Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

Amitabh Bachchan | Vikrant Rona: ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾದ ಟ್ರೇಲರ್​ ಅನ್ನು ಅಮಿತಾಭ್​ ಬಚ್ಚನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ.

Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ
ಕಿಚ್ಚ ಸುದೀಪ್, ಜಾಕ್ವೆಲಿನ್ ಫರ್ನಾಂಡಿಸ್, ಅಮಿತಾಭ್ ಬಚ್ಚನ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 27, 2022 | 1:11 PM

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಿಲ್ಲ. ಅನೇಕ ವರ್ಷಗಳ ಹಿಂದೆಯೇ ಅವರು ಪರಭಾಷೆಯಲ್ಲಿ ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದರು. ಈಗ ಅವರು ನಟಿಸಿರುವ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಏಕಕಾಲಕ್ಕೆ ಕನ್ನಡದ ಜೊತೆ ಬೇರೆ ಬೇರೆ ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗಿನಲ್ಲಿ ಜುಲೈ 28ರಂದು ರಿಲೀಸ್​ ಆಗಲಿರುವ ಈ ಸಿನಿಮಾಗೆ ಬಾಲಿವುಡ್​ ದಿಗ್ಗಜ ಅಮಿತಾಭ್​ ಬಚ್ಚನ್​ (Amitabh Bachchan) ಕೂಡ ಸಾಥ್​ ನೀಡಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾದ ಟ್ರೇಲರ್​ ಹಂಚಿಕೊಳ್ಳುವ ಮೂಲಕ ‘ಬಿಗ್​ ಬಿಗ್​’ ಬೆಂಬಲ ನೀಡಿದ್ದಾರೆ. ಇದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ.

ಇದನ್ನೂ ಓದಿ
Image
Kichcha Sudeep: ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ
Image
Vikrant Rona: ಮುಂಬೈನಲ್ಲಿ ಸುದೀಪ್​ ಜತೆ ರಕ್ಕಮ್ಮ ಜಾಕ್ವೆಲಿನ್​ ಫರ್ನಾಂಡಿಸ್​ ಮಿರಿಮಿರಿ ಮಿಂಚಿಂಗ್
Image
‘ವಿಕ್ರಾಂತ್​ ರೋಣ’ ರಿಲೀಸ್​ ಸಮಯದಲ್ಲಿ ಸುದೀಪ್​ಗೆ ಸ್ಟ್ರೆಸ್​ ಇದೆಯಾ? ನೇರ ಉತ್ತರ ನೀಡಿದ ಕಿಚ್ಚ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

ಈ ಹಿಂದೆ ‘ರಣ್​’ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ಮತ್ತು ಕಿಚ್ಚ ಸುದೀಪ್​ ಅವರು ಜೊತೆಯಾಗಿ ನಟಿಸಿದ್ದರು. ಆ ದಿನಗಳಿಂದಲೂ ಅವರ ನಡುವೆ ಬಾಂಧವ್ಯ ಇದೆ. ಈಗ ಕಿಚ್ಚನ ಸಿನಿಮಾ ಬಗ್ಗೆ ಅವರು ಟ್ವೀಟ್​ ಮಾಡಿರುವುದರಿಂದ ಹಿಂದಿ ಪ್ರೇಕ್ಷಕರ ವಲಯದಲ್ಲಿ ಈ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. ಬಹಳ ಅದ್ದೂರಿಯಾಗಿ ‘ವಿಕ್ರಾಂತ್​ ರೋಣ’ ಬಿಡುಗಡೆಗೆ ಪ್ಲ್ಯಾನ್​ ಮಾಡಲಾಗಿದೆ.

ಈ ಸಿನಿಮಾದಲ್ಲಿ ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ‘ರಾರಾ ರಕ್ಕಮ್ಮ..’ ಹಾಡಿನ ಜೊತೆಗೆ ಒಂದು ದೃಶ್ಯದಲ್ಲೂ ಅವರು ಅಭಿನಯಿಸಿದ್ದಾರೆ ಎಂಬುದು ವಿಶೇಷ. ಈ ಹಾಡು ಈಗಾಗಲೇ ಧೂಳೆಬ್ಬಿಸಿದೆ. ಕೆಲವೇ ದಿನಗಳ ಹಿಂದೆ ಬಾಲಿವುಡ್​ ನಟ ರಿತೇಶ್​ ದೇಶಮುಖ್ ಅವರು ಈ ಗೀತೆಗೆ ರೀಲ್ಸ್​ ಮಾಡಿದ್ದರು. ಆ ಮೂಲಕ ಅವರು ತಮ್ಮ ಗೆಳೆಯ ಸುದೀಪ್​ಗೆ ವಿಶ್​ ಮಾಡಿದ್ದರು. ಈ ಎಲ್ಲ ಕಾರಣದಿಂದಾಗಿ ರಿಲೀಸ್​ಗೂ ಮುನ್ನವೇ ‘ವಿಕ್ರಾಂತ್​ ರೋಣ’ ಸಿನಿಮಾ ಬಾಲಿವುಡ್​ ಮಂದಿಯ ಗಮನ ಸೆಳೆದಿದೆ.

ನಿರ್ಮಾಪಕ ಜಾಕ್​ ಮಂಜು ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರಿಗೆ ಅಲಂಕಾರ್​ ಪಾಂಡಿಯನ್​ ಸಾಥ್​ ನೀಡಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದೆ. 3ಡಿ ಟ್ರೇಲರ್​ ನೋಡಿದ ಅನೇಕ ಸೆಲೆಬ್ರಿಟಿಗಳು ‘ವಿಕ್ರಾಂತ್​ ರೋಣ’ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಅಭಿಮಾನಿಗಳು ಈ ಸಿನಿಮಾವನ್ನು ನೋಡಲು ಕಾತರದಿಂದ ಕಾದಿದ್ದಾರೆ. ನಿರೂಪ್​ ಭಂಡಾರಿ, ನೀತಾ ಅಶೋಕ್​ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Sudeep: ‘ನಾನು-ಶಿವಣ್ಣ ಕೆಲವು ಸಮಯ ಮಾತಾಡ್ತಾ ಇರಲಿಲ್ಲ, ಕಾರಣ ಹುಡುಕ್ತಾ ಹೋದ್ರೆ..’; ಸುದೀಪ್​ ನೇರ ಮಾತು

Kichcha Sudeep: ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ

Published On - 12:46 pm, Mon, 27 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ