AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ‘ಮೈ ಬೇಬಿ’ ಸಿನಿಮಾದ ಮೊದಲ ಹಾಡಿಗೆ ಸಾಥ್ ನೀಡಿದ ಎ.ಆರ್‌. ರೆಹಮಾನ್

ಪ್ರೀತಮ್ ಗುಬ್ಬಿ ಅವರು ನಿರ್ದೇಶನ ಮಾಡಿರುವ ‘ಮೈ ಬೇಬಿ’ ಸಿನಿಮಾ ಈಗ ಹಾಡಿನ ಮೂಲಕ ಗಮನ ಸೆಳೆಯುತ್ತಿದೆ. ಇಂದು (ನ.11) ಈ ಚಿತ್ರದ ‘ಮಾತು ನೀನೇ..’ ಸಾಂಗ್ ರಿಲೀಸ್ ಮಾಡಲಾಗಿದೆ. ಎ.ಆರ್. ರೆಹಮಾನ್ ಅವರು ಈ ಗೀತೆಯನ್ನು ರಿಲೀಸ್ ಮಾಡಿರುವುದು ಚಿತ್ರತಂಡಕ್ಕೆ ಸಂತಸ ತಂದಿದೆ.

ಕನ್ನಡದ ‘ಮೈ ಬೇಬಿ’ ಸಿನಿಮಾದ ಮೊದಲ ಹಾಡಿಗೆ ಸಾಥ್ ನೀಡಿದ ಎ.ಆರ್‌. ರೆಹಮಾನ್
Sumukha, Esha
ಮದನ್​ ಕುಮಾರ್​
|

Updated on: Nov 11, 2026 | 8:07 PM

Share

ನಿರ್ದೇಶಕ ಪ್ರೀತಮ್ ಗುಬ್ಬಿ ಅವರ ಸಿನಿಮಾಗಳಲ್ಲಿ ಹಾಡುಗಳಿಗೆ ಮೊದಲ ಆದ್ಯತೆ ಇರುತ್ತದೆ. ಈಗ ಅವರ ‘ಮೈ ಬೇಬಿ’ ಸಿನಿಮಾ ಕೂಡ ಹಾಡುಗಳ ಮೂಲಕ ಸದ್ದು ಮಾಡಲು ಸಜ್ಜಾಗಿದೆ. ಈ ಚಿತ್ರತಂಡದಿಂದ ಒಂದು ಅಪ್‌ಡೇಟ್ ನೀಡಲಾಗಿದೆ. ಈ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ವಿಶೇಷ ಏನೆಂದರೆ, ಜನಪ್ರಿಯ ಸಂಗೀತ ನಿರ್ದೇಶಕ, ಗಾಯಕ ಎ.ಆರ್. ರೆಹಮಾನ್ ಅವರು ಈ ಹಾಡನ್ನು ಲಾಂಚ್ ಮಾಡಿದ್ದಾರೆ.

‘ಮಾತು ನೀನೇ..’ ಎಂಬ ಹಾಡನ್ನು ಇಂದು (ನವೆಂಬರ್ 11) ಅನಾವರಣ ಮಾಡಲಾಗಿದೆ. ಸಂಗೀತ ಮಾಂತ್ರಿಕ, ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಅವರು ಸೋಶಿಯಲ್ ಮೀಡಿಯಾ ಮೂಲಕ ಈ ಹಾಡನ್ನು ರಿಲೀಸ್ ಮಾಡಿರುವುದು ಚಿತ್ರತಂಡದ ಬಲವನ್ನು ಹೆಚ್ಚಿಸಿದೆ. ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ರೆಹಮಾನ್ ಅವರು ಕನ್ನಡ ಸಿನಿಮಾದ ಗೀತೆಯನ್ನು ರಿಲೀಸ್ ಮಾಡಿರುವುದು ‘ಮೈ ಬೇಬಿ’ ತಂಡದ ಖುಷಿಗೆ ಕಾರಣ ಆಗಿದೆ.

ಈ ಹಾಡಿಗೆ ನಕುಲ್ ಅಭ್ಯಂಕರ್ ಅವರು ಸಂಗೀತ ನೀಡಿದ್ದಾರೆ. ಸುಂದರವಾದ ಪರಿಸರದ ನಡುವೆ ಈ ಹಾಡನ್ನು ಚಿತ್ರಿಸಲಾಗಿದೆ. ಸುಮಧುರವಾದ ಈ ಹಾಡಿಗೆ ನಾಗಾರ್ಜುನ್ ಶರ್ಮಾ ಅವರು ಸಾಹಿತ್ಯ ರಚಿಸಿದ್ದಾರೆ. ಖ್ಯಾತ ಗಾಯಕ ಜಸ್ಕರಣ್ ಸಿಂಗ್ ಅವರು ಧ್ವನಿ ನೀಡಿದ್ದಾರೆ. ‘ಆನಂದ್ ಆಡಿಯೋ’ ಮೂಲಕ ಬಿಡುಗಡೆ ಆಗಿರುವ ಈ ಹಾಡಿಗೆ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಮೈ ಬೇಬಿ’ ಸಿನಿಮಾದ ಈ ಗೀತೆಯಲ್ಲಿ ಪ್ರೇಮಿಗಳಾಗಿ ನಟ ಸುಮುಖ್ ಮತ್ತು ನಟಿ ಇಶಾ ಲಂಕೇಶ್ ಅವರು ಕಾಣಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಈ ಹೊಸ ಜೋಡಿಯ ಕೆಮಿಸ್ಟ್ರಿ ಸಖತ್ ಕ್ಯೂಟ್ ಆಗಿದೆ ಎನ್ನುತ್ತಿದ್ದಾರೆ ಪ್ರೇಕ್ಷಕರು. ಛಾಯಾಗ್ರಾಹಕ ಅಭಿಲಾಷ್ ಕಳತ್ತಿ ಅವರು ಈ ಹಾಡಿನ ದೃಶ್ಯಗಳನ್ನು ಸುಂದರವಾಗಿ ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾದ ಹಾಡುಗಳನ್ನು ಟ್ರೋಲ್ ಮಾಡಿದವರಿಗೆ ಎಆರ್ ರೆಹಮಾನ್ ತಿರುಗೇಟು

ರಂಗನಾಥ್ ಕೆಂಪನಹಳ್ಳಿ (ಆರ್.ಕೆ) ಅವರು ‘ನಿಧಿ ಫಿಲ್ಮ್ಸ್ ಪ್ರೊಡಕ್ಷನ್ಸ್’ ಅಡಿಯಲ್ಲಿ ‘ಮೈ ಬೇಬಿ’ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಿಸುತ್ತಿದ್ದಾರೆ. ಕೆ.ಎಂ. ಪ್ರಕಾಶ್ ಅವರು ಈ ಚಿತ್ರಕ್ಕೆ ಸಂಕಲನ ಮಾಡುತ್ತಿದ್ದಾರೆ. ಮೊದಲ ಹಾಡಿನ ಮೂಲಕ ಚಿತ್ರತಂಡವು ಯುವ ಪ್ರೇಕ್ಷಕರಲ್ಲಿ ಹಾಗೂ ಸಂಗೀತ ಪ್ರೇಮಿಗಳಲ್ಲಿ ಸಿನಿಮಾ ಬಗ್ಗೆ ಕೌತುಕ ಹೆಚ್ಚುವಂತೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ನಾನು 100 ವರ್ಷ ಬದುಕಬೇಕು ಎಂದ ಸಿದ್ದರಾಮಯ್ಯ
ನಾನು 100 ವರ್ಷ ಬದುಕಬೇಕು ಎಂದ ಸಿದ್ದರಾಮಯ್ಯ
ಡಿಸಿಯೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ರು: ಜೆಡಿಎಸ್​​ ಶಾಸಕ ಆಕ್ರೋಶ
ಡಿಸಿಯೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ರು: ಜೆಡಿಎಸ್​​ ಶಾಸಕ ಆಕ್ರೋಶ
ಹಾಸನಾಂಬೆ ದರ್ಶನೋತ್ಸವ ಸಂಪನ್ನ: ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್
ಹಾಸನಾಂಬೆ ದರ್ಶನೋತ್ಸವ ಸಂಪನ್ನ: ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್
ಈ ವರ್ಷ ಪಟಾಕಿ ಅವಘಡಗಳಿಂದ ಹೆಚ್ಚು ಮಂದಿಗೆ ಗಾಯ: ವೈದ್ಯರಿಂದ ಮಾಹಿತಿ
ಈ ವರ್ಷ ಪಟಾಕಿ ಅವಘಡಗಳಿಂದ ಹೆಚ್ಚು ಮಂದಿಗೆ ಗಾಯ: ವೈದ್ಯರಿಂದ ಮಾಹಿತಿ
ನಮ್ಮ ಮೆಟ್ರೋ; ಮುಂದಿನ ವರ್ಷ ಕಾರ್ಯರೂಪಕ್ಕೆ: ಕೃಷ್ಣ ಬೈರೇಗೌಡ
ನಮ್ಮ ಮೆಟ್ರೋ; ಮುಂದಿನ ವರ್ಷ ಕಾರ್ಯರೂಪಕ್ಕೆ: ಕೃಷ್ಣ ಬೈರೇಗೌಡ
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!