AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆರೆಬೇಟೆ’ ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ಆರಗ ಜ್ಞಾನೇಂದ್ರ, ಬಿ.ವೈ. ರಾಘವೇಂದ್ರ

ಟೈಟಲ್ ಸಾಂಗ್​ ಬಿಡುಗಡೆ ಮಾಡುವ ಮೂಲಕ ‘ಕೆರೆಬೇಟೆ’ ಚಿತ್ರತಂಡವು ನಿರೀಕ್ಷೆ ಹೆಚ್ಚಿಸಿದೆ. ಅಪ್ಪಟ ಹಳ್ಳಿ ಸೊಗಡಿನ ಕಥೆ ಈ ಸಿನಿಮಾದಲ್ಲಿ ಇದೆ. ಮಾರ್ಚ್ 15ರಂದು ಈ ಚಿತ್ರ ಬಿಡುಗಡೆ ಆಗಲಿದೆ. ದಿನಕರ್ ತೂಗುದೀಪ ಅವರು ಈ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ. ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿಯ ಹಿನ್ನೆಲೆಯಲ್ಲಿ ಈ ಸಿನಿಮಾದ ಕಥೆ ಸಾಗುತ್ತದೆ.

‘ಕೆರೆಬೇಟೆ’ ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ಆರಗ ಜ್ಞಾನೇಂದ್ರ, ಬಿ.ವೈ. ರಾಘವೇಂದ್ರ
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ‘ಕೆರೆಬೇಟೆ’ ಸಿನಿಮಾದ ಟೈಟಲ್​ ಸಾಂಗ್​ ಬಿಡುಗಡೆ ಕಾರ್ಯಕ್ರಮ
Follow us
ಮದನ್​ ಕುಮಾರ್​
|

Updated on: Mar 01, 2024 | 5:46 PM

ಗೌರಿ ಶಂಕರ್​ ನಟನೆಯ, ರಾಜ್​ಗುರು ನಿರ್ದೇಶನದ ಕೆರೆಬೇಟೆ’ (Kerebete) ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಒಂದಷ್ಟು ಕಾರಣಗಳಿಂದಾಗಿ ಈ ಸಿನಿಮಾ ಸುದ್ದಿ ಆಗುತ್ತಿದೆ. ‘ಕೆರೆಬೇಟೆ’ ಸಿನಿಮಾದ ಟ್ರೇಲರ್, ಟೀಸರ್ ಹಾಗೂ ರೊಮ್ಯಾಂಟಿಕ್ ಸಾಂಗ್​ ಈಗಾಗಲೇ ಬಿಡುಗಡೆಯಾಗಿ ಸದ್ದು ಮಾಡಿದೆ. ಈಗ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಮತ್ತೊಂದು ಹಾಡು ಬಿಡುಗಡೆ ಮಾಡಲಾಗಿದೆ. ‘ಕೆರೆಬೇಟೆ’ ಸಿನಿಮಾದಿಂದ ಶೀರ್ಷಿಕೆ ಗೀತೆ ರಿಲೀಸ್ ಆಗಿದೆ. ವಿಶೇಷ ಏನೆಂದರೆ, ಬಿ.ವೈ. ರಾಘವೇಂದ್ರ (BY Raghavendra) ಹಾಗೂ ಆರಗ ಜ್ಞಾನೇಂದ್ರ (Araga Jnanendra) ಅವರು ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಅದ್ದೂರಿಯಾಗಿ ‘ಕೆರೆಬೇಟೆ’ ಸಿನಿಮಾದ ಟೈಟಲ್ ಸಾಂಗ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಮಲೆನಾಡಿನ ಕುರಿತ ಕಥೆ ಇದೆ. ಹಾಗಾಗಿ ಶಿವಮೊಗ್ಗದಲ್ಲಿ ಹೊಸ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷ.

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ವಿಶ್​ ಮಾಡಿದ್ದಾರೆ. ಪ್ರಮೋದ್ ಮರವಂತೆ ಅವರು ‘ಕೆರಿಬ್ಯಾಟಿ ಶುರುವಾತು…’ ಎಂಬ ಈ ಹಾಡನ್ನು ಬರೆದಿದ್ದಾರೆ. ಗಗನ್ ಬಡೇರಿಯಾ ಅವರು ಈ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಕರಿಬಸವ ತಡಕಲ್ ಅವರ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ. ‘ಕೆರೆಬೇಟೆ’ ಸಿನಿಮಾ ಈ ಗೀತೆಯನ್ನು ಕೇಳಿ ಆರಗ ಜ್ಞಾನೇಂದ್ರ ಮತ್ತು ಬಿ.ವೈ. ರಾಘವೇಂದ್ರ ಅವರು ಮೆಚ್ಚುಗೆ ಸೂಚಿಸಿದರು. ಬಳಿಕ ಶುಭ ಕೋರಿದರು.

ಇದನ್ನೂ ಓದಿ: ಮಲೆನಾಡಿನ ಕಥೆಯ ಝಲಕ್​ ತೋರಿಸಿದ ‘ಕೆರೆಬೇಟೆ’ ಟ್ರೇಲರ್​; ಮಾ.15ಕ್ಕೆ ಸಿನಿಮಾ ಬಿಡುಗಡೆ

ಹಾಡು ಬಿಡುಗಡೆ ಆದ ಬಳಿಕ ಮಾತನಾಡಿದ ಬಿ.ವೈ. ರಾಘವೇಂದ್ರ ಅವರು ‘ಈ ಚಿತ್ರ ಸಂಪೂರ್ಣವಾಗಿ ಮಲೆನಾಡಿನ ಸುತ್ತಮುತ್ತ ಚಿತ್ರೀಕರಣಗೊಂಡಿದೆ. ಅಲ್ಲದೇ, ಮಲೆನಾಡಿನವರೇ ಸೇರಿಕೊಂಡು ಈ ಸಿನಿಮಾವನ್ನು ಮಾಡಿದ್ದಾರೆ. ಮಲೆನಾಡಿನ ಪರಿಸರದ ಸೌಂದರ್ಯವನ್ನು ಬಹಳ ಸುಂದರವಾಗಿ ತೋರಿಸಲಾಗಿದೆ. ಈ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಹೇಳಿದರು.

ಇದನ್ನೂ ಓದಿ: ‘ಕೆರೆಬೇಟೆ’ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್ ಮಾಡಿದ ಉಪೇಂದ್ರ

ಆರಗ ಜ್ಞಾನೇಂದ್ರ ಅವರು ಮಾತನಾಡಿ, ‘ಇತ್ತೀಚಿನ ವರ್ಷಗಳಲ್ಲಿ ಮಲೆನಾಡ ಸಂಸ್ಕೃತಿ ಕಣ್ಮರೆ ಆಗುತ್ತಿದೆ. ಹಲವು ಪದ್ಧತಿಗಳು ಮರೆಯಾಗಿವೆ. ಈಗ ಕೆರೆಬೇಟೆ ಸಂಸ್ಕೃತಿ ಕುರಿತು ಸಿನಿಮಾ ಮಾಡಿರುವುದು ಬಹಳ ಖುಷಿ ಆಗುತ್ತದೆ. ಟ್ರೇಲರ್ ಹಾಗೂ ಹಾಡುಗಳು ಚೆನ್ನಾಗಿ ಮೂಡಿಬಂದಿವೆ. ಹೀರೋ, ನಿರ್ಮಾಪಕ, ನಿರ್ದೇಶಕ ಸೇರಿದಂತೆ ಈ ಚಿತ್ರತಂಡದಲ್ಲಿ ಎಲ್ಲರೂ ಮಲೆನಾಡಿನವರೇ ಎಂಬುದು ಖುಷಿಯ ಸಂಗತಿ. ಈ ಸಿನಿಮಾ ಎಲ್ಲ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗಲಿ’ ಎಂದು ಹಾರೈಸಿದರು.

‘ಕೆರೆಬೇಟೆ’ ಸಿನಿಮಾದಿಂದ ಶೀರ್ಷಿಕೆ ಗೀತೆ:

‘ಜನಮನ ಸಿನಿಮಾಸ್​’ ಸಂಸ್ಥೆಯ ಮೂಲಕ ಮೂಡಿಬಂದಿರುವ ಈ ಸಿನಿಮಾ ಮಾರ್ಚ್​ 15ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರಕ್ಕಾಗಿ ‘ಕೆರೆಬೇಟೆ’ ತಂಡದವರು ಹೊಸ ಹೊಸ ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ನಿಜವಾದ ಕೆರೆಬೇಟೆ ಆಟಗಾರರು ಕೂಣಿ ಹಿಡಿದು ಎಲ್ಲ ಜಿಲ್ಲೆಗಳಲ್ಲಿ ಬೈಕ್ ರ‍್ಯಾಲಿ ಹೊರಡಲಿದ್ದಾರೆ. ಹಾಡಿನ ಬಿಡುಗಡೆ ಬಳಿಕ ರ‍್ಯಾಲಿಗೆ ಚಾಲನೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ