ಅಕ್ಕಿನೇನಿ ನಾಗಾರ್ಜುನಗೆ ಆಶಿಕಾ ರಂಗನಾಥ್ ನಾಯಕಿ? ಟಾಲಿವುಡ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ

Ashika Ranganath: ಅಕ್ಕಿನೇನಿ ನಾಗಾರ್ಜುನ ಅವರು ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವಿಶೇಷ ದಿನದಂದು ಅವರ ಹೊಸ ಸಿನಿಮಾ ಘೋಷಣೆ ಆಯಿತು. ಈ ಚಿತ್ರಕ್ಕೆ ‘ನಾ ಸಾಮಿ ರಂಗ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಆಶಿಕಾ ರಂಗನಾಥ್ ಅವರನ್ನು ನಾಯಕಿಯನ್ನಾಗಿ ಮಾಡಿಕೊಳ್ಳುವ ನಿರ್ಧಾರವನ್ನು ತಂಡ ತೆಗೆದುಕೊಂಡಿದೆ.

ಅಕ್ಕಿನೇನಿ ನಾಗಾರ್ಜುನಗೆ ಆಶಿಕಾ ರಂಗನಾಥ್ ನಾಯಕಿ? ಟಾಲಿವುಡ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ
ಆಶಿಕಾ-ನಾಗಾರ್ಜುನ
Follow us
ರಾಜೇಶ್ ದುಗ್ಗುಮನೆ
|

Updated on:Sep 07, 2023 | 10:39 AM

ನಟಿ ಆಶಿಕಾ ರಂಗನಾಥ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಟಾಲಿವುಡ್​ ಹಾಗೂ ಕಾಲಿವುಡ್ ಕದವನ್ನೂ ಅವರು ತಟ್ಟಿ ಬಂದಿದ್ದಾರೆ. ಈಗ ಆಶಿಕಾ ರಂಗನಾಥ್ (Ashika Ranganath) ಅವರಿಗೆ ಟಾಲಿವುಡ್​ನಿಂದ ಭರ್ಜರಿ ಆಫರ್ ಸಿಕ್ಕಿದೆ. ಟಾಲಿವುಡ್ ಸ್ಟಾರ್ ಹೀರೋ ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಅವರದ್ದಾಗಿದೆ ಎನ್ನುತ್ತಿವೆ ಮೂಲಗಳು. ಈ ವಿಚಾರದ ಬಗ್ಗೆ ಅವರ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಅಕ್ಕಿನೇನಿ ನಾಗಾರ್ಜುನ ಅವರು ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವಿಶೇಷ ದಿನದಂದು ಅವರ ಹೊಸ ಸಿನಿಮಾ ಘೋಷಣೆ ಆಯಿತು. ಈ ಚಿತ್ರಕ್ಕೆ ‘ನಾ ಸಾಮಿ ರಂಗ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಸಖತ್ ರಗಡ್ ಅವತಾರದಲ್ಲಿ ನಾಗಾರ್ಜುನ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ವಿಜಯ್ ಬಿನ್ನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀನಿವಾಸ ಚಿತ್ತುರಿ ಅವರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಆಶಿಕಾ ರಂಗನಾಥ್ ಅವರನ್ನು ನಾಯಕಿಯನ್ನಾಗಿ ಮಾಡಿಕೊಳ್ಳುವ ನಿರ್ಧಾರವನ್ನು ತಂಡ ತೆಗೆದುಕೊಂಡಿದೆ.

ಇತ್ತೀಚೆಗೆ ಹೈದರಾಬಾದ್​ನಲ್ಲಿ ಫೋಟೋಶೂಟ್ ನಡೆದಿದೆ ಎಂದು ತಿಳಿದು ಬಂದಿದೆ. ಆಶಿಕಾ ಅವರು ಸಖತ್ ಗ್ಲಾಮರಸ್ ಆಗಿದ್ದಾರೆ. ಅವರಿಗೆ ತೆಲುಗು ಭಾಷೆಯ ಮೇಲೆ ಹಿಡಿತ ಇದೆ. ನಟನೆಯಲ್ಲೂ ಅವರು ಪಳಗಿದ್ದಾರೆ. ಈ ಕಾರಣದಿಂದ ಆಶಿಕಾ ಅವರನ್ನು ಫೈನಲ್ ಮಾಡಲಾಗಿದೆ ಎನ್ನಲಾಗಿದೆ. ಕಲ್ಯಾಣ್ ರಾಮ್ ನಟನೆಯ ತೆಲುಗಿನ ‘ಅಮಿಗೋಸ್’ ಚಿತ್ರದಲ್ಲಿ ಆಶಿಕಾ ನಟಿಸಿದ್ದರು. ಈಗ ಅವರಿಗೆ ಮತ್ತೊಂದು ಟಾಲಿವುಡ್ ಆಫರ್ ಬಂದಿದೆ.

ಇದನ್ನೂ ಓದಿ: ‘ಮನೆ ಬಳಿ ಬರಬೇಡಿ’: ಹುಟ್ಟುಹಬ್ಬದ ದಿನ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡ ನಟಿ ಆಶಿಕಾ ರಂಗನಾಥ್​

ಆಶಿಕಾ ರಂಗನಾಥ್ ಅವರು 2016ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಮುಗುಳು ನಗೆ’, ‘ರ‍್ಯಾಂಬೋ 2’ ಮೊದಲಾದ ಚಿತ್ರಗಳಿಂದ ಅವರ ಜನಪ್ರಿಯತೆ ಹೆಚ್ಚಿತು. ‘ಒ2’ ಹಾಗೂ ‘ಗತವೈಭವ’ ಸಿನಿಮಾಗಳಲ್ಲಿ ಆಶಿಕಾ ರಂಗನಾಥ್ ನಟಿಸುತ್ತಿದ್ದಾರೆ. ದಿನ ಕಳೆದಂತೆ ಅವರಿಗೆ ಬೇಡಿಕೆ ಹೆಚ್ಚುತ್ತಿದೆ. ಇನ್ನು, ಅಕ್ಕಿನೇನಿ ನಾಗಾರ್ಜುನ ಅವರು ‘ಬಿಗ್ ಬಾಸ್ ತೆಲುಗು ಸೀಸನ್ 7’ ಕೂಡ ನಡೆಸಿಕೊಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ಹಾಗೂ ‘ಬಿಗ್ ಬಾಸ್​’ನ ನಿರೂಪಣೆಯನ್ನು ನಿರ್ವಹಿಸಿಕೊಂಡು ಹೋಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:10 am, Thu, 7 September 23

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್