ಅಮೃತಾ ಪ್ರೇಮ್ ಹುಟ್ಟುಹಬ್ಬಕ್ಕೆ ರಿಲೀಸ್ ಆಯ್ತು ‘ಟಗರು ಪಲ್ಯ’ ಚಿತ್ರದ ಹೊಸ ಪೋಸ್ಟರ್

Tagaru Palya Movie: ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ಟಗರು ಪಲ್ಯ’ ಸಿದ್ಧಗೊಳ್ಳುತ್ತಿದೆ. ಉಮೇಶ್ ಕೆ ಕೃಪ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ನಟಿಯಾಗಿ ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ

ಅಮೃತಾ ಪ್ರೇಮ್ ಹುಟ್ಟುಹಬ್ಬಕ್ಕೆ ರಿಲೀಸ್ ಆಯ್ತು ‘ಟಗರು ಪಲ್ಯ’ ಚಿತ್ರದ ಹೊಸ ಪೋಸ್ಟರ್
ಅಮೃತಾ ಪ್ರೇಮ್ ಅವರ ‘ಟಗರು ಪಲ್ಯ’ ಪೋಸ್ಟರ್
Follow us
ರಾಜೇಶ್ ದುಗ್ಗುಮನೆ
|

Updated on: Jan 23, 2023 | 3:40 PM

ನೆನಪಿರಲಿ ಪ್ರೇಮ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಮಗಳು ಅಮೃತಾ ಪ್ರೇಮ್ (Amrutha Prem) ಅವರು ಈಗ ‘ಟಗರು ಪಲ್ಯ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಇಂದು (ಜನವರಿ 23) ಅಮೃತಾ ಪ್ರೇಮ್ ಅವರ ಜನ್ಮದಿನ. ಈ ವಿಶೇಷ ದಿನಕ್ಕೆ ‘ಟಗರು ಪಲ್ಯ’ ಚಿತ್ರದ (Tagaru Palya Movie) ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್​ನಲ್ಲಿ ಸೀರೆ ಉಟ್ಟು ಅಮೃತಾ ಗಮನ ಸೆಳೆದಿದ್ದಾರೆ.

ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ಟಗರು ಪಲ್ಯ’ ಸಿದ್ಧಗೊಳ್ಳುತ್ತಿದೆ. ಉಮೇಶ್ ಕೆ ಕೃಪ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ನಟಿಯಾಗಿ ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರು ಈ ಬಾರಿ ಕಲಾವಿದೆಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ವಿಶೇಷ. ಚಿತ್ರತಂಡದವರು ಹೊಸ ಪೋಸ್ಟರ್ ಮೂಲಕ ಅಮೃತಾಗೆ ಶುಭಕೋರಿದ್ದಾರೆ. ಅನೇಕರು ನಟಿಗೆ ಶುಭಕೋರುತ್ತಿದ್ದಾರೆ.

‘ಟಗರು ಪಲ್ಯ’ ಚಿತ್ರದಲ್ಲಿ ಅಮೃತಾ ಪ್ರೇಮ್ ಅವರು ಹಳ್ಳಿ ಹುಡುಗಿ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಆ ಪಾತ್ರವನ್ನು ಪ್ರತಿನಿಧಿಸುವಂತಿದೆ ಹೊಸ ಪೋಸ್ಟರ್​. ಹಳದಿ ಬಣ್ಣದ ಸೀರೆ ಉಟ್ಟು ಅವರು ಗಮನ ಸೆಳೆದಿದ್ದಾರೆ. ಈ ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಮಂಡ್ಯ ಭಾಗದಲ್ಲಿ ಕಥೆ ಸಾಗುತ್ತದೆ. ಮಂಡ್ಯ ಭಾಗದ ಭಾಷೆಯನ್ನು ಅಮೃತಾ ಕಲಿತಿದ್ದಾರೆ.

ಇದನ್ನೂ ಓದಿ
Image
Nepotism: ಡಾಲಿ ಮೇಲೆ ನೆಪೋಟಿಸಂ ಆರೋಪ; ಪ್ರೇಮ್​ ಪುತ್ರಿಗೆ ಚಾನ್ಸ್​ ನೀಡಿದ್ದಕ್ಕೆ ನೆಟ್ಟಿಗರ ಟೀಕೆ
Image
Nenapirali Prem: ‘ನಾನು ಟ್ರೆಂಡ್​ನಲ್ಲಿ ಇರುವಾಗ ಮಗಳು ಹೀರೋಯಿನ್​ ಆಗಿದ್ದು ಖುಷಿ ನೀಡಿದೆ’: ‘ನೆನಪಿರಲಿ’ ಪ್ರೇಮ್​
Image
Amrutha Prem: ಚಿತ್ರರಂಗಕ್ಕೆ ‘ನೆನಪಿರಲಿ’ ಪ್ರೇಮ್​ ಪುತ್ರಿ ಎಂಟ್ರಿ; ಡಾಲಿ ನಿರ್ಮಾಣದ ಸಿನಿಮಾದಲ್ಲಿ ಅಮೃತಾ ನಟನೆ

ಡಾಲಿ ಧನಂಜಯ್ ಅವರು ತಮ್ಮ ‘ಡಾಲಿ ಪಿಕ್ಚರ್ಸ್​’ ಮೂಲಕ ಹೊಸಬರಿಗೆ ಅವಕಾಶ ನೀಡುತ್ತಿದ್ದಾರೆ. ಅವರು ನಿರ್ಮಾಪಕರಾಗಿ ಯಶಸ್ಸು ಕಂಡಿದ್ದಾರೆ. ಈಗ ಡಾಲಿ ಪಿಕ್ಚರ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾ ‘ಟಗರು ಪಲ್ಯ’. ಈ ಬಾರಿ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆಯಾಗಿದೆ. ‘ಇಕ್ಕಟ್’ ಖ್ಯಾತಿಯ ನಾಗಭೂಷಣ್ ಕೂಡ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ.

‘ಟಗರು ಪಲ್ಯ’ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದು, ಎಸ್. ಕೆ. ರಾವ್ ಛಾಯಾಗ್ರಹಣ ಚಿತ್ರಕ್ಕಿದೆ. ನಾಗಭೂಷಣ್-ಅಮೃತಾ ಜತೆಗೆ, ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ