AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರುತಿ ಹರಿಹರನ್​ ಮೀಟೂ ಕಾನೂನು ಸಮರ: ಅರ್ಜುನ್​ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್​

Sruthi Hariharan Me Too Case: ‘ಶೀಘ್ರವೇ ಬೆಂಗಳೂರಿಗೆ ಬರುತ್ತೇನೆ. ಸುದ್ದಿಗೋಷ್ಠಿ ನಡೆಸಿ, ಮುಂದಿನ ವಾರ ಸಂಪೂರ್ಣ ಮಾಹಿತಿ ನೀಡುತ್ತೇನೆ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ. ಮೀಟೂ ಪ್ರಕರಣದಲ್ಲಿ ಅವರಿಗೆ ರಿಲೀಫ್​ ಸಿಕ್ಕಿದೆ.

ಶ್ರುತಿ ಹರಿಹರನ್​ ಮೀಟೂ ಕಾನೂನು ಸಮರ: ಅರ್ಜುನ್​ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್​
ಅರ್ಜುನ್ ಸರ್ಜಾ, ಶ್ರುತಿ ಹರಿಹರನ್
TV9 Web
| Edited By: |

Updated on:Dec 11, 2021 | 11:52 AM

Share

2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದಲ್ಲಿ ಅರ್ಜುನ್​ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್​ (Sruthi Hariharan) ಅವರು ಕೆಲವು ಗಂಭೀರ ಆರೋಪಗಳನ್ನು ಹೊರಿಸಿದ್ದರು. ತಮ್ಮ ಜತೆ ಅರ್ಜುನ್​ ಸರ್ಜಾ (Arjun Sarja) ಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶ್ರುತಿ ಹರಿಹರನ್​ ಆರೋಪಿಸಿದ್ದರು. ಆ ಸಂಬಂಧ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಪೊಲೀಸರಿಗೆ ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ. ಹಾಗಾಗಿ ಪೊಲೀಸರು ಬಿ-ರಿಪೋರ್ಟ್ (B Report) ಸಲ್ಲಿಸಿದ್ದಾರೆ. ಪ್ರಕರಣವೊಂದರ ತನಿಖೆ ಸಮಯದಲ್ಲಿ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಅಗತ್ಯ ಇರುವಷ್ಟು ಸಾಕ್ಷ್ಯಾಧಾರಗಳು ಸಿಗಲಿಲ್ಲ ಎಂದು ವಿಚಾರಣಾ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಅಂತಿಮ ವರದಿಯೇ ಬಿ ರಿಪೋರ್ಟ್‌. ಮೀಟೂ (Me Too Case) ಪ್ರಕರಣದಲ್ಲಿ ಅರ್ಜುನ್​ ಸರ್ಜಾ ಅವರಿಗೆ ರಿಲೀಫ್​ ಸಿಕ್ಕಿದೆ. ಈ ಕುರಿತು ಅವರು ಟಿವಿ9 ಕನ್ನಡ ಜತೆ ಮಾತನಾಡಿದ್ದು, ಪ್ರತಿಕ್ರಿಯೆ ನೀಡಿದ್ದಾರೆ.

‘ನನಗೆ ಜಯ ಸಿಗುತ್ತೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಸದ್ಯ ಕೇರಳದಲ್ಲಿ ಶೂಟಿಂಗ್‌ ಮಾಡುತ್ತಿದ್ದೇನೆ. ಶೀಘ್ರವೇ ಬೆಂಗಳೂರಿಗೆ ಬರುತ್ತೇನೆ. ಬೆಂಗಳೂರಿಗೆ ಬಂದ ನಂತರ ಸುದ್ದಿಗೋಷ್ಠಿ ನಡೆಸುತ್ತೇನೆ. ಮುಂದಿನ ವಾರ ಸಂಪೂರ್ಣ ಮಾಹಿತಿ ನೀಡುತ್ತೇನೆ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ.

ಅರುಣ್​ ವೈದ್ಯನಾಥನ್​ ನಿರ್ದೇಶನದ ‘ವಿಸ್ಮಯ’ ಸಿನಿಮಾದಲ್ಲಿ ಶ್ರುತಿ ಹರಿಹರನ್​ ಮತ್ತು ಅರ್ಜುನ್​ ಸರ್ಜಾ ಅವರು ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್​ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶ್ರುತಿ ಹರಿಹರನ್​ ಆರೋಪ ಹೊರಿಸಿದ ಬಳಿಕ ಇಡೀ ಸ್ಯಾಂಡಲ್​ವುಡ್​ನಲ್ಲಿ ವಿವಾದದ ಬೆಂಕಿ ಹೊತ್ತಿಕೊಂಡಿತ್ತು. ಕೆಲವರು ಶ್ರುತಿ ಪರವಾಗಿ ಮಾತನಾಡಿದ್ದರೆ, ಅನೇಕರು ಅರ್ಜುನ್​ ಸರ್ಜಾಗೆ ಬೆಂಬಲ ನೀಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಬಗ್ಗೆ ಸಭೆ ನಡೆಸಲಾಗಿತ್ತು. ಅಂಬರೀಷ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜಿ ಸಂಧಾನಕ್ಕೆ ಅರ್ಜುನ್​ ಸರ್ಜಾ ಮತ್ತು ಶ್ರುತಿ ಹರಿಹರನ್​ ಒಪ್ಪಿರಲಿಲ್ಲ.

‘ವಿಸ್ಮಯ’ ಶೂಟಿಂಗ್​ ನಡೆದಿದ್ದು 2015-16ರ ಸಮಯದಲ್ಲಿ. ಮೀಟೂ ಆರೋಪ ಕೇಳಿಬಂದಿದ್ದು 2018ರಲ್ಲಿ. ಘಟನೆ ನಡೆದು ಎರಡು ವರ್ಷ ಕಳೆದ ಬಳಿಕ ದೂರು ನೀಡಿದ್ದರಿಂದ ಸಾಕ್ಷಿ ಹುಡುಕುವುದು ಪೊಲೀಸರಿಗೆ ಕಷ್ಟ ಆಗಿರಬಹುದು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಕಬ್ಬನ್​ ಪಾರ್ಕ್​ ಪೊಲೀಸರಿಗೆ ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಕಾರಣ ನ್ಯಾಯಾಲಯಕ್ಕೆ ಬಿ-ರಿಪೋರ್ಟ್​ ಸಲ್ಲಿಸಲಾಗಿದೆ.

ಇದನ್ನೂ ಓದಿ:

ಮೀಟೂ ಕೇಸ್​: ಶ್ರುತಿ ಹರಿಹರನ್​ಗೆ ಹಿನ್ನಡೆ ಬಳಿಕ ಧ್ರುವ ಸರ್ಜಾ, ಮೇಘನಾ ರಾಜ್​ ಪ್ರತಿಕ್ರಿಯೆ ಏನು?

‘ಮಾರ್ಟಿನ್​ ಚಿತ್ರಕ್ಕಾಗಿ ಧ್ರುವ ಸರ್ಜಾ ಡಿಫರೆಂಟ್​ ಹೇರ್​ ಸ್ಟೈಲ್​: ಇಲ್ಲಿದೆ ಮೇಕಿಂಗ್​ ವಿಡಿಯೋ

Published On - 11:51 am, Sat, 11 December 21

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?