ಈಡೇರಿತು ಹಲವು ವರ್ಷದ ಬೇಡಿಕೆ, ನಟ ಅನಂತ್​ ನಾಗ್​ಗೆ ಪದ್ಮಭೂಷಣ

|

Updated on: Jan 25, 2025 | 10:22 PM

Padma Awards 2025: ಪದ್ಮ ಪ್ರಶಸ್ತಿಗಳು ಘೊಷಣೆ ಆದಾಗೆಲ್ಲವೂ ಕನ್ನಡ ಚಿತ್ರರಂಗವನ್ನು ನಿರ್ಲಕ್ಷ ಮಾಡಿರುವ ಆರೋಪಗಳು ಕೇಳಿ ಬರುತ್ತಿದ್ದವು. ವಿಶೇಷವಾಗಿ ದಶಕಗಳಿಂದಲೂ ಕಲಾಸೇವೆಯಲ್ಲಿ ತೊಡಗಿಸಿಕೊಂಡಿರುವ, ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡದೇ ಇರುವ ಬಗ್ಗೆ ಬೇಸರ ವ್ಯಕ್ತಪಡಿಸುತ್ತಲೇ ಬರಲಾಗಿತ್ತು. ಆದರೆ ಈ ವರ್ಷ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

ಈಡೇರಿತು ಹಲವು ವರ್ಷದ ಬೇಡಿಕೆ, ನಟ ಅನಂತ್​ ನಾಗ್​ಗೆ ಪದ್ಮಭೂಷಣ
Anant Nag
Follow us on

ಪ್ರತಿ ಭಾರಿ ಪದ್ಮ ಪ್ರಶಸ್ತಿ ಘೋಷಣೆಯಾದಾಗಲೂ ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಬಗ್ಗೆ ಚರ್ಚೆಗಳು ಏರುತ್ತಲೇ ಇದ್ದವು. ಇಂದು (ಜನವರಿ 25) ಕೇಂದ್ರ ಸರ್ಕಾರ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು, ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ರಾಜಕಾರಣಿ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಹಿರಿಯ ನಟ ಅನಂತ್ ನಾಗ್ ಜೊತೆಗೆ ಕನ್ನಡದ ಪ್ರತಿಭಾವಂತ ಸಂಗೀತ ನಿರ್ದೇಶಕ ರಿಕಿ ಕೇಜ್ ಅವರಿಗೂ ಸಹ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.

ಹತ್ತೊಂಬತ್ತು ಮಂದಿಗೆ ಪದ್ಮಭೂಷಣ ಪ್ರಶಸ್ತಿಗಳನ್ನು ಇಂದು ಕೇಂದ್ರ ಸರ್ಕಾರ ಘೋಷಿಸಿದ್ದು, ಅದರಲ್ಲಿ ಕಲಾ ವಿಭಾಗದಲ್ಲಿ ಕನ್ನಡ ಚಿತ್ರರಂಗದ ಜನಪ್ರಿಯ ಮತ್ತು ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಆಗಿದೆ. 113 ಮಂದಿಗೆ ಪದ್ಮಶ್ರೀ ಪ್ರಶಸ್ತಿಗಳ ಘೋಷಣೆಯಾಗಿದ್ದು, ಖ್ಯಾತ ಸಂಗೀತ ನಿರ್ದೇಶಕ, ಮೂರು ಗ್ರ್ಯಾಮಿ ಪ್ರಶಸ್ತಿಗಳ ವಿಜೇತ ರಿಕ್ಕಿ ಕೇಜ್ ಅವರಿಗೂ ಸಹ ಪದ್ಮಶ್ರೀ ಪ್ರಶಸ್ತಿಯನ್ನು ಅವರ ಕಲಾ ಸೇವೆಯನ್ನು ಗುರುತಿಸಿ ನೀಡಲಾಗಿದೆ.

ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕರ್ನಾಟಕದಲ್ಲಿ ನೆಲೆಸಿರುವ ಖ್ಯಾತ ವಯಲಿನ್ ವಾದಕ ಕ್ಷ್ಮೀನಾರಾಯಣ ಸುಬ್ರಮಣ್ಯಂ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಖ್ಯಾತ, ಹಾಸನ್ ರಘು, ವೆಂಕಪ್ಪ ಅಂಬಾಜಿ ಅವರುಗಳಿಗೂ ಸಹ ಕಲಾ ವಿಭಾಗದಲ್ಲಿ ಪದ್ಮಶ್ರೀ ಘೋಷಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:31 pm, Sat, 25 January 25