Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ

Puneeth Namana: ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ. ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ.

Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ
Follow us
| Edited By: Rajesh Duggumane

Updated on:Nov 16, 2021 | 4:34 PM

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ. ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್​ಕುಮಾರ್​ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.

2000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂ ಹಾಗೂ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.  ಬೆಂಗಳೂರಿನ ಅರಮನೆ‌ ಮೈದಾನದ ಗಾಯತ್ರಿ ವಿಹಾರ್​​ನಲ್ಲಿ ‘ಪುನೀತ ನಮನ‌’ ಕಾರ್ಯಕ್ರಮ ನಡೆಯುತ್ತಿದೆ.

ಪುನೀತ ನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್​​ಗೆ ಬ್ರೇಕ್ ಹಾಕಲಾಗಿದೆ. ಚಿತ್ರಪ್ರದರ್ಶನ ಹೊರತುಪಡಿಸಿ ಯಾವ ಸಿನಿಮಾ ಕೆಲಸಗಳು ನಡೆಯುವುದಿಲ್ಲ. ಕಾರ್ಯಕ್ರಮಕ್ಕೆ‌ ಎಲ್ಲರೂ ಬರಲಿ ಅನ್ನೋ ಉದ್ದೇಶದಿಂದ‌ ಈ ನಿರ್ಧಾರ ಮಾಡಲಾಗಿದೆ.  ಪುನೀತ ನಮನದಲ್ಲಿ ಮನರಂಜನೆಗೆ ಯಾವುದೇ ಅವಕಾಶ‌‌ ಇಲ್ಲದೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಕ್ರಮ ಆರಂಭಗೊಂಡು ಸಂಜೆ ಆರು ಗಂಟೆಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

 Khushbu: ಬೆಂಗಳೂರಿಗೆ ಆಗಮಿಸಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೆ ಸಾಂತ್ವನ ಹೇಳಿದ ಖುಷ್ಬೂ

Published On - 4:18 pm, Tue, 16 November 21

ತಾಜಾ ಸುದ್ದಿ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ