AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರೀಕರಣಕ್ಕೆ ಮುಂಚೆಯೇ ಶಿವಣ್ಣ, ಉಪ್ಪಿ, ರಾಜ್ ಬಿ ಶೆಟ್ಟಿಗೆ ಸಿನಿಮಾ ತೋರಿಸಿದ ಅರ್ಜುನ್ ಜನ್ಯ

Arjun Janya: ಚಿತ್ರೀಕರಣ ಮುಗಿದ ಮೇಲೆ ಸಿನಿಮಾ ರೆಡಿಯಾಗುತ್ತದೆ ಆದರೆ ಮೊದಲ ಬಾರಿಗೆ ನಿರ್ದೇಶಕರಾಗಲು ಮುಂದಾಗಿರುವ ಅರ್ಜುನ ಜನ್ಯ, ಸಿನಿಮಾ ಚಿತ್ರೀಕರಣಕ್ಕೆ ಮುನ್ನವೇ ಸಿನಿಮಾದಲ್ಲಿ ನಟಿಸಲಿರುವ ಶಿವಣ್ಣ, ರಾಜ್ ಬಿ ಶೆಟ್ಟಿಗೆ ಸಿನಿಮಾ ತೋರಿಸಿಬಿಟ್ಟಿದ್ದಾರಂತೆ! ಅದು ಹೇಗೆ?

ಚಿತ್ರೀಕರಣಕ್ಕೆ ಮುಂಚೆಯೇ ಶಿವಣ್ಣ, ಉಪ್ಪಿ, ರಾಜ್ ಬಿ ಶೆಟ್ಟಿಗೆ ಸಿನಿಮಾ ತೋರಿಸಿದ ಅರ್ಜುನ್ ಜನ್ಯ
ಕನ್ನಡ ಸಿನಿಮಾ 45
ಮಂಜುನಾಥ ಸಿ.
|

Updated on: Apr 28, 2023 | 7:41 PM

Share

ಚಿತ್ರೀಕರಣವಾದ ಮೇಲೆ ಸಿನಿಮಾ ತೋರಿಸುವುದು ವಾಡಿಕೆ ಆದರೆ ಚಿತ್ರೀಕರಣವಾಗುವ ಮುನ್ನವೇ ಅರ್ಜುನ್ ಜನ್ಯ (Arjun Janya) ಸಿನಿಮಾ ತೋರಿಸಿದ್ದಾರಂತೆ! ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಕರಾಗಲು ಹೊರಟಿದ್ದು, ಇವರ ಈ ಸಾಹಸಕ್ಕೆ ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಸಾಥ್ ನೀಡಿದ್ದಾರೆ. ನಿನ್ನೆಯಷ್ಟೆ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿದ್ದು, ಅರ್ಜುನ್ ಜನ್ಯ ಹೇಗೆ ಚಿತ್ರೀಕರಣದ ಮುಂಚೆಯೇ ಸಿನಿಮಾ ತೋರಿಸಿಬಿಟ್ಟರು ಎಂಬ ಬಗ್ಗೆ ಶಿವಣ್ಣ (Shiva Rajkumar) ಹಾಗೂ ರಾಜ್ ಬಿ ಶೆಟ್ಟಿ (Raj B Shetty) ವಿಶೇಷವಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವರಾಜಕುಮಾರ್, ‘ಇದೊಂದು ಫಿಲಾಸಫಿಕಲ್ ಎಂಟರ್ ಟೈನರ್. ಕಳೆದ ಒಂದು ವರ್ಷದಿಂದ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಅರ್ಜುನ್ ಜನ್ಯ ಕಥೆ ಹೇಳಿದಾಗ ತುಂಬಾ ಇಷ್ಟವಾಗಿತ್ತು. ಆ ನಂತರ ಅದೇ ಕತೆಯನ್ನು ಅನಿಮೇಶನ್ ಸಿನಿಮಾ ರೂಪದಲ್ಲಿ ತೋರಿಸಿದರು. ಅವರೊಬ್ಬ ಪ್ರತಿಭಾವಂತ. ಈ ಸಿನಿಮಾದ ನಂತರ ಭಾರತದ ಟಾಪ್ ನಿರ್ದೇಶಕರ ಸಾಲಿನಲ್ಲಿ ಅರ್ಜುನ್ ಜನ್ಯ ಕೂಡ ಒಬ್ಬರಾಗುತ್ತಾರೆ ಎಂಬ ನಂಬಿಕೆಯಿದೆ. ತುಂಬಾ ಪ್ರಬುದ್ಧವಾಗಿರುವ ಪಾತ್ರ ಈ ಚಿತ್ರದಲ್ಲಿದೆ’ ಎಂದರು.

‘ಸಾಮಾನ್ಯವಾಗಿ ನಟರಿಗೆ ನಿರ್ದೇಶಕರು ಚಿತ್ರದ ಕಥೆ ಹೇಳಿದರೆ, ಅರ್ಜುನ್ ಜನ್ಯ ನನಗೆ ಚಿತ್ರವನ್ನೇ ತೋರಿಸಿದರು. ಒಂದು ಚಿತ್ರಕ್ಕೆ ನಾವು ಸಹ ಸಾಕಷ್ಟು ತಯಾರಿ ಮಾಡಿಕೊಳ್ಳುವುದರಿಂದ, ಮೊದಲು ನನ್ನ ತಂಡದ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ ಅರ್ಜುನ್ ಜನ್ಯ ಮತ್ತು ಅವರ ತಂಡದ ಕೆಲಸ ನೋಡಿ ಆಶ್ಚರ್ಯವಾಯಿತು. ಅವರು ಈ ಚಿತ್ರಕ್ಕೆ ಮಾಡಿಕೊಂಡ ತಯಾರಿ ಅದ್ಭುತ. ಒಬ್ಬ ನಟನಾಗಿ, ಪ್ರೇಕ್ಷಕನಾಗಿ ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಯಿದೆ. ಅನಿಮೇಷನ್ ಸಿನಿಮಾ ನೋಡುವಾಗಲೇ ನನಗೆ ಶಿಳ್ಳೆ ಹೊಡೆಯಬೇಕು ಎನಿಸಿತ್ತು’ ಎಂದು ರಾಜ್ ಬಿ ಶೆಟ್ಟಿ, ಅರ್ಜುನ್ ಜನ್ಯರ ಪ್ರಯತ್ನವನ್ನು ಕೊಂಡಾಡಿದರು.

‘ಮೊದಲ ಬಾರಿಗೆ ಹೆಸರಾಂತ ಕಲಾವಿದರು ಮತ್ತು ತಂತ್ರಜ್ಞರ ಜೊತೆ ಈ ಸಿನಿಮಾದಲ್ಲಿ ಅಭಿನಯಿಸುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಬೋಲ್ಡ್ ಆಗಿರುವಂತ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ’ ಎಂದು ಸರಳವಾಗಿ ಮಾತು ಮುಗಿಸಿದರು ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಕೌಸ್ತುಭ ಮಣಿ.

ನಿರ್ಮಾಪಕ ರಮೇಶ್ ರೆಡ್ಡಿ ಅವರಿಗೆ ಅರ್ಜುನ್ ಜನ್ಯ ಹೇಳಿದ ಕಥೆ ಬಹಳ ಇಷ್ಟವಾಯಿತಂತೆ. ‘ಚಿತ್ರದ ಘೋಷಣೆಯಾಗಿ ಹಲವು ತಿಂಗಳಾದರೂ ನಿಧಾನಕ್ಕೆ ಸಾಗುತ್ತಿತ್ತು. ಈ ಬಗ್ಗೆ ಅರ್ಜುನ್ ಜನ್ಯ ಅವರನ್ನು ಕೇಳಿದಾಗ, ಅವರು ಅನಿಮೇಶನ್ ಮೂಲಕ ಸಿನಿಮಾ ತೋರಿಸಿದರು. ಚಿತ್ರೀಕರಣ ಶುರುವಾಗುವುದಕ್ಕಿಂತ ಮೊದಲೇ, ಚಿತ್ರ ತೋರಿಸಿದರು. ನಾವು ಅಂದುಕೊಂಡಿರುವುದಕ್ಕಿಂತ ಸಿನಿಮಾ ಚೆನ್ನಾಗಿ ಬರುತ್ತದೆ ಎಂಬ ನಂಬಿಕೆಯಿದೆ’ ಎಂದರು ರಮೇಶ್ ರೆಡ್ಡಿ.

ಕೊನೆಗೆ ಮಾತನಾಡಿದ ಅರ್ಜುನ್ ಜನ್ಯ, ‘ಚಿತ್ರೀಕರಣ ಈಗ ಶುರುವಾಗುತ್ತಿದ್ದರೂ, ಸುಮಾರು 9 ತಿಂಗಳ ಕಾಲ ಪ್ರೀ-ಪ್ರೊಡಕ್ಷನ್ ಕೆಲಸಗಳನ್ನು ಮಾಡಿ ಈಗ ಚಿತ್ರೀಕರಣಕ್ಕೆ ಹೊರಡುತ್ತಿದ್ದೇವೆ. ಮೊದಲು ಶಿವಣ್ಣ ಅವರಿಗೆ ಕಥೆ ಹೇಳಿದಾಗ, ನೀವೇ ಈ ಸಿನಿಮಾ ಮಾಡಿ ಎಂದು ಹುರುದಿಂಬಿಸಿದರು. ಈ ಚಿತ್ರದ ಮೂಲಕ ಒಂದು ದೊಡ್ಡ ಫಿಲಾಸಫಿಯನ್ನು ಸರಳ ರೀತಿಯಲ್ಲಿ, ಕ್ಲಾಸ್ ಮತ್ತು ಮಾಸ್ ಆಗಿ ಹೇಳುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು. ‘45’ ಚಿತ್ರಕ್ಕೆ 80 ದಿನಗಳ ಕಾಲ ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಕನ್ನಡವಲ್ಲದೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲೂ ಮೂಡಿಬರುತ್ತಿರುವ ಈ ಚಿತ್ರವನ್ನು 2024ರಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘45’ ಚಿತ್ರದ ಮುಹೂರ್ತ ಇತ್ತೀಚೆಗೆ ಮೈಸೂರಿನಲ್ಲಿ ನೆರವೇರಿತು. ದೇವರ ಮೇಲೆ ಚಿತ್ರೀಕರಿಸಲಾದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು, ಗಣ್ಯರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು. ‘45’ ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಂ. ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಕಥೆ-ಚಿತ್ರಕಥೆ ಬರೆದು ಸಂಗೀತ ಸಂಯೋಜಿಸಿದ್ದು, ಸತ್ಯ ಹೆಗಡೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಅನಿಲ್ ಕುಮಾರ್ ಸಂಭಾಷಣೆ ಬರೆದಿದ್ದು, ಕೆ. ಎಂ ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!