AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಅರ್ಜುನ್ ಯೋಗಿ ನಟನೆಯ ‘ವರ್ಣ’

Varna Kannada Movie: ಕೆಲವಾರು ಸಿನಿಮಾಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿಯೂ ನಟಿಸಿರುವ ಅರ್ಜುನ್ ಯೋಗಿ ನಟಿಸಿರುವ ಹೊಸ ಸಿನಿಮಾ ‘ವರ್ಣ’ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ‘ವರ್ಣ’ ಸಿನಿಮಾವನ್ನು ದೇವ ಶರ್ಮ ನಿರ್ದೇಶನ ಮಾಡಿದ್ದು ಪಾವಗಡದ ಉದ್ಯಮಿ ಮಲ್ಲಿನೇನಿ ನವೀನ್ ಚೌಧರಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಭಗವದ್ಗೀತೆಯ ಸಾಲೊಂದರಿಂದ ಪ್ರೇರಿತಗೊಂಡಿರುವುದು ವಿಶೇಷ.

ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಅರ್ಜುನ್ ಯೋಗಿ ನಟನೆಯ ‘ವರ್ಣ’
Varna Kannada Movie
ಮಂಜುನಾಥ ಸಿ.
|

Updated on: Oct 26, 2025 | 1:31 PM

Share

ಕೆಲವಾರು ಸಿನಿಮಾಗಳಲ್ಲಿ (Cinema) ಹಾಗೂ ಧಾರಾವಾಹಿಗಳಲ್ಲಿಯೂ ನಟಿಸಿರುವ ಅರ್ಜುನ್ ಯೋಗಿ ನಟಿಸಿರುವ ಹೊಸ ಸಿನಿಮಾ ‘ವರ್ಣ’ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ‘ವರ್ಣ’ ಸಿನಿಮಾವನ್ನು ದೇವ ಶರ್ಮ ನಿರ್ದೇಶನ ಮಾಡಿದ್ದು ಪಾವಗಡದ ಉದ್ಯಮಿ ಮಲ್ಲಿನೇನಿ ನವೀನ್ ಚೌಧರಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಭಗವದ್ಗೀತೆಯ ಸಾಲೊಂದರಿಂದ ಪ್ರೇರಿತಗೊಂಡಿರುವುದು ವಿಶೇಷ.

ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿರುವ “ಕರ್ಮಣ್ಯೇವಾಧಿಕಾರಸ್ತೇ ಮಾಫಲೇಷು ಕದಾಚನ” ಎಂಬ ಮಾತೇ ಈ ಚಿತ್ರದ ಕಥೆಗೆ ಸ್ಪೂರ್ತಿ ಎಂದಿದ್ದಾರೆ ನಿರ್ದೇಶಕ ದೇವ ಶರ್ಮ. ‘ಮೊದಲು ಇದನ್ನು ಕಿರುಚಿತ್ರ ಮಾಡಲು ಹೊರಟಿದ್ದೆವು. ಆದರೆ ಕಥೆ ಕೇಳಿದ ನಿರ್ಮಾಪಕ ಮಲ್ಲೇನೇನಿ ನವೀನ್ ಚೌಧರಿ, ಕಥೆ ಚೆನ್ನಾಗಿದೆ, ಕಿರುಚಿತ್ರ ಬೇಡ, ಎಲ್ಲಾ ಸಿನಿಮಾಗಳಂತೆಯೇ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡೋಣ ಎಂದು ನಮ್ಮ ಬೆನ್ನೆಲುಬಾಗಿ ನಿಂತರು. ಅವರಿಲ್ಲದೆ ಈ ಸಿನಿಮಾ ಸಾಧ್ಯವಾಗುತ್ತಿರಲಿಲ್ಲ’ ಎಂದರು.

ಸಿನಿಮಾದ ಬಗ್ಗೆ ಮಾತನಾಡಿದ ನಾಯಕ ಅರ್ಜುನ್ ಯೋಗಿ, ‘ದಶಕದ ಹಿಂದೆ ಬಿಡುಗಡೆ ಆಗಿದ್ದ ‘ಸಂಜೆಯಲ್ಲಿ ಅರಳಿದ ಹೂವು’ ನನ್ನ ಮೊದಲ ಸಿನಿಮಾ. ಈಗ ನಟಿಸಿರುವ ‘ವರ್ಣ’ ನನ್ನ ಐದನೇ ಸಿನಿಮಾ. ನಿರ್ದೇಶಕ ದೇವ ಶರ್ಮ ಅವರು ನಾಲ್ಕು ವರ್ಷಗಳ ಹಿಂದೆ ಈ ಚಿತ್ರದ ಕಥೆ ಹೇಳಿದ್ದರು. ಕಾರಣಾಂತರದಿಂದ ಚಿತ್ರ ಆಗ ಆರಂಭವಾಗಿರಲಿಲ್ಲ. ಕಳೆದ ವರ್ಷದ ನವೆಂಬರ್ ನಲ್ಲಿ ಚಿತ್ರೀಕರಣ ಆರಂಭವಾಯಿತು. ಸರಿಯಾಗಿ ಒಂದು ವರ್ಷಕ್ಕೆ ನಮ್ಮ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ಚಿತ್ರದಲ್ಲಿ ನನ್ನ ಪಾತ್ರದ ಹೆಸರು “ವರ್ಣ”. ತಪ್ಪನ್ನು ಸಹಿಸದ, ತಪ್ಪು ಮಾಡಿದವರನ್ನು ಬಿಡದ ಹಳ್ಳಿ ಹುಡುಗನಾಗಿ ಅಭಿನಯಿಸಿದ್ದೇನೆ. ಇದೊಂದು ಹಳ್ಳಿ ಸೊಗಡಿನ ಕಥೆ ಎಂದರು. ‘ವರ್ಣ’ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು, ಆಕ್ಷನ್ ಭರಿತ ಟ್ರೈಲರ್ ಇದಾಗಿದೆ. ಸಿನಿಮಾನಲ್ಲಿ ಆಕ್ಷನ್ ಜೊತೆಗೆ ಪ್ರೇಮಕತೆ, ಅಪ್ಪ-ಮಗನ ಸೆಂಟಿಮೆಂಟ್, ಅಲ್ಲಲ್ಲಿ ಹಾಸ್ಯಗಳು ಸಹ ಇವೆ.

ಇದನ್ನೂ ಓದಿ:ಮಸ್ಕಟ್​​ನಲ್ಲಿ ‘ಜೈ’ ಸಿನಿಮಾದ ಮೊದಲ ಪ್ರೀಮಿಯರ್, ಖುಷಿಯಲ್ಲಿ ರೂಪೇಶ್

ನಾಯಕನಾಗಿ ಅರ್ಜುನ್ ಯೋಗಿ, ನಾಯಕಿಯಾಗಿ ಭವ್ಯ ಗೌಡ, ವಿಲನ್ ಪಾತ್ರದಲ್ಲಿ ಲಂಕೇಶ್ ರಾವಣ ನಟಿಸಿದ್ದಾರೆ. ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ರಮೇಶ್ ಕೃಷ್ಣ ಸಂಗೀತ ನಿರ್ದೇಶನ, ಗೌರಿ ವೆಂಕಟೇಶ್ ಛಾಯಾಗ್ರಹಣ, ಸುಜಿತ್ ನಾಯಕ್ ಸಂಕಲನ, ಚಿನ್ನಯ್ಯ ಮಾಸ್ಟರ್ – ಸಾಗರ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ಹೈಟ್ ಮಂಜು, ಗೀತಾ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಈಗ ಟೀಸರ್ ಅನಾವರಣವಾಗಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟ್ರೇಲರ್ ಸಹ ಬರಲಿದೆ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ