉತ್ತರ ಸಿಕ್ಕಿದೆ. ‘ಅಮೆರಿಕಾ ಅಮೆರಿಕಾ 2’ ಟೈಟಲ್ ಕೇಳಿ ಅನೇಕರಲ್ಲಿ ಕುತೂಹಲ ಮೂಡಿದೆ.

ತಾರಾಗಣದ ಬಗ್ಗೆ ವಿವರ

ಈ ರೋಮ್ಯಾಂಟಿಕ್ ಹಾಗೂ ಎಮೋಷನಲ್ ಡ್ರಾಮಾದಲ್ಲಿ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ತಾರೆಗಳು ಮುಖ್ಯ ಭೂಮಿಕೆಯಲ್ಲಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರುವ ನಿರೂಪ್ ಇಲ್ಲಿ ನಾಯಕನಾಗಿ ನಟಿಸಿದ್ದಾರೆ. ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಮತ್ತೊಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಗ್ಲಾಮರ್ ಹಾಗೂ ನಟನೆಯ ಮೂಲಕ ಮೋಡಿ ಮಾಡಿರುವ ಶಾನ್ವಿ, ಈ ಚಿತ್ರದಲ್ಲಿ ನಾಯಕಿಯಾಗಿ ಕಮಾಲ್ ಮಾಡಲಿದ್ದಾರೆ.

ಅಮೆರಿಕಾ ಅಮೆರಿಕಾ ಪೋಸ್ಟರ್

ಕಾದಂಬರಿ ಆಧಾರಿತ ಸಿನಿಮಾ

ವಿಶೇಷವೆಂದರೆ, ಈ ಚಿತ್ರವು ಖ್ಯಾತ ಲೇಖಕಿ ಸಹನಾ ವಿಜಯಕುಮಾರ್ ಅವರ ಜನಪ್ರಿಯ ಕಾದಂಬರಿ ‘ಕ್ಷಮೆ’ಯನ್ನು ಆಧರಿಸಿ ತೆರೆಗೆ ಬರುತ್ತಿದೆ. ನಾಗತಿಹಳ್ಳಿ ಚಂದ್ರಶೇಖರ್ ಅವರು ಕಾದಂಬರಿಯ ಕಥಾಹಂದರವನ್ನು ಇಂದಿನ ಟ್ರೆಂಡ್‌ಗೆ ತಕ್ಕಂತೆ ಅದ್ಭುತವಾಗಿ ತೆರೆಯ ಮೇಲೆ ತರಲು ಸಜ್ಜಾಗಿದ್ದಾರೆ. ಇತ್ತೀಚೆಗೆ ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ. ಆದರೆ, ನಾಗತಿಹಳ್ಳಿ ಟ್ರೆಂಡ್ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

ಇದನ್ನೂ ಓದಿ: ಅಮೆರಿಕಾ ಅಮೆರಿಕಾ ಚಿತ್ರಕ್ಕೆ 25 ವರ್ಷ; ನಾಗತಿಹಳ್ಳಿಗೆ ಈ ಅದ್ಭುತ ಕಥೆ ಹೊಳೆದಿದ್ದು ಹೇಗೆ?

ಕೆವಿಎನ್ ಪ್ರೊಡಕ್ಷನ್ಸ್ ಸಾಥ್

ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ ಹಾಗೂ ದೊಡ್ಡ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯದಲ್ಲೇ ಪ್ರಚಾರ ಕಾರ್ಯ ಹಾಗೂ ಬಿಡುಗಡೆಯ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿ ನೀಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!