Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದ್ಮಭೂಷಣ ಪ್ರಶಸ್ತಿಯನ್ನು ಕರ್ನಾಟಕ ಜನರಿಗೆ ಅರ್ಪಿಸಿದ ಅನಂತ್ ನಾಗ್

Anant Nag: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಆಗಿದೆ. ಕನ್ನಡಿಗರು ಹಲವು ವರ್ಷಗಳಿಂದಲೂ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂದು ಒತ್ತಾಯಿಸಿದ್ದರು. ಇದೀಗ ಕೊನೆಗೂ ಅನಂತ್ ನಾಗ್ ಅವರಿಗೆ ಪ್ರಶಸ್ತಿ ಘೋಷಣೆ ಆಗಿದೆ. ಪ್ರಶಸ್ತಿ ಘೋಷಣೆ ಬಳಿಕ ಮೊದಲ ಬಾರಿಗೆ ಅನಂತ್ ನಾಗ್ ಪ್ರತಿಕ್ರಿಯೆ ನೀಡಿದ್ದಾರೆ.

ಪದ್ಮಭೂಷಣ ಪ್ರಶಸ್ತಿಯನ್ನು ಕರ್ನಾಟಕ ಜನರಿಗೆ ಅರ್ಪಿಸಿದ ಅನಂತ್ ನಾಗ್
Anant Nag
Follow us
ಮಂಜುನಾಥ ಸಿ.
|

Updated on:Jan 26, 2025 | 9:57 AM

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬುದು ಹಲವು ವರ್ಷಗಳ ಆಗ್ರಹವಾಗಿತ್ತು. ಪ್ರತಿ ಬಾರಿ ಪದ್ಮ ಪ್ರಶಸ್ತಿಗಳ ಘೊಷಣೆ ಆದಾಗಲೂ ಸಹ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬ ಕೂಗು ಕರ್ನಾಟಕದಿಂದ ಏಳುತ್ತಿತ್ತು. ಕೊನೆಗೆ ಈ ವರ್ಷ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಪದ್ಮ ಪ್ರಶಸ್ತಿ ದೊರಕಿದ ಬಳಿಕ ಪ್ರತಿಕ್ರಿಯೆ ನೀಡಿರುವ ಅನಂತ್ ನಾಗ್, ಪ್ರಶಸ್ತಿಯನ್ನು ಕರ್ನಾಟಕದ ಜನರಿಗೆ ಅರ್ಪಿಸಿದ್ದಾರೆ.

ಪ್ರಶಸ್ತಿ ಘೋಷಣೆಯಾದ ಬಳಿಕ ಮಾತನಾಡಿರುವ ಅನಂತ್ ನಾಗ್, ‘ಈ ಪ್ರಶಸ್ತಿಯನ್ನು ನಾನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ’ ಎಂದಿದ್ದಾರೆ. ಪ್ರಶಸ್ತಿ ಘೋಷಣೆಯಾದ ಬಳಿಕ ಒಂದು ರೀತಿಯ ನಿರಾಳ ಭಾವ ನನ್ನಲ್ಲಿ ಮೂಡಿತು. ನನಗಾಗಿ ಇಷ್ಟು ವರ್ಷ ನನ್ನನ್ನು ಬೆಂಬಲಿಸಿದ ಜನರಿಗೆ ಕೊನೆಗೂ ಸಂತೋಷವಾಗಲಿದೆ ಎಂದೆನಿಸಿತು’ ಎಂದಿದ್ದಾರೆ. ‘ನನಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂದು ಜನ ಒತ್ತಾಯಿಸುತ್ತಲೇ ಬಂದಿದ್ದರು. ಇಂಥಹಾ ಚಳವಳಿಗಳು ಎಷ್ಟು ಕಾಲ ಇರುತ್ತವೆ? ಎಂದು ನನಗೆ ಅನಿಸಿತ್ತು. ಆದರೆ ಜನರ ಬೆಂಬಲ ಕೊನೆಯಾಗಲೇ ಇಲ್ಲ’ ಎಂದಿದ್ದಾರೆ ಅನಂತ್ ನಾಗ್.

ಇದನ್ನೂ ಓದಿ:ಅನಂತ್ ನಾಗ್​ಗೆ ಪದ್ಮಭೂಷಣ, ನೀವೇ ನನಗೆ ಸ್ಪೂರ್ತಿ ಎಂದ ರಿಷಬ್ ಶೆಟ್ಟಿ

ಪ್ರಧಾನಿ ಮೋದಿ ಅವರಿಗೂ ಧನ್ಯವಾದ ಹೇಳಿರುವ ಅನಂತ್ ನಾಗ್, ‘ಪ್ರಶಸ್ತಿಗಳ ಆಯ್ಕೆಯಲ್ಲಿ ಜನರ ಅಭಿಪ್ರಾಯವನ್ನೂ ಪಡೆಯುವ ಪದ್ಧತಿ ಆರಂಭವಾಗಿದ್ದರಿಂದಲೇ ಇದು ಸಾಧ್ಯವಾಯಿತು. ಇದಕ್ಕೆ ಮೋದಿ ಅವರಿಗೆ ಧನ್ಯವಾದ ಹೇಳಲೇ ಬೇಕು’ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ತಮ್ಮ ನಟನೆಯ ಆರಂಭದ ದಿನಗಳನ್ನು ನೆನಪು ಮಾಡಿಕೊಂಡ ಅನಂತ್ ನಾಗ್, ‘ನಾನು ನಾಟಕಗಳಲ್ಲಿ ನಟಿಸಲು ಆರಂಭಿಸಿದಾಗ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಿದ್ದೆ. ಬರುವ ಸಂಬಳದಿಂದ ಎಲ್ಲವೂ ನಡೆಯುತ್ತಿತ್ತು. ಆದರೆ ಸಿನಿಮಾಕ್ಕೆ ಸೇರಿಕೊಂಡ ಮೇಲೆ ಹಣ ಬೇಕೇ ಬೇಕಾಯ್ತು. ಸಂಭಾವನೆಯೇ ನನ್ನ ಮೊದಲ ಆದ್ಯತೆ ಆಗಿತ್ತು ಆ ಸಂದರ್ಭದಲ್ಲಿ’ ಎಂದಿದ್ದಾರೆ ಅನಂತ್ ನಾಗ್.

1973 ರಿಂದಲೂ ಸಿನಿಮಾಗಳಲ್ಲಿ ಅನಂತ್ ನಾಗ್ ನಟಿಸುತ್ತಿದ್ದಾರೆ. ಕನ್ನಡ ಮಾತ್ರವೇ ಅಲ್ಲದೆ ಹಿಂದಿ, ತೆಲುಗು, ಮಲಯಾಳಂ, ತಮಿಳು, ಇಂಗ್ಲೀಷ್, ಮರಾಠಿ, ಬೆಂಗಾಳಿ ಸಿನಿಮಾಗಳಲ್ಲಿ ಅನಂತ್ ನಾಗ್ ನಟಿಸಿದ್ದಾರೆ. ನಾಲ್ಕು ಬಾರಿ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ಅನಂತ್ ನಾಗ್ ಪಡೆದಿದ್ದಾರೆ. ಆರು ಬಾರಿ ಫಿಲಂ ಫೇರ್ ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:55 am, Sun, 26 January 25

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ