ಪುನೀತ್ ರಾಜ್ಕುಮಾರ್ (Puneeth Rajkumar) ಅವರು ರಾಜ್ಯದ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರದ ನಿರ್ಮಾಣದಲ್ಲಿ ಅಪಾರ ಆಸಕ್ತಿ ತೋರಿದ್ದರು. ಅವರು ‘ಗಂಧದಗುಡಿ’ (Gandhadagudi) ಹೆಸರಿನ ಡಾಕ್ಯುಮೆಂಟರಿಯನ್ನು ನಿರ್ಮಾಣ ಮಾಡಿದ್ದರು. ಈ ಸಾಕ್ಷ್ಯ ಚಿತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗ ಈ ಡಾಕ್ಯುಮೆಂಟರಿ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಪುನೀತ್ ನಿಧನ ಹೊಂದಿದ ಒಂದು ದಿನಾಂಕಕ್ಕಿಂತ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ತೆರೆಗೆ ಅಪ್ಪಳಿಸಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು, ‘ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ಗೆ ಫ್ಯಾನ್ಸ್ ಭಾವುಕರಾಗಿ ಕಮೆಂಟ್ ಹಾಕುತ್ತಿದ್ದಾರೆ.
ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ. pic.twitter.com/s3SRaeAZme
— Ashwini Puneeth Rajkumar (@Ashwini_PRK) July 15, 2022
ಪುನೀತ್ ರಾಜ್ಕುಮಾರ್ ಅತಿಥಿ ಪಾತ್ರ ಮಾಡಿದ ‘ಲಕ್ಕಿ ಮ್ಯಾನ್’ ಸಿನಿಮಾ ಆಗಸ್ಟ್ ತಿಂಗಳಲ್ಲಿ ತೆರೆಗೆ ಬರಲಿದೆ. ಹೀಗಾಗಿ ಅವರ ಕೊನೆಯ ಚಿತ್ರ ಎಂದರೆ ‘ಗಂಧದ ಗುಡಿ’. ಪುನೀತ್ ರಾಜ್ಕುಮಾರ್ ನಿಧನ ಹೊಂದಿದ ದಿನಾಂಕಕ್ಕಿಂತ ಒಂದು ದಿನ ಮೊದಲು ಈ ಸಾಕ್ಷ್ಯಚಿತ್ರ ರಿಲೀಸ್ ಆಗುತ್ತಿದೆ. ಇದು ಥಿಯೇಟರ್ನಲ್ಲಿ ರಿಲೀಸ್ ಆಗಲಿರುವ ಪುನೀತ್ ಅವರ ಕೊನೆಯ ಚಿತ್ರ ಆಗಲಿದೆ. ಈ ಕಾರಣಕ್ಕೆ ಫ್ಯಾನ್ಸ್ ಭಾವನಾತ್ಮಕವಾಗಿ ಕನೆಕ್ಟ್ ಆಗುತ್ತಿದ್ದಾರೆ.
ಇದನ್ನೂ ಓದಿ: ಪುನೀತ್ ರಾಜ್ಕುಮಾರ್ ಟ್ವಿಟರ್ ಖಾತೆಯಿಂದ ಬ್ಲೂಟಿಕ್ ಮಾಯ; ಕಾರಣ ಏನು?
ಪುನೀತ್ ರಾಜ್ಕುಮಾರ್ ಅವರ ‘ಪಿಆರ್ಕೆ ಸ್ಟುಡಿಯೋಸ್’ ಮೂಲಕ ‘ಗಂಧದಗುಡಿ’ ನಿರ್ಮಾಣ ಆಗಿದೆ. ಈ ಡಾಕ್ಯುಮೆಂಟರಿಯ ಟೈಟಲ್ಅನ್ನು ನವೆಂಬರ್ 2021ಕ್ಕೆ ರಿಲೀಸ್ ಮಾಡಲು ಪುನೀತ್ ಅವರು ಚಿಂತನೆ ನಡೆಸಿದ್ದರು. ಆದರೆ, ಅವರು 2021ರ ಅಕ್ಟೋಬರ್ 29ರಂದು ನಿಧನರಾದರು. ಈಗ ಇದನ್ನು ರಿಲೀಸ್ ಮಾಡುವ ಜವಾಬ್ದಾರಿಯನ್ನು ಅಶ್ವಿನಿ ಅವರು ತೆಗೆದುಕೊಂಡಿದ್ದಾರೆ.
Published On - 7:15 pm, Fri, 15 July 22