ಶಾಲಾ ವಿದ್ಯಾರ್ಥಿಗಳಿಂದ ಬಿಡುಗಡೆ ಆಯ್ತು ‘ಅಂದೊಂದಿತ್ತು ಕಾಲ’ ಸಿನಿಮಾದ 2ನೇ ಹಾಡು

‘ಅಂದೊಂದಿತ್ತು ಕಾಲ’ ಸಿನಿಮಾದಲ್ಲಿ ವಿನಯ್ ರಾಜ್​ಕುಮಾರ್, ಅದಿತಿ ಪ್ರಭುದೇವ, ನಿಶಾ ರವಿಕೃಷ್ಣನ್ ನಟಿಸಿದ್ದಾರೆ. ಈ ಚಿತ್ರದ ಮೊದಲ ಹಾಡು ಸೂಪರ್ ಹಿಟ್ ಆಗಿದ್ದು, ಈಗ ಎರಡನೇ ಹಾಡು ಬಿಡುಗಡೆ ಆಗಿದೆ. ಶಾಲಾ ವಿದ್ಯಾರ್ಥಿಗಳು ಈ ಸಿನಿಮಾದ ಹಾಡನ್ನು ಬಿಡುಗಡೆ ಮಾಡಿರುವುದು ವಿಶೇಷ. ಅದಕ್ಕೆ ಕಾರಣ ಕೂಡ ಇದೆ.

ಶಾಲಾ ವಿದ್ಯಾರ್ಥಿಗಳಿಂದ ಬಿಡುಗಡೆ ಆಯ್ತು ‘ಅಂದೊಂದಿತ್ತು ಕಾಲ’ ಸಿನಿಮಾದ 2ನೇ ಹಾಡು
Vinay Rajkumar, Nisha Ravikrishnan

Updated on: Jun 29, 2025 | 9:54 AM

ಸಿದ್ ಶ್ರೀರಾಮ್ ಹಾಡಿರುವ ‘ಅಂದೊಂದಿತ್ತು ಕಾಲ’ (Andondittu Kaala) ಸಿನಿಮಾದ ‘ಮುಂಗಾರು ಮಳೆಯಲ್ಲಿ..’ ಹಾಡು ಯೂಟ್ಯೂಬ್​ನಲ್ಲಿ ಧೂಳೆಬ್ಬಿಸಿದೆ. 36 ಮಿಲಿಯನ್​ಗಿಂತಲೂ ಅಧಿಕ ವೀಕ್ಷಣೆ ಕಂಡಿದೆ. ಆ ಯಶಸ್ಸಿನ ಬಳಿಕ ಚಿತ್ರತಂಡದವರು 2ನೇ ಹಾಡನ್ನು ಈಗ ರಿಲೀಸ್ ಮಾಡಿದ್ದಾರೆ. ಮಲ್ಲಸಂದ್ರದ ಬಿ .ಎನ್.ಆರ್. ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಂದ ರಿಲೀಸ್ ಮಾಡಿಸಿದ್ದು ವಿಶೇಷವಾಗಿತ್ತು. ಈ ವೇಳೆ ನಡೆದ ಸುದ್ದಿಗೋಷ್ಠಿಯಲ್ಲಿ ನಟ ವಿನಯ್ ರಾಜ್​ಕುಮಾರ್ (Vinay Rajkumar) ಅವರು ಮಾತನಾಡಿದರು. ಮೊದಲ ಸಾಂಗ್ ಹಿಟ್ ಆಗಿದ್ದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. ಎರಡನೇ ಹಾಡು ಸಹ ಹಿಟ್ ಆಗುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

‘ಇದು ನನ್ನ ಇಷ್ಟದ ಗೀತೆ. ಈ ಹಾಡನ್ನೇ ಮೊದಲು ಬಿಡುಗಡೆ ಮಾಡಿ ಎಂದು ನಾನು ನಿರ್ದೇಶಕ ಕೀರ್ತಿಗೆ ಹೇಳಿದ್ದೆ. ಈ ಸಿನಿಮಾದಲ್ಲಿ ನಾನು 16 ವರ್ಷದ ಹುಡುಗನ ಗೆಟಪ್​ನಲ್ಲಿ ಕಾಣಿಸಿಕೊಳ್ಳುವುದು ಚಾಲೆಂಜಿಂಗ್ ಆಗಿತ್ತು. ದೇಹದ ತೂಕ ಕಡಿಮೆ ಮಾಡಿಕೊಳ್ಳುವುದು ಕಷ್ಟವಾಗಿತ್ತು. ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ನಿಜ ಜೀವನದಲ್ಲಿ 10ನೇ ತರಗತಿ ಓದುವಾಗ ನಾನು ಬಹಳ ಮುಗ್ಧ ಹುಡುಗ. ಮೂರು ಶೇಡ್​ಗಳಲ್ಲಿ ನನ್ನ ಪಾತ್ರ ಸಾಗುತ್ತದೆ’ ಎಂದು ಅವರು ಹೇಳಿದರು.

ನಟಿ ನಿಶಾ ರವಿಕೃಷ್ಣನ್ ಅವರು ಈ ಸಿನಿಮಾದಲ್ಲಿ ವಿನಯ್ ರಾಜ್​ಕುಮಾರ್ ಜೊತೆ ಶಾಲಾ ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿದ್ದಾರೆ. ಅವರು ಕೂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಈ ಸಿನಿಮಾದಲ್ಲಿ ನನ್ನದು ಒಂದು ಸಣ್ಣ ಪಾತ್ರವಾದರೂ ಬಹಳ ಪ್ರಾಮುಖ್ಯತೆ ಇದೆ. ನಿರ್ದೇಶಕರು, ನಿರ್ಮಾಪಕರು ತುಂಬಾ ಸಹಕಾರ ನೀಡಿದರು. ವಿನಯ್ ರಾಜ್​ಕುಮಾರ್ ಅವರ ಜೊತೆ ನಟಿಸಿದ್ದು ಖುಷಿ ತಂದಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ
‘ದೂರ ತೀರ ಯಾನ’ ಪಯಣ ಮತ್ತು ಪ್ರೇಮದ ಕತೆ: ಟ್ರೈಲರ್ ಬಿಡುಗಡೆ ಮಾಡಿದ ಕಿಚ್ಚ
ದ್ವಾರಕೀಶ್ ನಿರ್ಮಾಣದ ಸಿನಿಮಾದಲ್ಲಿ ನಟಿಸಬೇಕಿತ್ತು ವಿಷ್ಣು-ಶ್ರೀದೇವಿ
ಉತ್ತರ ಕರ್ನಾಟಕದ ಪ್ರತಿಭೆಗಳ ‘ಲಕ್ಷ್ಯ’ ಸಿನಿಮಾ; ನೈಜ ಘಟನೆಯೇ ಸ್ಫೂರ್ತಿ
25 ದಿನ ಪೂರೈಸಿದ ‘ತಾಯವ್ವ’ ಸಿನಿಮಾಗೆ ಚಂದನವನದ ಗಣ್ಯರ ಅಭಿನಂದನೆ

ಈ ಸಿನಿಮಾಗೆ ಕೀರ್ತಿ ಕೃಷ್ಣಪ್ಪ ನಿರ್ದೇಶನ ಮಾಡಿದ್ದಾರೆ. ಇದು ಅವರ ನಿರ್ದೇಶನದಲ್ಲಿ ಬರುತ್ತಿರುವ ಮೊದಲ ಸಿನಿಮಾ. ‘ಸಿನಿಮಾ ಉತ್ತಮವಾಗಿ ಮೂಡಿಬರಲು ನಿರ್ಮಾಪಕ ಭುವನ್ ಸುರೇಶ್ ಬಹಳಷ್ಟು ಸಪೋರ್ಟ್ ಮಾಡುತ್ತಿದ್ದಾರೆ. ನಮ್ಮ ಸಿನಿಮಾದಲ್ಲಿ ವಿನಯ್ ರಾಜ್​ಕುಮಾರ್ ಬಹಳ ಅಚ್ಚುಕಟ್ಟಾಗಿ ತಮ್ಮ ಪಾತ್ರವನ್ನು ನಿರ್ವಹಿಸಿದ್ದಾರೆ’ ಎಂದರು ನಿರ್ದೇಕರು.

Andondittu Kaala Movie Team

‘ಅರೇರೇ ಯಾರೋ ಇವಳು..’ ಹಾಡಿಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದಾರೆ. ರಾಘವೇಂದ್ರ ವಿ. ಅವರು ಸಂಗೀತ ನೀಡಿದ್ದಾರೆ. 90ರ ಕಾಲಘಟ್ಟವನ್ನು ಈ ಹಾಡು ನೆನಪಿಸುತ್ತದೆ. ಸಿನಿಮಾದಲ್ಲಿ ಇನ್ನೂ ಮೂರು ಹಾಡುಗಳಿವೆ. ಒಂದೊಂದಾಗಿಯೇ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ. ಆಗಸ್ಟ್ 29ರಂದು ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ: ಸಿನಿಮಾ ಸೋಲು, ವಿವಾದದ ನಡುವೆಯೂ ಕಮಲ್ ಹಾಸನ್​ಗೆ ಸಿಕ್ತು ಆಸ್ಕರ್ ಗೌರವ

ವಿನಯ್ ರಾಜ್​ಕುಮಾರ್, ಅದಿತಿ ಪ್ರಭುದೇವ, ನಿಶಾ ರವಿಕೃಷ್ಣನ್ ಜೊತೆ ಅರುಣಾ ಬಾಲರಾಜ್‍, ಜಗ್ಗಪ್ಪ ಮುಂತಾದವರು ನಟಿಸಿದ್ದಾರೆ. ರವಿಚಂದ್ರನ್‍ ಅವರು ಅತಿಥಿ ಪಾತ್ರ ಮಾಡಿದ್ದಾರೆ. ‘ಭುವನ್ ಮ್ಯೂವಿಸ್’ ಮೂಲಕ ಭುವನ್ ಸುರೇಶ್ ನಿರ್ಮಾಣ ಮಾಡಿದ್ದಾರೆ. ಅಭಿಷೇಕ್ ಕಾಸರಗೋಡು ಅವರು ಛಾಯಾಗ್ರಹಣ ಮಾಡಿದ್ದಾರೆ. ಕೀರ್ತಿ ಅವರ ಸಂಕಲನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.