ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ; ಮೊದಲ ದಿನವೇ ಮಗನಿಗೆ ಆಕರ್ಷಕ ಗಿಫ್ಟ್​!

2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. ಈಗ ಅವರು ತಾಯಿಯಾದ ಸಂಭ್ರಮದಲ್ಲಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ; ಮೊದಲ ದಿನವೇ ಮಗನಿಗೆ ಆಕರ್ಷಕ ಗಿಫ್ಟ್​!
ನಟಿ ಮಯೂರಿ

Updated on: Mar 16, 2021 | 3:30 PM

ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಖ್ಯಾತಿ ಪಡೆದಿರುವ ನಟಿ ಮಯೂರಿ ಅವರ ಬದುಕಿನಲ್ಲೀಗ ಹೊಸ ಅಧ್ಯಾಯ ಆರಂಭ ಆಗಿದೆ. ಲಾಕ್​ಡೌನ್​ನಲ್ಲಿ ಮದುವೆ ಆಗಿದ್ದ ಅವರು ಈಗ ತಾಯಿ ಆಗಿದ್ದಾರೆ. ಮಾ.15ರಂದು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಸಂತೋಷದ ಸುದ್ದಿಯನ್ನು ಸೋಶಿಯಲ್​ ಮೀಡಿಯಾ ಮೂಲಕ ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

’ಗಂಡುಮಗು ಜನಿಸಿದೆ. ನಮ್ಮ ಮನೆಗೆ ಪುಟಾಣಿ ಆಗಮಿಸಿದ್ದಾನೆ. ಈ ಸುಮಧುರವಾದ ಅನುಭವವನ್ನು ಹೇಳಿಕೊಳ್ಳಲು ಪದಗಳೇ ಇಲ್ಲ. ಇನ್ನೊಂದು ಸುಂದರ ಪಯಣವನ್ನು ಆರಂಭಿಸುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ನನ್ನ ಮೇಲಿರಲಿ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿರುವ ಮಯೂರಿ ಅವರು ಇನ್ನೂ ಮಗುವಿನ ಫೋಟೋ ಬಹಿರಂಗಪಡಿಸಿಲ್ಲ. ಮುದ್ದು ಕಂದನನ್ನು ನೋಡಲು ಅವರ ಫ್ಯಾನ್ಸ್​ ಕಾಯುತ್ತಿದ್ದಾರೆ.

ಸೆಲೆಬ್ರಿಟಿಗಳ ಮಕ್ಕಳು ಸೋಶಿಯಲ್​ ಮೀಡಿಯಾದಲ್ಲಿ ಜನಪ್ರಿಯರಾಗುವುದು ಸಹಜ. ಮಯೂರಿ ಮಗನೂ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಅಚ್ಚರಿ ಏನೆಂದರೆ, ತಾಯಿಯಾದ ದಿನವೇ ಮಗನಿಗಾಗಿ ಮಯೂರಿ ಒಂದು ಗಿಫ್ಟ್​ ನೀಡಿದ್ದಾರೆ. ಏನದು? ಸೋಶಿಯಲ್​ ಮೀಡಿಯಾ ಅಕೌಂಟ್​! ಹೌದು, ಮಗನಿಗಾಗಿ ಮಯೂರಿ ಒಂದು ಹೊಸ ಇನ್​ಸ್ಟಾಗ್ರಾಮ್​ ಖಾತೆ ತೆರದಿದ್ದಾರೆ. starboii_1111 ಹೆಸರಿನ ಖಾತೆಯಲ್ಲಿ ಮಗನ ಕೈ ಬೆರಳಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ವಿಶೇಷ ಏನೆಂದರೆ, ಈ ಖಾತೆಯನ್ನು ಈಗಾಗಲೇ ಸಾವಿರಾರು ಜನರು ಫಾಲೋ ಮಾಡುತ್ತಿದ್ದಾರೆ.

ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಸೀರಿಯಲ್​ ಮೂಲಕ ಹೆಚ್ಚು ಖ್ಯಾತಿ ಪಡೆದ ಮಯೂರಿ, ನಂತರ ಸಿನಿಮಾಗೂ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ಗಮನಾರ್ಹ ಪಾತ್ರ ಮಾಡಿದರು. ಇತ್ತೀಚೆಗೆ ಬಿಡುಗಡೆಯಾದ ‘ಪೊಗರು’ ಸಿನಿಮಾದಲ್ಲಿ ಧ್ರುವ ಸರ್ಜಾಗೆ ತಂಗಿಯಾಗಿ ಅವರು ನಟಿಸಿದ್ದಾರೆ. 2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. ಈಗ ಅವರು ತಾಯಿಯಾದ ಸಂಭ್ರಮದಲ್ಲಿದ್ದಾರೆ. ಹಲವು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ.

ಇದನ್ನೂ ಓದಿ: ತುಂಬು ಗರ್ಭಿಣಿ ನಟಿ ಮಯೂರಿಗೆ ಹಲ್ವಾ ಜಜರತ್ ತಿನ್ನಿಸಿದ ಹಾಸ್ಯ ನಟ ಸಿಹಿ ಕಹಿ ಚಂದ್ರು..!

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us