ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಕಳೆದ ತಿಂಗಳು ಕೊರೊನಾ ಪಾಸಿಟಿವ್ ಆಗಿತ್ತು. ಕೆಲ ದಿನಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು ನಂತರ ಚೇತರಿಕೆ ಕಂಡು ಮನೆಗೆ ಬಂದಿದ್ದರು. ಆದರೆ, ಈಗ ಅವರ ಅಣ್ಣ ಕಿರಣ್ ಕೊರೊನಾದಿಂದ ನಿಧನ ಹೊಂದಿದ್ದಾರೆ. ಈ ವಿಚಾರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಅರ್ಜುನ್ ಜನ್ಯ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದಾರೆ. ಕೊರೊನಾದಿಂದ ನಾನು ನನ್ನ ಅಣ್ಣನನ್ನು ಕಳೆದುಕೊಂಡಿದ್ದೇನೆ. ನನ್ನ ನೋವನ್ನು ಹೇಗೆ ವ್ಯಕ್ತಪಡಿಸಬೇಕು ಎಂಬುದು ಗೊತ್ತಾಗುತ್ತಿಲ್ಲ. ನನ್ನ ಉಸಿರು ಇರುವವರೆಗೂ ನೀನೇ ನನ್ನ ಉಸಿರು ಎಂದು ಅರ್ಜುನ್ ಜನ್ಯ ಹೇಳಿದ್ದಾರೆ.
ಅರ್ಜುನ್ ಜನ್ಯ ಅವರಿಗೆ ಕಳೆದ ತಿಂಗಳು ಕೊರೊನಾ ಪಾಸಿಟಿವ್ ಆಗಿತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ಬಂದು ಕ್ವಾರಂಟೈನ್ ಆಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ನಕಲಿ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆ ಅರ್ಜುನ್ ಜನ್ಯ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ ಈ ಬಗ್ಗೆ ಸೈಬರ್ ಠಾಣೆಗೆ ದೂರು ನೀಡಿದ್ದರು.
ಅರ್ಜುನ್ ಜನ್ಯಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಹಿಂದಿರುಗಿದ್ದಾರೆ. ಈಗ ಅವರು ಚೇತರಿಕೆ ಕಾಣುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ತರಿಸಿದೆ. ಆದರೆ, ಅವರಿಗೆ ಕೊರೊನಾ ಪಾಸಿಟಿವ್ ಆದ ಸಮಯದಲ್ಲಿ ಸಾಕಷ್ಟು ಯೂಟ್ಯೂಬ್ ಚಾನೆಲ್ಗಳು ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ದವು.
ಈ ಬಗ್ಗೆ ಓಪನ್ ಲೆಟರ್ ಬರೆದಿದ್ದ ಅರ್ಜುನ್ ಜನ್ಯ, , ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲ ಯೂಟ್ಯೂಬ್ ಚಾನೆಲ್ಗಳು ನನ್ನ ಬಗ್ಗೆ, ನನ್ನ ಕುಟುಂಬದ ಪರಿಸ್ಥಿತಿ ಹಾಗೂ ಆರೋಗ್ಯದ ಬಗ್ಗೆ ತಪ್ಪು ಮಾಹಿತಿ ಹಂಚಿಕೊಂಡಿದ್ದಾರೆ. ಇದು ಸರಿಹೋಗಬಹುದು ಎಂದು ನಾನು ಸಮಾಧಾನದಿಂದ ಇದ್ದೆ. ಆದರೆ, ಅದು ಹೆಚ್ಚಾಗುತ್ತಿದೆ. ಕೆಲವು ಯೂಟ್ಯೂಬ್ ಚಾನೆಲ್ಗಳು ನೀಡಿದ ಮಾಹಿತಿ ಅಪ್ಪಟ ಸುಳ್ಳು. ನಾನು ಆರೋಗ್ಯವಾಗಿದ್ದೇನೆ. ಕೊವಿಡ್ನಿಂದ ಗುಣಮುಖನಾಗಿ ವೈದ್ಯರ ಸಲಹೆಯಂತೆ ಐಸೋಲೇಷನ್ನಲ್ಲಿದ್ದೆ. ಯೂಟ್ಯೂಬ್ ಚಾನೆಲ್ಗಳು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಬಾರದು.ಈಗಾಗಲೇ ನನ್ನ ಗಮನಕ್ಕೆ ಬಂದಿರುವ ಎಲ್ಲವನ್ನೂ ಸೈಬರ್ ಪೊಲೀಸರಿಗೆ ನೀಡಿದ್ದೇನೆ. ದಯವಿಟ್ಟು ಈ ವಿಡಿಯೋಗಳನ್ನು ತೆಗೆದು ಹಾಕಿ ಎನ್ನುವ ಎಚ್ಚರಿಕೆ ನೀಡಿದ್ದರು.
ಇದನ್ನೂ ಓದಿ: ಅರ್ಜುನ್ ಜನ್ಯ ಆರೋಗ್ಯದಲ್ಲಿ ಚೇತರಿಕೆ; ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ಭಾಗಿ
ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಅರ್ಜುನ್ ಜನ್ಯ ಎಚ್ಚರಿಕೆ! ಸೈಬರ್ ಠಾಣೆಗೆ ದೂರು
Published On - 6:56 pm, Mon, 3 May 21