AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಚ್ಛೇದನದ ಬಗ್ಗೆ ಹಲವಾರು ತಿಂಗಳು ಯೋಚಿಸಿ ಹೇಳುತ್ತಿದ್ದೇನೆ’; ಚೈತ್ರಾ ವಾಸುದೇವನ್ ಭಾವುಕ ಪೋಸ್ಟ್​

Chaitra Vasudevan Divorce: ಚೈತ್ರಾ ಹಾಗೂ ಸತ್ಯ ಮದುವೆ ಆದರು. ಇವರು ಯಾವುದೇ ವಿವಾದದ ಮೂಲಕ ಸುದ್ದಿ ಆಗಿಲ್ಲ. ಆದಾಗ್ಯೂ ಇವರು ಸೈಲೆಂಟ್ ಆಗಿ ಈ ಘೋಷಣೆ ಮಾಡಿರುವುದು ಅನೇಕರಿಗೆ ಶಾಕ್ ತಂದಿದೆ.

‘ವಿಚ್ಛೇದನದ ಬಗ್ಗೆ ಹಲವಾರು ತಿಂಗಳು ಯೋಚಿಸಿ ಹೇಳುತ್ತಿದ್ದೇನೆ’;  ಚೈತ್ರಾ ವಾಸುದೇವನ್ ಭಾವುಕ ಪೋಸ್ಟ್​
ಚೈತ್ರಾ ವಾಸುದೇವನ್
ರಾಜೇಶ್ ದುಗ್ಗುಮನೆ
|

Updated on:Jul 28, 2023 | 6:57 AM

Share

ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ (Chaitra Vasudevan) ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿ, ಜೀವನದ ಆಗುಹೋಗುಗಳ ಬಗ್ಗೆ ಅವರು ಅಪ್​ಡೇಟ್ ನೀಡುತ್ತಾರೆ. ಈಗ ಅವರ ಕಡೆಯಿಂದ ಶಾಕಿಂಗ್ ಸುದ್ದಿ ಒಂದು ಹೊರಬಿದ್ದಿದೆ. ಅವರು ಸತ್ಯ ನಾಯ್ಡು ಅವರಿಂದ ವಿಚ್ಛೇದನ ಪಡೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ವಿಚಾರ ತಿಳಿದು ಚೈತ್ರಾ ಅಭಿಮಾನಿಗಳಿಗೆ ಬೇಸರ ಆಗಿದೆ. ಚೈತ್ರಾ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ. ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ತಿಳಿಸಿಲ್ಲ.

ಚೈತ್ರಾ ಹಾಗೂ ಸತ್ಯ ಸರಳವಾಗಿ ಮದುವೆ ಆಗಿದ್ದರು. ಅವರು ಸಾರ್ವಜನಿಕವಾಗಿ ಒಬ್ಬರನ್ನೊಬ್ಬರು ದೂರಿಕೊಂಡಿಲ್ಲ. ಇವರು ಯಾವುದೇ ವಿವಾದದ ಮೂಲಕ ಸುದ್ದಿ ಆಗಿಲ್ಲ. ಆದಾಗ್ಯೂ ಇವರು ಸೈಲೆಂಟ್ ಆಗಿ ಈ ಘೋಷಣೆ ಮಾಡಿರುವುದು ಅನೇಕರಿಗೆ ಶಾಕ್ ತಂದಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನುಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚೈತ್ರಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಐಷಾರಾಮಿ ಕಾರು ಖರೀದಿಸಿದ ‘ಬಿಗ್ ಬಾಸ್’ ಸ್ಪರ್ಧಿ ಚೈತ್ರಾ ವಾಸುದೇವನ್; ಇಲ್ಲಿವೆ ಫೋಟೋಗಳು

ಚೈತ್ರಾ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿರುವುದು ಮಾತ್ರವಲ್ಲ ತಮ್ಮದೇ ಉದ್ಯಮ ಹೊಂದಿದ್ದಾರೆ. ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ನಡೆಸುತ್ತಿದ್ದಾರೆ. ಅವರಿಗೆ ಸಿನಿಮಾ ಆಫರ್​ಗಳು ಬಂದರೂ ಅದನ್ನು ಒಪ್ಪಿಲ್ಲ ಎನ್ನಲಾಗಿದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದರು. ಈ ಕಾರಿನ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:35 am, Fri, 28 July 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ