ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಅತಿಥಿ? ಬಾಲಿವುಡ್ ನಟನಿಗೆ ಆಹ್ವಾನ

ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿ ಇತ್ತೀಚೆಗೆ ಅಮಿತಾಭ್ ಬಚ್ಚನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅಮಿತಾಭ್ ಖುಷಿಯಿಂದ ಆಮಂತ್ರಣ ಸ್ವೀಕಾರ ಮಾಡಿದ್ದು, ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ, ಅವರು ಈ ಜಾತ್ರೆಗೆ ಬರೋ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ.

ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಅತಿಥಿ? ಬಾಲಿವುಡ್ ನಟನಿಗೆ ಆಹ್ವಾನ
ಅಮಿತಾಭ್​ಗೆ ಆಹ್ವಾನ ನೀಡಿದ ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ರಾಜೇಶ್ ದುಗ್ಗುಮನೆ

Updated on:Nov 16, 2024 | 11:32 AM

ಪ್ರಸಿದ್ಧ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಪ್ರತಿವರ್ಷವೂ ಅದ್ಧೂರಿಯಾಗಿ ನೆರವೇರುತ್ತದೆ. ಪ್ರತಿ ವರ್ಷ ಇದಕ್ಕೆ ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಈಬಾರಿಯ ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿ ಅಮಿತಾಭ್​ಗೆ ಆಹ್ವಾನ ಪತ್ರ ನೀಡಿದೆ.

ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿಯವರು ಇತ್ತೀಚೆಗೆ ಅಮಿತಾಭ್​ ಬಚ್ಚನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅಮಿತಾಭ್ ಖುಷಿಯಿಂದ ಆಮಂತ್ರಣ ಸ್ವೀಕಾರ ಮಾಡಿದ್ದು, ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ, ಅವರು ಈ ಜಾತ್ರೆಗೆ ಬರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಗವಿಸಿದ್ದೇಶ್ವರ ಮಠದ ಜಾತ್ರೆ ದಕ್ಷಿಣ ಭಾರತದ ಕುಂಭ ಮೇಳ ಎಂದೆ ಖ್ಯಾತಿ ಪಡೆದಿದೆ. ಜನವರಿ 15ರಂದು ಈ ಜಾತ್ರೆ ನಡೆಯಲಿದೆ. ಒಂದೊಮ್ಮೆ ಅಮಿತಾಭ್ ಬಚ್ಚನ್ ಜಾತ್ರೆಗೆ ಆಗಮಿಸಿದರೆ ಇದರ ಮೆರಗು ಮತ್ತಷ್ಟು ಹೆಚ್ಚಲಿದೆ. ರಾಷ್ಟ್ರಮಟ್ಟದಲ್ಲಿ ಇದು ಸುದ್ದಿ ಆಗಲಿದೆ.

ಇದನ್ನೂ ಓದಿ: ವಿಚ್ಛೇದನ ಪ್ರಕರಣ: ಜಡ್ಜ್​ ಸಲಹೆಯಂತೆ ಕೊಪ್ಪಳ ಗವಿಮಠಕ್ಕೆ ಭೇಟಿ ನೀಡಿದ ದಂಪತಿ, ಮುಂದೇನಾಯ್ತು?

ಪ್ರತಿ ವರ್ಷವೂ ಗವಿಸಿದ್ದೇಶ್ವರ ಮಠದಲ್ಲಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರುತ್ತದೆ. ಲಕ್ಷಾಂತರ ಮಂದಿ ಜಾತ್ರೆಗೆ ಆಗಮಿಸುತ್ತಾರೆ. ಬರುವ ಎಲ್ಲಾ ಭಕ್ತಾದಿಗಳಿಗೆ ಊಟದ ವ್ಯವಸ್ಥೆ ಇರುತ್ತದೆ. ಅನ್ನ ದಾಸೋಹವನ್ನು ಮಠದ ವತಿಯಿಂದಲೇ ನೆರವೇರಿಸಲಾಗುತ್ತದೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದರೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಅನ್ನೋದು ವಿಶೇಷ.

ಅಮಿತಾಭ್ ಬಚ್ಚನ್ ಸಿನಿಮಾ ವಿಚಾರಕ್ಕೆ ಬರೋದಾದರೆ ಅವರು ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಅಶ್ವತ್ಥಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಇದರ ಜೊತೆಗೆ  ಅವರು ‘ಕೌನ್ ಬನೇಗಾ ಕರೋಡ್ಪತಿ’ಯ 16ನೇ ಸೀಸನ್ ನಡೆಸಿಕೊಡುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:13 am, Sat, 16 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ