AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಹುಟ್ಟುಹಬ್ಬಕ್ಕೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಗೈರು, ಕಾರಣವೇನು?

Ashwini Puneeth Rajkumar: ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದಂದು ಅಪ್ಪು ಅವರ ಸ್ಮಾರಕಕ್ಕೆ ದೊಡ್ಮನೆಯ ಹಲವು ಸದಸ್ಯರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಆದರೆ ಅಪ್ಪುರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಬಂದಿರಲಿಲ್ಲ. ಇದಕ್ಕೆ ಕಾರಣವೂ ಇದೆ.

ಪುನೀತ್ ಹುಟ್ಟುಹಬ್ಬಕ್ಕೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಗೈರು, ಕಾರಣವೇನು?
ಮಂಜುನಾಥ ಸಿ.
|

Updated on: Mar 17, 2024 | 1:19 PM

Share

ದಿವಂಗತ ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರ 49ನೇ ವರ್ಷದ ಹುಟ್ಟುಹಬ್ಬ ಇಂದು. ಅವರಿಲ್ಲದಿದ್ದರೂ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹು ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ದೊಡ್ಮನೆ ಕುಟುಂಬದವರು ಸಹ ಕಂಠೀರವ ಸ್ಟುಡಿಯೋದ ಪುನೀತ್ ಸಮಾಧಿಗೆ ಭೇಟಿ ನೀಡಿ ಪೊಜೆ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜ್​ಕುಮಾರ್, ಅವರ ಪತ್ನಿ ಪೂರ್ಣಿಮಾ, ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಇನ್ನೂ ಹಲವರು ಸಮಾಧಿಗೆ ಭೇಟಿ ನೀಡಿದ್ದರು. ಪುನೀತ್ ರಾಜ್​ಕುಮಾರ್ ಎರಡನೇ ಪುತ್ರಿ ಸಹ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಆದರೆ ಪುನೀತ್​ರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಪೂಜೆಯಲ್ಲಿ ಭಾಗವಹಿಸಿರಲಿಲ್ಲ. ಅದಕ್ಕೆ ಕಾರಣವೂ ಇದೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಅಪ್ಪು ಹುಟ್ಟುಹಬ್ಬವನ್ನು ಅಥವಾ ಅಪ್ಪುಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ಳುವುದಿಲ್ಲ. ಆದರೆ ಇಂದು ಪುನೀತ್​ರ ಹುಟ್ಟುಹಬ್ಬಕ್ಕೆ ಅಶ್ವಿನಿ ಅವರು ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಅವರ ಪುತ್ರಿ, ಪೂಜೆ ಕಾರ್ಯಕ್ರಮಗಳನ್ನು ಮಾಡಿದರು. ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಕುಟುಂಬದವರು ಕಾರ್ಯಗಳನ್ನು ನೆರವೇರಿಸಿದರು.

ಅಸಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಅಸಲಿಗೆ ಬೆಂಗಳೂರಿನಲ್ಲಿಲ್ಲ. ಅವರು ಮುಂಬೈಗೆ ತೆರಳಿದ್ದಾರೆ. ಸಿನಿಮಾ ಕೆಲಸಕ್ಕಲ್ಲ, ಬದಲಿಗೆ ದೊಡ್ಮನೆಯ ಕುಲದೇವತೆಯ ಪೂಜೆಗೆ. ದೊಡ್ಮನೆಯ ಕುಲದೇವತೆ ವಜ್ರೇಶ್ವರಿ ದೇವಿಯ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪುನೀತ್​ರ ಹುಟ್ಟುಹಬ್ಬದ ದಿನದಂದೇ ಮುಂಬೈನ ವಜ್ರೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಮಾಡಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಚಿತ್ರರಂಗದಲ್ಲಿ ದಿಟ್ಟ ಹೆಜ್ಜೆಯೊಂದನ್ನು ಇಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ವಜ್ರೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಜಾಕಿ’ ಸಿನಿಮಾ ನೋಡಲು ಬಂದು ಚಿತ್ರಮಂದಿರದಲ್ಲಿ ಭಾವುಕರಾಗಿ ನಿಂತ ಅಶ್ವಿನಿ ಪುನೀತ್​ ರಾಜ್​ಕುಮಾರ್​

ಈಗಾಗಲೇ ಪಿಆರ್​ಕೆ ಪ್ರೊಡಕ್ಷನ್ ಹಾಗೂ ಪಿಆರ್​ಕೆ ಆಡಿಯೋಸ್ ಅನ್ನು ನೋಡಿಕೊಳ್ಳುತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಇನ್ನು ಮುಂದೆ ವಜ್ರೇಶ್ವರಿ ಕಂಬೈನ್ಸ್ ಅನ್ನೂ ಸಹ ನೋಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಅಪ್ಪು ಹುಟ್ಟುಹಬ್ಬದಂದೇ ವಜ್ರೇಶ್ವರಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಿದ್ದಾರೆ. ಪಿಆರ್​ಕೆ ಸ್ಟುಡಿಯೋಸ್​ನ ಸಿಬ್ಬಂದಿಯನ್ನು ಸಹ ಮುಂಬೈಗೆ ಅಶ್ವಿನಿ ಕರೆಸಿಕೊಳ್ಳುತ್ತಿದ್ದು, ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.

ಪುನೀತ್ ಅಗಲಿಕೆ ಬಳಿಕ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಪಿಆರ್​ಕೆ ಪ್ರೊಡಕ್ಷನ್​ನ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದು, ‘ಗಂಧದ ಗುಡಿ’ ಸಿನಿಮಾ ಬಿಡುಗಡೆ ಮಾಡಿಸಿ ದೊಡ್ಡ ಹಿಟ್ ಸಿನಿಮಾ ಆಗುವಂತೆ ಮಾಡಿದರು. ಅದಾದ ಬಳಿಕ ಕೆಲ ತಿಂಗಳ ಹಿಂದೆ ಮಹಿಳಾ ಶಕ್ತಿಯ ಕತೆ ಹೇಳುವ ‘ಆಚಾರ್ ಆಂಡ್ ಕೋ’ ಸಿನಿಮಾ ನಿರ್ಮಾಣ ಮಾಡಿ ಬಿಡುಗಡೆ ಮಾಡಿದರು. ಆ ಸಿನಿಮಾ ಸಹ ಹಿಟ್ ಎನಿಸಿಕೊಂಡಿತು. ಇದೀಗ ‘ಓ 2’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದು, ಬಿಡುಗಡೆ ಇನ್ನೂ ಆಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ