AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪೋಸ್ಟರ್ ಮೂಲಕ ‘ಗಂಧದ ಗುಡಿ’ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಪುನೀತ್​ ರಾಜ್​ಕುಮಾರ್ ನಿಧನ ಹೊಂದಿದ ದಿನಾಂಕಕ್ಕಿಂತ ಒಂದು ದಿನ ಮೊದಲು ಈ ಸಾಕ್ಷ್ಯಚಿತ್ರ ರಿಲೀಸ್​ ಆಗುತ್ತಿದೆ. ಇದು ಥಿಯೇಟರ್​​ನಲ್ಲಿ ರಿಲೀಸ್ ಆಗಲಿರುವ ಪುನೀತ್ ಅವರ ಕೊನೆಯ ಚಿತ್ರ ಆಗಲಿದೆ.

ಹೊಸ ಪೋಸ್ಟರ್ ಮೂಲಕ ‘ಗಂಧದ ಗುಡಿ’ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್
ಗಂಧದ ಗುಡಿ
TV9 Web
| Edited By: |

Updated on:Jul 15, 2022 | 8:38 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ಅವರು ರಾಜ್ಯದ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರದ ನಿರ್ಮಾಣದಲ್ಲಿ ಅಪಾರ ಆಸಕ್ತಿ ತೋರಿದ್ದರು. ಅವರು ‘ಗಂಧದಗುಡಿ’ (Gandhadagudi) ಹೆಸರಿನ ಡಾಕ್ಯುಮೆಂಟರಿಯನ್ನು ನಿರ್ಮಾಣ ಮಾಡಿದ್ದರು. ಈ ಸಾಕ್ಷ್ಯ ಚಿತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗ ಈ ಡಾಕ್ಯುಮೆಂಟರಿ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಪುನೀತ್ ನಿಧನ ಹೊಂದಿದ ಒಂದು ದಿನಾಂಕಕ್ಕಿಂತ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ತೆರೆಗೆ ಅಪ್ಪಳಿಸಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು, ‘ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್​​ಗೆ ಫ್ಯಾನ್ಸ್ ಭಾವುಕರಾಗಿ ಕಮೆಂಟ್ ಹಾಕುತ್ತಿದ್ದಾರೆ.

ಇದನ್ನೂ ಓದಿ
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಪುನೀತ್ ರಾಜ್​ಕುಮಾರ್ ಅತಿಥಿ ಪಾತ್ರ ಮಾಡಿದ ‘ಲಕ್ಕಿ ಮ್ಯಾನ್​’ ಸಿನಿಮಾ ಆಗಸ್ಟ್ ತಿಂಗಳಲ್ಲಿ ತೆರೆಗೆ ಬರಲಿದೆ. ಹೀಗಾಗಿ ಅವರ ಕೊನೆಯ ಚಿತ್ರ ಎಂದರೆ ‘ಗಂಧದ ಗುಡಿ’. ಪುನೀತ್​ ರಾಜ್​ಕುಮಾರ್ ನಿಧನ ಹೊಂದಿದ ದಿನಾಂಕಕ್ಕಿಂತ ಒಂದು ದಿನ ಮೊದಲು ಈ ಸಾಕ್ಷ್ಯಚಿತ್ರ ರಿಲೀಸ್​ ಆಗುತ್ತಿದೆ. ಇದು ಥಿಯೇಟರ್​​ನಲ್ಲಿ ರಿಲೀಸ್ ಆಗಲಿರುವ ಪುನೀತ್ ಅವರ ಕೊನೆಯ ಚಿತ್ರ ಆಗಲಿದೆ. ಈ ಕಾರಣಕ್ಕೆ ಫ್ಯಾನ್ಸ್ ಭಾವನಾತ್ಮಕವಾಗಿ ಕನೆಕ್ಟ್ ಆಗುತ್ತಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಟ್ವಿಟರ್ ಖಾತೆಯಿಂದ ಬ್ಲೂಟಿಕ್ ಮಾಯ; ಕಾರಣ ಏನು?

ಪುನೀತ್​ ರಾಜ್​ಕುಮಾರ್​ ಅವರ ‘ಪಿಆರ್​ಕೆ ಸ್ಟುಡಿಯೋಸ್​’ ಮೂಲಕ ‘ಗಂಧದಗುಡಿ’ ನಿರ್ಮಾಣ ಆಗಿದೆ. ಈ ಡಾಕ್ಯುಮೆಂಟರಿಯ ಟೈಟಲ್​ಅನ್ನು ನವೆಂಬರ್ 2021ಕ್ಕೆ ರಿಲೀಸ್ ಮಾಡಲು ಪುನೀತ್ ಅವರು ಚಿಂತನೆ ನಡೆಸಿದ್ದರು. ಆದರೆ, ಅವರು 2021ರ ಅಕ್ಟೋಬರ್ 29ರಂದು ನಿಧನರಾದರು. ಈಗ ಇದನ್ನು ರಿಲೀಸ್ ಮಾಡುವ ಜವಾಬ್ದಾರಿಯನ್ನು ಅಶ್ವಿನಿ ಅವರು ತೆಗೆದುಕೊಂಡಿದ್ದಾರೆ.

Published On - 7:15 pm, Fri, 15 July 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ