AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ ರಾಕಿ ಭಾಯ್​ ಅಮ್ಮ ಅರ್ಚನಾ ಜೋಯಿಸ್​ಗೆ ಬಂತು ಬಿಗ್​ ಆಫರ್​

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಎಂದಷ್ಟೇ ಚಿತ್ರತಂಡ ಹೇಳಿಕೊಂಡಿದೆ. ಆದರೆ, ಪಾತ್ರಗಳ ಬಗ್ಗೆ  ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಕೆಜಿಎಫ್​ ರಾಕಿ ಭಾಯ್​ ಅಮ್ಮ ಅರ್ಚನಾ ಜೋಯಿಸ್​ಗೆ ಬಂತು ಬಿಗ್​ ಆಫರ್​
ಅರ್ಚನಾ ಜೋಯಿಸ್​
ರಾಜೇಶ್ ದುಗ್ಗುಮನೆ
|

Updated on: Apr 14, 2021 | 5:00 PM

Share

ಕೆಜಿಎಫ್ ಚಿತ್ರದಲ್ಲಿ ಅಮ್ಮನ ಪಾತ್ರದ ಮೂಲಕ ಮನೆಮಾತಾಗಿದ್ದವರು ಅರ್ಚನಾ ಜೋಯಿಸ್. ರಾಕಿ ಬಾಯಿ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅರ್ಚನಾ ಖ್ಯಾತಿ ದೇಶಾದ್ಯಂತ ಹಬ್ಬಿದೆ. ಅಷ್ಟೇ ಅಲ್ಲ, ಸಾಲು ಸಾಲು ಸಿನಿಮಾಗಳಲ್ಲಿ ನಟಿಸೋಕೆ ಅವರಿಗೆ ಅವಕಾಶ ಸಿಗುತ್ತಿದೆ. ಈಗ ಅರ್ಚನಾ ಜೋಯಿಸ್​ಗೆ ಬಿಗ್​ ಆಫರ್​ ಒಂದು ಒಲಿದು ಬಂದಿದೆ. ಪ್ಯಾನ್​ ಇಂಡಿಯಾ ಚಿತ್ರದಲ್ಲಿ ನಟಿಸೋಕೆ ಅವಕಾಶ ಸಿಕ್ಕಿದ್ದು, ಈ ಚಿತ್ರಕ್ಕೆ ಮುಂಗಾರುಮಳೆ-2 ನಿರ್ಮಾಪಕ ಹಣ ಹೂಡುತ್ತಿದ್ದಾರೆ ಅನ್ನೋದು ವಿಶೇಷ. ಖ್ಯಾತ ನಿರ್ಮಾಪಕ ಜಿ.ಗಂಗಾಧರ್ ನಿರ್ಮಾಣದ ಹೊಸ ಚಿತ್ರ #ಮ್ಯೂಟ್​​ನಲ್ಲಿ ಅರ್ಚನಾ ಜೋಯಿಸ್ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಶೀರ್ಷಿಕೆಯ ಕುರಿತ 40 ಸೆಕೆಂಡ್ ವಿಡಿಯೊವೊಂದನ್ನು ಚಿತ್ರತಂಡ ಯೂಟ್ಯೂಬ್‍ನಲ್ಲಿ ಹಂಚಿಕೊಂಡಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ತಮಿಳಿನ ಖ್ಯಾತ ನಟ ಆಡುಕಲಂ ನರೇನ್ ನಟಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ ಕೂಡ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.

ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಇದಕ್ಕೂ ಮೊದಲು ಚಿತ್ರದ ಶೀರ್ಷಿಕೆಯನ್ನು ನಟ ರಿಷಿ ಬುಧವಾರ ಬಿಡುಗಡೆಗೊಳಿಸಿದರು. ಮುಂಗಾರುಮಳೆ ಹಾಗೂ ಮೊಗ್ಗಿನಮನಸು ಚಿತ್ರಗಳಲ್ಲಿ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದ ಜಿ.ಗಂಗಾಧರ್ ನಂತರ ಮುಂಗಾರುಮಳೆ-2ಗೆ ಹಣ ಹೂಡಿದ್ದರು. ಈಗ ಅವರು ಪ್ಯಾನ್​ ಇಂಡಿಯಾ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ನವ ನಿರ್ದೇಶಕ ಪ್ರಶಾಂತ್ ಚಂದ್ರ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದು, ಸದ್ದಿಲ್ಲದೆ ಶೂಟಿಂಗ್ ಕೂಡ ಪೂರ್ಣಗೊಂಡಿದೆ.

ಮ್ಯೂಟ್​ ಚಿತ್ರದ ಪೋಸ್ಟರ್

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಎಂದಷ್ಟೇ ಚಿತ್ರತಂಡ ಹೇಳಿಕೊಂಡಿದೆ. ಆದರೆ, ಪಾತ್ರಗಳ ಬಗ್ಗೆ  ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಈ ಬಗ್ಗೆ ಮಾತನಾಡಿರುವ ಪ್ರಶಾಂತ್ ಚಂದ್ರ, ನಿರ್ದೇಶಕನಾಗಿ ಇದು ನನಗೆ ಚೊಚ್ಚಲ ಚಿತ್ರ. ಸಿನಿಮಾದ ಕಥೆ ವಿಭಿನ್ನವಾಗಿದೆ. ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಸಾಕಷ್ಟು ತಿರುವುಗಳು ನೋಡಲು ಸಿಗಲಿವೆ. ಶೂಟಿಂಗ್ ಮುಗಿಯುವವರೆಗೂ ನಾವು ಸಿನಿಮಾ ಕುರಿತು ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಸಿನಿಮಾ ಉತ್ತಮವಾಗಿ ಮೂಡಿ ಬರಲಿದೆ ಎನ್ನುವ ನಂಬಿಕೆ ನಮ್ಮದು ಎಂದಿದ್ದಾರೆ.

#ಮ್ಯೂಟ್ ಶೀರ್ಷಿಕೆಯ ಪೋಸ್ಟರ್ ಬಿಡುಗಡೆ ಮಾಡಿದ ರಿಷಿ ಸಂತಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಪ್ರಶಾಂತ್ ಚಂದ್ರ ಅವರ ನಿರ್ದೇಶನದ ಈ ಸಿನಿಮಾಗೆ ಯಶಸ್ಸು ಸಿಗಲಿ ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: ನಿವೃತ್ತ ಬಸ್​ ಚಾಲಕರ ಪುತ್ರರಾದ ಯಶ್​ ಅವರೇ.. ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು

Yash: ಸೆಲೆಬ್ರಿಟಿ ಸ್ಟೈಲಿಸ್ಟ್​ ಆಲಿಮ್​ ಪಾರ್ಲರ್​ನಲ್ಲಿ ಯಶ್​; ರಾಕಿಂಗ್​ ಸ್ಟಾರ್​ ಲುಕ್​ ಬದಲಾಗಿ ಹೋಯ್ತು

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ