AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಅರ್ಜುನ್​ ಜನ್ಯ ಎಚ್ಚರಿಕೆ! ಸೈಬರ್​ ಠಾಣೆಗೆ ದೂರು

ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಹಿಂದಿರುಗಿದ್ದಾರೆ. ಈಗ ಅವರು ಚೇತರಿಕೆ ಕಾಣುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ತರಿಸಿದೆ.

ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಅರ್ಜುನ್​ ಜನ್ಯ ಎಚ್ಚರಿಕೆ! ಸೈಬರ್​ ಠಾಣೆಗೆ ದೂರು
ಅರ್ಜುನ್​ ಜನ್ಯ
ರಾಜೇಶ್ ದುಗ್ಗುಮನೆ
|

Updated on:Apr 16, 2021 | 10:23 PM

Share

ಅರ್ಜುನ್​ ಜನ್ಯ ಅವರಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್​ ಆಗಿತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ಬಂದು ಕ್ವಾರಂಟೈನ್​ ಆಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ನಕಲಿ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆ ಅರ್ಜುನ್​ ಜನ್ಯ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ ಈ ಬಗ್ಗೆ ಸೈಬರ್​ ಠಾಣೆಗೆ ದೂರು ಕೂಡ ನೀಡಿದ್ದಾರೆ.

ಅರ್ಜುನ್​ ಜನ್ಯಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದರಿಂದ ಏಪ್ರಿಲ್​ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಹಿಂದಿರುಗಿದ್ದಾರೆ. ಈಗ ಅವರು ಚೇತರಿಕೆ ಕಾಣುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ತರಿಸಿದೆ. ಆದರೆ, ಅವರಿಗೆ ಕೊರೊನಾ ಪಾಸಿಟಿವ್​ ಆದ ಸಮಯದಲ್ಲಿ ಸಾಕಷ್ಟು ಯೂಟ್ಯೂಬ್​ ಚಾನೆಲ್​ಗಳು ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದವು.

ಈ ಬಗ್ಗೆ ಓಪನ್ ಲೆಟರ್​ ಬರೆದಿರುವ ಅರ್ಜುನ್​ ಜನ್ಯ, ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲ ಯೂಟ್ಯೂಬ್​​ ಚಾನೆಲ್​ಗಳು ನನ್ನ ಬಗ್ಗೆ, ನನ್ನ ಕುಟುಂಬದ ಪರಿಸ್ಥಿತಿ ಹಾಗೂ ಆರೋಗ್ಯದ ಬಗ್ಗೆ ತಪ್ಪು ಮಾಹಿತಿ ಹಂಚಿಕೊಂಡಿದ್ದಾರೆ. ಇದು ಸರಿಹೋಗಬಹುದು ಎಂದು ನಾನು ಸಮಾಧಾನದಿಂದ ಇದ್ದೆ. ಆದರೆ, ಅದು ಹೆಚ್ಚಾಗುತ್ತಿದೆ. ಕೆಲವು ಯೂಟ್ಯೂಬ್​ ಚಾನೆಲ್​ಗಳು ನೀಡಿದ ಮಾಹಿತಿ ಅಪ್ಪಟ ಸುಳ್ಳು. ನಾನು ಆರೋಗ್ಯವಾಗಿದ್ದೇನೆ. ಕೊವಿಡ್​ನಿಂದ ಗುಣಮುಖನಾಗಿ ವೈದ್ಯರ ಸಲಹೆಯಂತೆ ಐಸೋಲೇಷನ್​ನಲ್ಲಿದ್ದೆ. ಯೂಟ್ಯೂಬ್​ ಚಾನೆಲ್​ಗಳು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಬಾರದು.ಈಗಾಗಲೇ ನನ್ನ ಗಮನಕ್ಕೆ ಬಂದಿರುವ ಎಲ್ಲವನ್ನೂ ಸೈಬರ್​ ಪೊಲೀಸರಿಗೆ ನೀಡಿದ್ದೇನೆ. ದಯವಿಟ್ಟು ಈ ವಿಡಿಯೋಗಳನ್ನು ತೆಗೆದು ಹಾಕಿ ಎನ್ನುವ ಎಚ್ಚರಿಕೆ ನೀಡಿದ್ದಾರೆ.

‘ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್​ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್​ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ’ ಎಂದು ಅರ್ಜುನ್ ಜನ್ಯ ಹೇಳಿಕೊಂಡಿದ್ದರು.

ಇದನ್ನೂ ಓದಿ: ಅರ್ಜುನ್​ ಜನ್ಯ ಆರೋಗ್ಯದಲ್ಲಿ ಚೇತರಿಕೆ; ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ಭಾಗಿ

Kichcha Sudep: ಕಿಚ್ಚ ಸುದೀಪ್‌ಗೆ ಕೊರೊನಾ ಸೋಂಕು? ಊಹಾಪೋಹಗಳಿಗೆ ಬಿತ್ತು ತೆರೆ

Published On - 10:11 pm, Fri, 16 April 21

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ