AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್​ ಜನ್ಯ ಆರೋಗ್ಯದಲ್ಲಿ ಚೇತರಿಕೆ; ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ಭಾಗಿ

ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್​ 10ರವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹಿಂದಿರುಗಿದ್ದಾರೆ.

ಅರ್ಜುನ್​ ಜನ್ಯ ಆರೋಗ್ಯದಲ್ಲಿ ಚೇತರಿಕೆ; ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ಭಾಗಿ
ಅರ್ಜುನ್​ ಜನ್ಯ
ರಾಜೇಶ್ ದುಗ್ಗುಮನೆ
|

Updated on:Apr 14, 2021 | 5:29 PM

Share

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರಿಗೆ ಕೊವಿಡ್​-19 ಪಾಸಿಟಿವ್​ ಬರುತ್ತಿದೆ. ಅದೇ ರೀತಿ ಸ್ಯಾಂಡಲ್​ವುಡ್​ ಖ್ಯಾತ ಸಂಗೀತನಿರ್ದೇಶಕ ಅರ್ಜುನ್​ ಜನ್ಯ ಅವರಿಗೆ ಇತ್ತೀಚೆಗೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್​ 10ರವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹಿಂದಿರುಗಿದ್ದಾರೆ. ಈಗ ಅವರು ಚೇತರಿಕೆ ಕಾಣುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ತರಿಸಿದೆ. ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದ ಅರ್ಜುನ್​ ಜನ್ಯ, ಕೊವಿಡ್​-19 ಕಾರಣದಿಂದ ಗ್ಯಾಪ್​ ತೆಗೆದುಕೊಂಡಿದ್ದಾರೆ.

ಅರ್ಜುನ್​ ಜನ್ಯ ಅವರ ಆರೋಗ್ಯದ ಕುರಿತಂತೆ ಕಳೆದ ವರ್ಷ ಕೂಡ ಶಾಕಿಂಗ್​ ನ್ಯೂಸ್​ ಕೇಳಿಬಂದಿತ್ತು. ಹೃದಯಾಘಾತ ಆಗಿದ್ದರಿಂದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡರು. ಆ ಘಟನೆ ಬಳಿಕ ಈಗ ಮತ್ತೆ ಅರ್ಜುನ್ ಜನ್ಯ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಅನೇಕ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿರುವ ಅರ್ಜುನ್​ ಜನ್ಯ, ಕಿರುತೆರೆಯ ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​ ರಿಯಾಲಿಟಿ ಶೋ ಜಡ್ಜ್​ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಆ ಎಲ್ಲ ಕೆಲಸಗಳಿಗೆ ಈಗ ಬ್ರೇಕ್​ ಬಿದ್ದಿದೆ. ಕೆಲವೇ ದಿನಗಳ ಹಿಂದೆ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿದವು. ಕೂಡಲೇ ಪರೀಕ್ಷೆ ಮಾಡಿಸಿಕೊಂಡರು. ಪಾಸಿಟಿವ್​ ವರದಿ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾದರು. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದು, ನೆಗೆಟಿವಿವ್​ ವರದಿ ಬಂದ ತಕ್ಷಣ ಮತ್ತೆ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

‘ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್​ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್​ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ’ ಎಂದು ಅರ್ಜುನ್ ಜನ್ಯ ಹೇಳಿಕೊಂಡಿದ್ದರು.

ಇದನ್ನೂ ಓದಿ: Arjun Janya: ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​! ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ

Published On - 5:27 pm, Wed, 14 April 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!