AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushree: ಆ್ಯಂಕರ್ ಅನುಶ್ರೀ ಮದುವೆಗೆ ದಿನಾಂಕ ಫಿಕ್ಸ್? ಇದು ಪಕ್ಕಾ ಅರೇಂಜ್ ಮ್ಯಾರೇಜ್

Anchor Anushree's Wedding: ಪ್ರಸಿದ್ಧ ಕನ್ನಡ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿ ಈಗ ಅಧಿಕೃತವಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು ವರದಿಗಳಿವೆ. ಬೆಂಗಳೂರಿನ ಉದ್ಯಮಿಯೊಂದಿಗೆ ಅವರ ವಿವಾಹ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಅನುಶ್ರೀ ಅವರು ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.

Anushree: ಆ್ಯಂಕರ್ ಅನುಶ್ರೀ ಮದುವೆಗೆ ದಿನಾಂಕ ಫಿಕ್ಸ್? ಇದು ಪಕ್ಕಾ ಅರೇಂಜ್ ಮ್ಯಾರೇಜ್
ಅನುಶ್ರೀ
ರಾಜೇಶ್ ದುಗ್ಗುಮನೆ
|

Updated on:Jul 17, 2025 | 1:25 PM

Share

ಆ್ಯಂಕರ್ ಅನುಶ್ರೀ ಅವರು ಯಾವಾಗ ಮದುವೆ ಆಗುತ್ತಾರೆ ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು. ಪ್ರತಿ ವೇದಿಕೆ ಮೇಲೆ ಅವರ ಎದುರು ಪ್ರಶ್ನೆಗಳನ್ನು ಇಡಲಾಗುತ್ತಿತ್ತು. ಈ ವರ್ಷ ವಿವಾಹ ಆಗಿಯೇ ಆಗುತ್ತೇನೆ ಎಂದು ಅವರು ಭರವಸೆ ನೀಡಿದ್ದರು. ಈಗ ಅದು ನಿಜ ಆಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಅನುಶ್ರೀ (Anushree) ಅವರ ವಿವಾಹ ಅದ್ದೂರಿಯಾಗಿ ನಡೆಯಲಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಅನುಶ್ರೀ ಅವರು ಆ್ಯಂಕರ್ ಆಗಿ, ನಟಿಯಾಗಿ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ನಟನೆಗಿಂತ ಆ್ಯಂಕರ್ ಆಗಿಯೇ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ವೇದಿಕೆ ಯಾವುದೇ ಇದ್ದರೂ ಅಂಜದೆ, ಅಳುಕದೆ ಆ್ಯಂಕರಿಂಗ್ ಮಾಡುವ ಸಾಮರ್ಥ್ಯ ಅವರಿಗೆ ಇದೆ. ಇನ್ನು ಸ್ಕ್ರಿಪ್ಟ್ ಅನ್ನೋದು ಅವರಿಗೆ ಬೇಕಾಗಿಯೇ ಇಲ್ಲ. ಅಷ್ಟು ಸುಂದರವಾಗಿ, ಮನರಂಜಾತ್ಮಕವಾಗಿ ಅವರು ಆ್ಯಂಕರಿಂಗ್ ಮಾಡ ಬಲ್ಲರು. ಈ ಕಾರಣದಿಂದಲೇ ಆ್ಯಂಕರಿಂಗ್ ಲೋಕದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಜೀ ಕನ್ನಡದ ಬಹುತೇಕ ಶೋಗಳಿಗೆ ಅವರದ್ದೇ ನಿರೂಪಣೆ ಇರುತ್ತದೆ. ಈಗ ಅವರು ಮದುವೆ ಆಗುತ್ತಿದ್ದಾರೆ ಎಂಬ ವಿಚಾರ ಹೊರ ಬಿದ್ದಿದೆ.

ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಹಾಗಾದರೆ ಇದು ಲವ್ ಮ್ಯಾರೇಜಾ? ಅಲ್ಲಾ ಪಕ್ಕಾ ಅರೇಂಜ್ ಮ್ಯಾರೇಜ್ ಎನ್ನುತ್ತಿವೆ ಮೂಲಗಳು. ಕುಟುಂಬದವರು ನೋಡಿದ ಹುಡುಗನ ಜೊತೆ  ಅನುಶ್ರೀ ವಿವಾಹ ಆಗುತ್ತಿದ್ದಾರಂತೆ. ಬೆಂಗಳೂರಿನಲ್ಲೇ ಈ ವಿವಾಹ ಗ್ರಾಂಡ್ಆಗಿ ನೆರವೇರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
ನಯನತಾರ ಜೊತೆ ಚಿರಂಜೀವಿ ರೊಮ್ಯಾನ್ಸ್ ; 29 ವರ್ಷ ವಯಸ್ಸಿನ ಅಂತರ
Image
ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ 
Image
ಪವನ್ ಕಲ್ಯಾಣ್ ಚಿತ್ರ ‘ಹರಿ ಹರ ವೀರ ಮಲ್ಲು’ಗೆ ಶುರುವಾಗಿದೆ ಕರ್ನಾಟಕದ ಭಯ
Image
ಮುಂದಿನ ಮೂರು ವರ್ಷ ರಜನಿಕಾಂತ್ ಬ್ಯುಸಿ; ಮತ್ತೆ ಮೂರು ಸಿನಿಮಾ ಫೈನಲ್

ಇದನ್ನೂ ಓದಿ: ಐಶಾರಾಮಿ ಕಾರು ಖರೀದಿಸಿದ ಆ್ಯಂಕರ್ ಅನುಶ್ರೀ, ಬೆಲೆ ಎಷ್ಟು ಗೊತ್ತೆ?

ಈ ಬಗ್ಗೆ ಅನುಶ್ರೀ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಮುಂದಿನ ದಿನಗಳಲ್ಲಿ ಅವರು ಈ ಬಗ್ಗೆ ಮಾಹಿತಿ ರಿವೀಲ್ ಮಾಡೋ ಸಾಧ್ಯತೆ ಇದೆ. ಅನುಶ್ರೀ ವಿವಾಹದ ಕುರಿತು ಈ ಮೊದಲು ಸಾಕಷ್ಟು ವರದಿಗಳು ಹರಿದಾಡಿದ್ದವು. ಆದರೆ, ಯಾವುದೂ ನಿಜ ಆಗಿರಲಿಲ್ಲ. ಈಗ ಅವರ ವಿವಾಹದ ಬಗ್ಗೆ ಹೊಸ ಸುದ್ದಿ ಒಂದು ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಸ್ಪಷ್ಟನೆ ನೀಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:57 pm, Thu, 17 July 25