ಪಾರ್ವತಮ್ಮ, ಪುನೀತ್ ಹೆಸರಲ್ಲಿ 2 ಬಂಗಾರದ ಪದಕ ಘೋಷಿಸಿದ ಅಶ್ವಿನಿ; ‘ದೊಡ್ಮನೆ ಯಾವತ್ತಿಗೂ ದೊಡ್ಮನೆ’ ಎಂದ ಅಭಿಮಾನಿಗಳು

| Updated By: shivaprasad.hs

Updated on: Mar 22, 2022 | 3:38 PM

Ashwini Puneeth Rajkumar | University of Mysore: ಪ್ರತಿ ವರ್ಷ ಮೈಸೂರು ವಿಶ್ವವಿದ್ಯಾನಿಲಯ ಘಟಿಕೋತ್ಸವದಲ್ಲಿ ಪಾರ್ವತಮ್ಮ ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಎರಡು ಬಂಗಾರದ ಪದಕ ಪ್ರದಾನ ಮಾಡುವುದಾಗಿ ಅಶ್ವಿನಿ ಪುನೀತ್ ರಾಜ್​ಕುಮಾರ್ ತಿಳಿಸಿದ್ದಾರೆ.

ಪಾರ್ವತಮ್ಮ, ಪುನೀತ್ ಹೆಸರಲ್ಲಿ 2 ಬಂಗಾರದ ಪದಕ ಘೋಷಿಸಿದ ಅಶ್ವಿನಿ; ‘ದೊಡ್ಮನೆ ಯಾವತ್ತಿಗೂ ದೊಡ್ಮನೆ’ ಎಂದ ಅಭಿಮಾನಿಗಳು
ಪಾರ್ವತಮ್ಮ ರಾಜ್​ಕುಮಾರ್, ಪುನೀತ್ (ಎಡ ಚಿತ್ರ), ಮೈಸೂರು ವಿವಿಯಿಂದ ಪುನೀತ್ ಪರ ಗೌರವ ಡಾಕ್ಟರೇಟ್ ಸ್ವೀಕರಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್
Follow us on

ಮೈಸೂರು: ಸಿನಿಮಾ ಕ್ಷೇತ್ರದಲ್ಲಿನ ಸಾಧನೆ ಹಾಗೂ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರಿಗೆ ಮೈಸೂರು ವಿಶ್ವವಿದ್ಯಾನಿಲಯವು ಇಂದು ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಪುನೀತ್ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಗೌರವವನ್ನು ಸ್ವೀಕರಿಸಿದ್ದಾರೆ. ಪ್ರತಿ ವರ್ಷ ಮೈಸೂರು ವಿಶ್ವವಿದ್ಯಾನಿಲಯ ಘಟಿಕೋತ್ಸವದಲ್ಲಿ ಎರಡು ಬಂಗಾರದ ಪದಕ ಪ್ರದಾನ ಮಾಡುವುದಾಗಿ ಅಶ್ವಿನಿ (Ashwini Puneeth Rajkumar) ಘೋಷಿಸಿದ್ದಾರೆ. ಪಾರ್ವತಮ್ಮ ರಾಜ್​ಕುಮಾರ್ (Parvathamma Rajkumar) ಹಾಗೂ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಪದಕಗಳನ್ನು ಪ್ರದಾನ ಮಾಡಲಾಗುತ್ತದೆ. ಬ್ಯುಸಿನೆಸ್ ಮ್ಯಾನೇಜ್​ಮೆಂಟ್ ವಿಭಾಗದಲ್ಲಿ ಪಾರ್ವತಮ್ಮ ರಾಜ್​ಕುಮಾರ್ ಬಂಗಾರದ ಪದಕ ಹಾಗೂ ಲಲಿತಕಲೆ ವಿಭಾಗದಲ್ಲಿ ಪುನೀತ್ ಪದಕವನ್ನು ಘೋಷಿಸಲಾಗಿದೆ. ಮುಂದಿನ ವರ್ಷದಿಂದ ಈ ವಿಭಾಗಗಳಲ್ಲಿ ಪದಕ ಪ್ರದಾನ ಮಾಡಲಾಗುತ್ತದೆ. ಅಶ್ವಿನಿಯವರ ನಿರ್ಧಾರಕ್ಕೆ ಅಭಿಮಾನಿಗಳು ತೀವ್ರ ಸಂತಸ ಹಂಚಿಕೊಂಡಿದ್ದು, ‘ದೊಡ್ಮನೆ ಎಂದೆಂದಿಗೂ ದೊಡ್ಮನೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಮ್ಮೆಯಿಂದ ಅನಿಸಿಕೆ ಹಂಚಿಕೊಂಡಿದ್ದಾರೆ.

ಡಾ.ರಾಜ್​ಕುಮಾರ್ 46 ವರ್ಷಗಳ ಹಿಂದೆ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್​ಗೆ ಭಾಜನರಾಗಿದ್ದರು. ಇದೀಗ ಪುನೀತ್​ಗೆ ಮರಣೋತ್ತರವಾಗಿ ಅದೇ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಲಭಿಸಿದೆ. ಈ ವಿಶೇಷ ಕ್ಷಣಕ್ಕೆ ಡಾ.ರಾಜ್​ಕುಮಾರ್ ಕುಟುಂಬದ ಸದಸ್ಯರು ಸಾಕ್ಷಿಯಾಗಿದ್ದರು. ರಾಘವೇಂದ್ರ ರಾಜ್​ಕುಮಾರ್, ಪತ್ನಿ ಮಂಗಳಾ, ಯುವ ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಅವರ ಸಹೋದರಿ ಲಕ್ಷ್ಮೀ ಗೋವಿಂದರಾಜು, ವಿನಯ್ ರಾಜ್‌ಕುಮಾರ್, ಧನ್ಯಾ ರಾಮ್‌ಕುಮಾರ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಗೌರವ ಡಾಕ್ಟರೇಟ್ ಪಡೆದ ಕುರಿತು ಅಶ್ವಿನಿ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ, ‘‘ಕುಟುಂಬ, ಅಭಿಮಾನಿಗಳು ಹಾಗೂ ಸ್ನೇಹಿತರ ಪರವಾಗಿ ಪುನೀತ್​ ರಾಜ್​ಕುಮಾರ್ ಅವರ ಗೌರವ ಡಾಕ್ಟರೇಟ್ ಸ್ವೀಕರಿಸಲಾಯಿತು. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರೀತಿಪೂರ್ವಕ ವಂದನೆಗಳು’’ ಎಂದು ಬರೆದಿದ್ದಾರೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವದಲ್ಲಿ 28,581 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 213 ವಿದ್ಯಾರ್ಥಿಗಳಿಗೆ ಪದಕ‌ ಪ್ರದಾನ ಮಾಡಲಾಯಿತು.

ಇದನ್ನೂ ಓದಿ:

ಪುನೀತ್​ಗೆ​ ಮೈಸೂರು ವಿವಿಯಿಂದ ಡಾಕ್ಟರೇಟ್​; ಕಾರ್ಯಕ್ರಮದಲ್ಲಿ ರಾಜ್​ ಕುಟುಂಬ ಭಾಗಿ

ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ ನಟ ಜಗ್ಗೇಶ್​-ಪರಿಮಳಾ ಮದುವೆಗೆ ಈಗ 38 ವರ್ಷ; ಇಲ್ಲಿದೆ ಅಚ್ಚರಿಯ ಸ್ಟೋರಿ

Published On - 3:38 pm, Tue, 22 March 22