AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಟ್ಟಮಲ್ಲಿ’ ಬಳಿಕ ‘ಹೋಗೋಣು ಬಾರೋ ಮೆಕ್ಶಿಕೋ’ ಮೂಲಕ ಎಂಟ್ರಿ ಕೊಟ್ಟ ‘ಅಣ್ಣ ಫ್ರಮ್ ಮೆಕ್ಸಿಕೋ’

ಡಾಲಿ ಧನಂಜಯ್ ಹಾಗೂ ರೀಷ್ಮಾ ನಾಣಯ್ಯ ನಟನೆಯ ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾದಿಂದ ಹೊಸ ಹಾಡು ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಂಗೀತ ಹಾಗೂ ಯೋಗರಾಜ್ ಭಟ್ ಸಾಹಿತ್ಯವಿರುವ ‘ಹೋಗೋಣು ಬಾರೋ ಮೆಕ್ಶಿಕೋ’ ಹಾಡು ಪ್ರೇಕ್ಷಕರನ್ನು ಆಕರ್ಷಿಸುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚು ಮಾಡಿದೆ.

‘ಪುಟ್ಟಮಲ್ಲಿ’ ಬಳಿಕ ‘ಹೋಗೋಣು ಬಾರೋ ಮೆಕ್ಶಿಕೋ’ ಮೂಲಕ ಎಂಟ್ರಿ ಕೊಟ್ಟ ‘ಅಣ್ಣ ಫ್ರಮ್ ಮೆಕ್ಸಿಕೋ’
ಅಣ್ಣ ಫ್ರಮ್ ಮೆಕ್ಸಿಕೋ
ರಾಜೇಶ್ ದುಗ್ಗುಮನೆ
|

Updated on:Nov 16, 2026 | 9:10 AM

Share

ಮುಖ್ಯಾಂಶಗಳು

  • ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದಿಂದ ಮತ್ತೊಂದು ಹೊಸ ಹಾಡು ರಿಲೀಸ್
  • ಸಂಗೀತಪ್ರಿಯರ ಗಮನ ಸೆಳೆದ ಮೆಲೋಡಿ
  • ಯೋಗರಾಜ್ ಭಟ್ ಸಾಹಿತ್ಯ ಹಾಗೂ ವಾಸುಕಿ ವೈಭವ್ ಸಂಗೀತ

ಡಾಲಿ ಧನಂಜಯ್ ಹಾಗೂ ರೀಷ್ಮಾ ನಾಣಯ್ಯ ನಟನೆಯ ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಸದ್ಯ ಸ್ಯಾಂಡ್‌ವುಡ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಚಿತ್ರದ ‘ಪುಟ್ಟಮಲ್ಲಿ’ ಹಾಡು ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿ ಪ್ರೇಕ್ಷಕರ ಮನಸೂರೆಗೊಂಡಿದೆ. ವಾಸುಕಿ ವೈಭವ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡು ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಈಗ ಈ ಚಿತ್ರದಿಂದ ಮತ್ತೊಂದು ಹೊಸ ಹಾಡು ಬಿಡುಗಡೆಯಾಗಿದ್ದು, ಸಂಗೀತಪ್ರಿಯರ ಗಮನ ಸೆಳೆಯುತ್ತಿದೆ.

‘ಹೋಗೋಣು ಬಾರೋ ಮೆಕ್ಶಿಕೋ’ ಹಾಡು ಈಗ ರಿಲೀಸ್ ಆಗಿದೆ. ಈ ಹಾಡಿಗೆ ಖ್ಯಾತ ಗೀತಸಾಹಿತಿ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಮಾಳು ನಿಪನಾಳ್, ಮಾಧುರಿ ಶೇಷಾದ್ರಿ ಹಾಗೂ ಅಭಿಷೇಕ್ ನಾಗರ್ಕರ್ ಈ ಹಾಡನ್ನು ಹಾಡಿದ್ದಾರೆ. ಈ ಮೊದಲು

ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಎಂಬ ವಿಭಿನ್ನ ಹಾಗೂ ಯಶಸ್ವಿ ಚಿತ್ರವನ್ನು ನಿರ್ದೇಶಿಸುವ ಮೂಲಕ ಗಮನ ಸೆಳೆದಿದ್ದ ಶಂಕರ್ ಗುರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಹಿಟ್ ಜೋಡಿ ಈಗ ಮತ್ತೆ ಒಂದಾಗಿದೆ. ಚನ್ನರಾಜ್ ಬಿ ಹತ್ತಿಹೋಳಿ ಹಾಗೂ ಮೃಣಾಲ್, ಸತ್ಯ ರಾಯಲ ಹಾಗೂ ಜಾನ್ವಿ ರಾಯಲ ಅವರು ಐರಾ ಫಿಲ್ಮ್ಸ್ ಮತ್ತು ದಿ ರಾಯಲ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎಜೆ ಶೆಟ್ಟಿ ಮತ್ತು ಎಸ್.ಕೆ. ರಾವ್ ಕ್ಯಾಮೆರಾ ಕೈಚಳಕ, ನಿರಂಜನ್ ದೇವರಮನೆ ಸಂಕಲನ, ಪ್ರಶಾಂತ್ ರಾಜ್‌ಪ್ಪ ಸಂಭಾಷಣೆ ಬರೆದಿದ್ದು, ಅರ್ಜುನ್ ರಾಜ್, ವಿನೋದ್ ಮತ್ತು ಯೋಗಾನಂದ್ ಡಿ.ಸಿ ಸಾಹಸ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಧನಂಜಯ್, ರೀಷ್ಮಾ ಜೊತೆಗೆ ಉಮಾಶ್ರೀ, ರಂಘಾಯಣ ರಘು, ನಾಗಭೂಷಣ, ಸಾಧು ಕೋಕಿಲ, ಪೂರ್ಣಚಂದ್ರ ಮೈಸೂರು ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ಆಟೋದಲ್ಲಿ ‘ಪುಟ್ಟಮಲ್ಲಿ’ ಹಾಡಿಗೆ ಡ್ಯಾನ್ಸ್ ಮಾಡಿದ ಡಾಲಿ ಧನಂಜಯ್, ವಾಸುಕಿ ಹಾಗೂ ರೀಷ್ಮಾ

‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಡಿಸೆಂಬರ್ 24ರಂದು ತೆರೆಗೆ ಬರುತ್ತಿದೆ. ‘ಬಡವ ರಾಸ್ಕಲ್’ ಸಿನಿಮಾದ ಡೇಟ್​​ಗೆ ಈ ಚಿತ್ರ ತೆರೆಗೆ ಬರುತ್ತಿದೆ ಎಂಬುದು ವಿಶೇಷ.  ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:09 am, Mon, 16 November 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More