ಭಾರತಿ ವಿಷ್ಣುವರ್ಧನ್​ ಜೀವನದ ಕುರಿತ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಅನಿರುದ್ಧ್​ ಜತ್ಕರ್​

‘ಬಾಳೆ ಬಂಗಾರ’ ಸಾಕ್ಷ್ಯಚಿತ್ರಕ್ಕೆ ನಾನ್​-ಫೀಚರ್​ ಫಿಲ್ಮ್​ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಈ ಡಾಕ್ಯುಮೆಂಟರಿಗೆ ಅನಿರುದ್ಧ್​ ಜತ್ಕರ್​ ಅವರು ನಿರ್ದೇಶನ ಮಾಡಿದ್ದಾರೆ. ಭಾರತಿ ವಿಷ್ಣುವರ್ಧನ್​ ಅವರ ಸಾಧನೆ ಮತ್ತು ಜೀವನದ ಬಗ್ಗೆ ಈ ಸಾಕ್ಷ್ಯಚಿತ್ರದಲ್ಲಿ ವಿವರಿಸಲಾಗಿದೆ.

ಭಾರತಿ ವಿಷ್ಣುವರ್ಧನ್​ ಜೀವನದ ಕುರಿತ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಅನಿರುದ್ಧ್​ ಜತ್ಕರ್​
ಭಾರತಿ ವಿಷ್ಣುವರ್ಧನ್,​ ಅನಿರುದ್ಧ್​ ಜತ್ಕರ್​
Follow us
|

Updated on:Aug 24, 2023 | 6:18 PM

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (69th National Film Award 2023) ಘೋಷಣೆ ಆಗಿದೆ. 2021ರ ಸಾಲಿನ ಸಿನಿಮಾಗಳಿಗೆ ಈ ಪ್ರಶಸ್ತಿ ಪ್ರಕಟ ಮಾಡಲಾಗಿದೆ. ವಿವಿಧ ವಿಭಾಗಗಳಲ್ಲಿ ನ್ಯಾಷನಲ್​ ಅವಾರ್ಡ್​ ಪ್ರಕಟ ಆಗಿದೆ. ಖ್ಯಾತ ನಟಿ ಭಾರತಿ ವಿಷ್ಣುವರ್ಧನ್​ ಅವರ ಜೀವನದ ಕುರಿತು ತಯಾರಾದ ‘ಬಾಳೆ ಬಂಗಾರ’  ಸಾಕ್ಷ್ಯಚಿತ್ರಕ್ಕೆ (Bale Bangara Documentary) ನಾನ್​-ಫೀಚರ್​ ಫಿಲ್ಮ್​ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಈ ಡಾಕ್ಯುಮೆಂಟರಿಗೆ ಅನಿರುದ್ಧ್​ ಜತ್ಕರ್​ (Anirudh Jatkar) ಅವರು ನಿರ್ದೇಶನ ಮಾಡಿದ್ದಾರೆ. ಭಾರತಿ ವಿಷ್ಣುವರ್ಧನ್​ ಅವರ ಸಾಧನೆ ಮತ್ತು ಜೀವನದ ಬಗ್ಗೆ ಈ ಸಾಕ್ಷ್ಯಚಿತ್ರದಲ್ಲಿ ವಿವರಿಸಲಾಗಿದೆ. ಅನೇಕ ಸೆಲೆಬ್ರಿಟಿಗಳ ಸಂದರ್ಶನ ಕೂಡ ಇದರಲ್ಲಿ ಇದೆ.

ಭಾರತಿ ವಿಷ್ಣುವರ್ಧನ್​ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ‘ಬಾಳೆ ಬಂಗಾರ’ ಸಾಕ್ಷ್ಯಚಿತ್ರದಲ್ಲಿ ಚಿತ್ರರಂಗದ ಹಲವರು ಮಾತನಾಡಿದ್ದಾರೆ. ಹಿರಿಯ ಕಲಾವಿದರಾದ ಅನಂತ್​ ನಾಗ್​, ಶಿವರಾಮ್​, ಶಿವರಾಜ್​ಕುಮಾರ್​, ಮೋಹನ್​ ಲಾಲ್​, ಹೇಮಾ ಚೌಧರಿ ಮುಂತಾದವರು ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಸ್ವತಃ ಭಾರತಿ ವಿಷ್ಣುವರ್ಧನ್​ ಅವರ ಸಂದರ್ಶನ ಕೂಡ ಈ ಸಾಕ್ಷ್ಯಚಿತ್ರದಲ್ಲಿದೆ. ಹಲವು ವರ್ಷಗಳ ಕಾಲ ಅಧ್ಯಯನ ಮಾಡಿ, ಅನೇಕ ಬಗೆಯ ಮಾಹಿತಿಗಳನ್ನು ಕಲೆಹಾಕಿ ಅನಿರುದ್ಧ್​ ಜತ್ಕರ್​ ಅವರು ಈ ಡಾಕ್ಯುಮೆಂಟರಿ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಯಾರಿಗೆಲ್ಲ ಸಿಕ್ಕಿದೆ ನ್ಯಾಷನಲ್​ ಅವಾರ್ಡ್​? ಇಲ್ಲಿದೆ ಲೈವ್​ ವಿಡಿಯೋ

ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಡಾ. ರಾಜ್​ಕುಮಾರ್​, ಡಾ. ವಿಷ್ಣುವರ್ಧನ್​ ಸೇರಿದಂತೆ ಹಲವು ನಟರ ಜೊತೆ ಭಾರತಿ ವಿಷ್ಣುವರ್ಧನ್​ ಅವರು ಸಿನಿಮಾ ಮಾಡಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಅವರು ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ಬರೀ 8 ವರ್ಷದಲ್ಲಿ ಅವರು 100 ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಮನೆಮಾತಾದರು. ಅವರ ಅಭಿನಯಕ್ಕೆ ಪ್ರೇಕ್ಷಕರು ಮನಸೋತರು. ಹಲವು ಕಷ್ಟಗಳನ್ನು ಎದುರಿಸಿ ಅವರು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದರು. ಈ ಎಲ್ಲ ವಿಚಾರಗಳನ್ನು ‘ಬಾಳೆ ಬಂಗಾರ’ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: 69th National Film Awards 2023: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಇಲ್ಲಿದೆ ಪಟ್ಟಿ

ವಿಷ್ಣುವರ್ಧನ್​ ಅವರ ಅಳಿಯ ಅನಿರುದ್ಧ್ ಜತ್ಕರ್​ ಅವರು ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿದ್ದಾರೆ. ಹಿರಿತೆರೆ ಮತ್ತು ಕಿರುತೆರೆ ಎರಡರಲ್ಲೂ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಬೇರೆ ಬೇರೆ ಪ್ರಯೋಗಗಳ ಮೂಲಕ ಅವರು ದಾಖಲೆ ಮಾಡಿದ್ದಾರೆ. ನಿರ್ದೇಶನದಲ್ಲೂ ಅವರು ಆಸಕ್ತಿ ಹೊಂದಿದ್ದಾರೆ. ಈಗ ಅನಿರುದ್ಧ್​ ಅವರು ‘ಶೆಫ್​ ಚಿದಂಬರ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ರಾಷ್ಟ್ರ ಪ್ರಶಸ್ತಿ ಪಡೆದಿರುವುದಕ್ಕೆ ಎಲ್ಲರೂ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:52 pm, Thu, 24 August 23

ತಾಜಾ ಸುದ್ದಿ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ