ಅರ್ಜುನ್​ ಜನ್ಯ ಆರೋಗ್ಯದಲ್ಲಿ ಚೇತರಿಕೆ; ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ಭಾಗಿ

ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್​ 10ರವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹಿಂದಿರುಗಿದ್ದಾರೆ.

ಅರ್ಜುನ್​ ಜನ್ಯ ಆರೋಗ್ಯದಲ್ಲಿ ಚೇತರಿಕೆ; ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ಭಾಗಿ
ಅರ್ಜುನ್​ ಜನ್ಯ

Updated on: Apr 14, 2021 | 5:29 PM

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿ ಹಬ್ಬುತ್ತಿದೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರಿಗೆ ಕೊವಿಡ್​-19 ಪಾಸಿಟಿವ್​ ಬರುತ್ತಿದೆ. ಅದೇ ರೀತಿ ಸ್ಯಾಂಡಲ್​ವುಡ್​ ಖ್ಯಾತ ಸಂಗೀತನಿರ್ದೇಶಕ ಅರ್ಜುನ್​ ಜನ್ಯ ಅವರಿಗೆ ಇತ್ತೀಚೆಗೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್​ 10ರವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹಿಂದಿರುಗಿದ್ದಾರೆ. ಈಗ ಅವರು ಚೇತರಿಕೆ ಕಾಣುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ತರಿಸಿದೆ. ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದ ಅರ್ಜುನ್​ ಜನ್ಯ, ಕೊವಿಡ್​-19 ಕಾರಣದಿಂದ ಗ್ಯಾಪ್​ ತೆಗೆದುಕೊಂಡಿದ್ದಾರೆ.

ಅರ್ಜುನ್​ ಜನ್ಯ ಅವರ ಆರೋಗ್ಯದ ಕುರಿತಂತೆ ಕಳೆದ ವರ್ಷ ಕೂಡ ಶಾಕಿಂಗ್​ ನ್ಯೂಸ್​ ಕೇಳಿಬಂದಿತ್ತು. ಹೃದಯಾಘಾತ ಆಗಿದ್ದರಿಂದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡರು. ಆ ಘಟನೆ ಬಳಿಕ ಈಗ ಮತ್ತೆ ಅರ್ಜುನ್ ಜನ್ಯ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಅನೇಕ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿರುವ ಅರ್ಜುನ್​ ಜನ್ಯ, ಕಿರುತೆರೆಯ ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​ ರಿಯಾಲಿಟಿ ಶೋ ಜಡ್ಜ್​ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಆ ಎಲ್ಲ ಕೆಲಸಗಳಿಗೆ ಈಗ ಬ್ರೇಕ್​ ಬಿದ್ದಿದೆ. ಕೆಲವೇ ದಿನಗಳ ಹಿಂದೆ ಅವರಿಗೆ ಕೊರೊನಾ ಲಕ್ಷಣಗಳು ಕಾಣಿಸಿದವು. ಕೂಡಲೇ ಪರೀಕ್ಷೆ ಮಾಡಿಸಿಕೊಂಡರು. ಪಾಸಿಟಿವ್​ ವರದಿ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾದರು. ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದು, ನೆಗೆಟಿವಿವ್​ ವರದಿ ಬಂದ ತಕ್ಷಣ ಮತ್ತೆ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

‘ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್​ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್​ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ’ ಎಂದು ಅರ್ಜುನ್ ಜನ್ಯ ಹೇಳಿಕೊಂಡಿದ್ದರು.

ಇದನ್ನೂ ಓದಿ: Arjun Janya: ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​! ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ

Published On - 5:27 pm, Wed, 14 April 21

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us