AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anant Nag Birthday: ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್​; ಹುಟ್ಟುಹಬ್ಬಕ್ಕೆ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ

Happy Birthday Anant Nag: ಉದ್ಯಮಿ ವಿಜಯ ಸಂಕೇಶ್ವರ ಅವರ ಬಯೋಪಿಕ್​ ಆಗಿ ಮೂಡಿಬರುತ್ತಿರುವ ‘ವಿಜಯಾನಂದ’ ಚಿತ್ರದಲ್ಲಿ ಅನಂತ್ ನಾಗ್​ ಕೂಡ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಫಸ್ಟ್​ಲುಕ್​ ಬಿಡುಗಡೆ ಮಾಡುವ ಮೂಲಕ ಅವರಿಗೆ ಬರ್ತ್​ಡೇ ವಿಶ್​ ಮಾಡಲಾಗಿದೆ.

Anant Nag Birthday: ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್​; ಹುಟ್ಟುಹಬ್ಬಕ್ಕೆ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ
ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್
TV9 Web
| Updated By: ಮದನ್​ ಕುಮಾರ್​|

Updated on: Sep 04, 2021 | 12:16 PM

Share

ಭಾರತೀಯ ಚಿತ್ರರಂಗದ ಹಿರಿಯ ನಟ ಅನಂತ್​ ನಾಗ್​ ಅವರಿಗೆ ಇಂದು (ಸೆ.4) ಜನ್ಮದಿನದ ಸಂಭ್ರಮ. ಅಪಾರ ಸಂಖ್ಯೆಯ ಅಭಿಮಾನಿಗಳು ಅವರಿಗೆ ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. 74ರ ಪ್ರಾಯದಲ್ಲೂ ಅನಂತ್​ ನಾಗ್​ ಹಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಸಾಲಿಗೆ ಈಗ ಇನ್ನೊಂದು ಬಹುನಿರೀಕ್ಷಿತ ಚಿತ್ರ ಕೂಡ ಸೇರ್ಪಡೆ ಆಗಿದೆ. ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಬಯೋಪಿಕ್​ ಆಗಿ ಮೂಡಿಬರುತ್ತಿರುವ ‘ವಿಜಯಾನಂದ’ ಚಿತ್ರದಲ್ಲಿ ಅನಂತ್ ನಾಗ್​ ಕೂಡ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಅವರ ಫಸ್ಟ್​ಲುಕ್​ ಪೋಸ್ಟ್​ ರಿಲೀಸ್​ ಮಾಡಲಾಗಿದೆ.

ಸಾರಿಗೆ ಉದ್ಯಮದಲ್ಲಿ ವಿಜಯ ಸಂಕೇಶ್ವರ ಅವರ ಸಾಧನೆ ಅಪಾರ. ಅವರ ಪಾತ್ರದಲ್ಲಿ ನಿಹಾಲ್​ ನಟಿಸುತ್ತಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಅನಂತ್​ ನಾಗ್​ಗೆ ಯಾವ ಪಾತ್ರ? ಅದಕ್ಕೂ ಉತ್ತರವಿದೆ. ವಿಜಯ ಸಂಕೇಶ್ವರ ಅವರ ತಂದೆ ಬಿ.ಜಿ. ಸಂಕೇಶ್ವರ್​ ಪಾತ್ರದಲ್ಲಿ ಅನಂತ್​ ನಾಗ್​ ಕಾಣಿಸಿಕೊಳ್ಳಲಿದ್ದಾರೆ. ಫಸ್ಟ್​ಲುಕ್​ ಬಿಡುಗಡೆ ಮಾಡುವ ಮೂಲಕ ಅವರಿಗೆ ‘ವಿಜಯಾನಂದ’ ಸಿನಿಮಾ ತಂಡ ಬರ್ತ್​ಡೇ ವಿಶ್​ ಮಾಡಿದೆ.

ಈ ಚಿತ್ರಕ್ಕೆ ನಿರ್ದೇಶಕಿ ರಿಷಿಕಾ ಶರ್ಮಾ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಗೋಪಿ ಸುಂದರ್​ ಸಂಗೀತ ನಿರ್ದೇಶನ, ಕೀರ್ತನ್​ ಪೂಜಾರಿ ಛಾಯಾಗ್ರಹಣ, ಹೇಮಂತ್​ ಕುಮಾರ್​ ಡಿ. ಸಂಕಲನ, ರಘು ನಿಡುವಳ್ಳಿ ಸಂಭಾಷಣೆ, ಇಮ್ರಾನ್​ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರತಂಡಕ್ಕೆ ಅನಂತ್​ ನಾಗ್​ ಸೇರ್ಪಡೆ ಆಗಿರುವುದರಿಂದ ‘ವಿಜಯಾನಂದ’ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಅನಂತ್​ ನಾಗ್​ ಅವರಿಗೆ ಜನ್ಮದಿನದ ಶುಭ ಕೋರುತ್ತಿದ್ದಾರೆ. ಅನಂತ್​ ನಾಗ್​ಗೆ ಪದ್ಮ ಪ್ರಶಸ್ತಿ ಲಭಿಸಬೇಕು ಎಂಬುದು ಕನ್ನಡ ಅಭಿಮಾನಿಗಳ ಬಯಕೆ. ಅದಕ್ಕಾಗಿ ಇತ್ತೀಚೆಗೆ ‘ಅನಂತ್ ಫಾರ್ ಪದ್ಮ’ ಎಂಬ ಅಭಿಯಾನವನ್ನೂ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಕನ್ನಡ ಚಿತ್ರರಂಗ ಅಭೂತಪೂರ್ವವಾಗಿ ಬೆಂಬಲಿಸಿತ್ತು. ಅದರ ಭಾಗವಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಯುಟ್ಯೂಬ್ ಚಾನಲ್​ನಲ್ಲಿ ಅನಂತ್ ನಾಗ್ ಕುರಿತಂತೆ ಸಾಕ್ಷ್ಯಚಿತ್ರವೊಂದನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ:

ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’

Anant Nag: ಅನಂತ್​ ನಾಗ್​ ಬಗ್ಗೆ ನಿಮಗೆಷ್ಟು ಗೊತ್ತು? ಲೆಜೆಂಡರಿ ನಟನ ಬಗ್ಗೆ ರಿಷಬ್​ ಶೆಟ್ಟಿ ಟೀಮ್​ ಮಾಡಿದ ಡಾಕ್ಯುಮೆಂಟರಿ ಇಲ್ಲಿದೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ