AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾರೈಕೆಯಿಂದ ಸೆಟ್ಟೇರಿತು ‘ರಕ್ಕಿ’ ಸಿನಿಮಾ

ಹೊಸ ನಟ ರಕ್ಕಿ ಅವರು ನಾಯಕನಾಗಿ ಅಭಿನಯಿಸುತ್ತಿರುವ ‘ರಕ್ಕಿ’ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಅಶ್ವಿನಿ ಪುನೀತ್​ ರಾಜ್​ಕುಮಾರ್ ಅವರು ಮುಹೂರ್ತ ಸಮಾರಂಭಕ್ಕೆ ಬಂದು ತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಚಿತ್ರದಲ್ಲಿ ರಕ್ಕಿ ಜೊತೆ ಆಶಿಕಾ ಸೋಮಶೇಖರ್, ಪಲ್ಲವಿ ಮಂಜುನಾಥ್ ಮುಂತಾದವರು ನಟಿಸುತ್ತಿದ್ದಾರೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾರೈಕೆಯಿಂದ ಸೆಟ್ಟೇರಿತು ‘ರಕ್ಕಿ’ ಸಿನಿಮಾ
Ashwini Puneeth Rajkumar, Rakki
ಮದನ್​ ಕುಮಾರ್​
|

Updated on: Oct 28, 2025 | 4:19 PM

Share

ಜರ್ಮನಿಯಲ್ಲಿ ಅನೇಕ ವರ್ಷಗಳಿಂದ ನೆಲೆಸಿರುವ ಸಾಲಿಗ್ರಾಮ ಮೂಲದ ಸುರೇಶ್ ಅವರು ‘ರಕ್ಕಿ’ ಸಿನಿಮಾ (Rakki Movie) ನಿರ್ಮಾಣ ಮಾಡುತ್ತಿದ್ದಾರೆ. ಸುರೇಶ್ ಅವರ ಮಗ ರಕ್ಕಿ ಅವರೇ ಈ ಚಿತ್ರದ ನಾಯಕ. ಅವರ ಹೆಸರನ್ನೇ ಸಿನಿಮಾಗೆ ಶೀರ್ಷಿಕೆಯಾಗಿ ಇಡಲಾಗಿದೆ. ಅಶ್ವಿನಿ ಪುನೀತ್ ರಾಜ್​​​ಕುಮಾರ್ (Ashwini Puneeth Rajkumar) ಅವರ ಆಶೀರ್ವಾದದೊಂದಿಗೆ ಈ ಸಿನಿಮಾ ಸೆಟ್ಟೇರಿದೆ. ‘ಎಸ್.ಎನ್.ಆರ್. ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ವೆಂಕಟ್ ಭಾರದ್ವಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ‘ರಕ್ಕಿ’ ಸಿನಿಮಾದ ಮುಹೂರ್ತ ಸಮಾರಂಭ ನಡೆಯಿತು.

ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ‘ರಕ್ಕಿ’ ಸಿನಿಮಾದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸುವ ಮೂಲಕ ಚಾಲನೆ ನೀಡಿದರು. ಸಿನಿಮಾ ಯಶಸ್ವಿ ಆಗಲೆಂದು ಅವರು ಹಾರೈಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡದ ಸದಸ್ಯರು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು. ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಕಥೆ ಕೇಳಿ ಚೆನ್ನಾಗಿದೆ ಎಂದ ಬಳಿಕವೇ ಸುರೇಶ್ ಅವರು ಈ ಸಿನಿಮಾ ಮಾಡಲು ಮುಂದಾಗಿದ್ದು.

‘ನಾನು ಐಟಿ ಉದ್ಯೋಗಿ. 20 ವರ್ಷಗಳಿಂದ ಜರ್ಮನಿಯಲ್ಲಿ ವಾಸಿಸುತ್ತಿದ್ದೇನೆ. ನಮ್ಮ ತಂದೆ ರಾಜಶೇಖರ್ ಅವರು ಡಾ. ರಾಜ್​ಕುಮಾರ್ ನಟನೆ ಹೊಸಬೆಳಕು ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈಗ ನಾನು ರಕ್ಕಿ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ. ನಮ್ಮ ಕುಟುಂಬದ ಸ್ನೇಹಿತರಾದ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಒಪ್ಪಿದ ಕಥೆಯನ್ನು ಆಯ್ಕೆ ಮಾಡಿಕೊಂಡು ಸಿನಿಮಾ ಮಾಡುತ್ತಿದ್ದೇವೆ’ ಎಂದು ನಿರ್ಮಾಪಕ ಸುರೇಶ್ ಅವರು ಹೇಳಿದರು.

Rakki Movie Team

Rakki Movie Team

‘ಆ್ಯಕ್ಷನ್, ಸಸ್ಪೆನ್ಸ್, ಥ್ರಿಲ್ಲರ್ ಅಂಶಗಳು ಈ ಸಿನಿಮಾದ ಕಥೆಯಲ್ಲಿವೆ. ಬೆಂಗಳೂರಿನಲ್ಲಿ ನಿರ್ಮಿಸಿರುವ ಅದ್ದೂರಿ ಸೆಟ್​​ನಲ್ಲಿ ಹೆಚ್ಚಿನ ದೃಶ್ಯಗಳ ಶೂಟಿಂಗ್ ನಡೆಯಲಿದೆ. ಆಶಿಕಾ ಸೋಮಶೇಖರ್, ಪಲ್ಲವಿ ಮಂಜುನಾಥ್ ಅವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಬಿ. ಸುರೇಶ, ಹರಿಣಿ ಶ್ರೀಕಾಂತ್, ರಮೇಶ್ ಪಂಡಿತ್, ಸುಂದರರಾಜ್, ಸಂಪತ್ ಮೈತ್ರೇಯ, ಗಂಟೆ ಗೋವಿಂದ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ’ ಎಂದು ನಿರ್ದೇಶಕ ವೆಂಕಟ್ ಭಾರದ್ವಾಜ್ ಮಾಹಿತಿ ನೀಡಿದರು.

ಇದನ್ನೂ ಓದಿ: ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ

ಲೋಕಿ ತವಸ್ಯ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಐಸ್ಸಾಕ್ಸ್ ಪ್ರಭಾಕರ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಸಂಕಲನದ ಜವಾಬ್ದಾರಿ ದೀಪು ಎಸ್. ಕುಮಾರ್ ಅವರದ್ದು. ಲಾರೆನ್ಸ್ ಪ್ರೀತಮ್ ಅವರ ಸಹ-ನಿರ್ದೇಶನ ಈ ಸಿನಿಮಾಗಿದೆ. ಈ ಸಿನಿಮಾದಲ್ಲಿ ಭೂಗತ ಲೋಕದ ದೊರೆಯಾಗಿ ಬಿ. ಸುರೇಶ ನಟಿಸುತ್ತಿದ್ದಾರೆ. ಸಾಕಷ್ಟು ತಯಾರಿ ಮಾಡಿಕೊಂಡು ನಟ ರಕ್ಕಿ ಅವರು ಈ ಸಿನಿಮಾಗೆ ಹೀರೋ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್