ಪುನೀತ್ ಮಾವ, ಅಶ್ವಿನಿ ತಂದೆ ಹೃದಯಾಘಾತದಿಂದ ನಿಧನ; ರಾಜ್​ ಕುಟುಂಬದಲ್ಲಿ ಮತ್ತೆ ಆವರಿಸಿದ ದುಃಖ

ರಾಜ್​ಕುಮಾರ್​ ಕುಟುಂಬದಲ್ಲಿ ಮತ್ತೆ ಸೂತಕದ ವಾತಾವರಣ ನಿರ್ಮಾಣ ಆಗಿದೆ. ಪುನೀತ್ ರಾಜ್​ಕುಮಾರ್​ ಮಾವ, ಅಶ್ವಿನಿ ಅವರ ತಂದೆ ರೇವನಾಥ್​ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪುನೀತ್ ಮಾವ, ಅಶ್ವಿನಿ ತಂದೆ ಹೃದಯಾಘಾತದಿಂದ ನಿಧನ; ರಾಜ್​ ಕುಟುಂಬದಲ್ಲಿ ಮತ್ತೆ ಆವರಿಸಿದ ದುಃಖ
ಅಶ್ವಿನಿ - ಪುನೀತ್​ ರಾಜ್​ಕುಮಾರ್​
Follow us
TV9 Web
| Updated By: ಮದನ್​ ಕುಮಾರ್​

Updated on:Feb 20, 2022 | 4:34 PM

ಪುನೀತ್ ರಾಜ್​ಕುಮಾರ್​ ಮಾವ ಭಾಗಮನೆ ರೇವನಾಥ್​ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಇಂದು (ಫೆ.20) ಅವರ ನಿಧನದಿಂದ (Revanath Death) ದೊಡ್ಮನೆಯಲ್ಲಿ ಶೋಕ ಮಡುಗಟ್ಟಿದೆ. ಅಶ್ವಿನಿ ಪುನೀತ್​ ರಾಜ್​ಕುಮಾರ್ (Ashwini Puneeth Rajkumar)​ ಅವರ ತಂದೆ ಭಾಗಮನೆ ರೇವನಾಥ್​ ಅವರಿಗೆ 78 ವರ್ಷ ವಯಸ್ಸಾಗಿತ್ತು. 20 ವರ್ಷಗಳ ಹಿಂದೆ ಅವರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಎನ್​ಹೆಚ್​ಎಐ ಮುಖ್ಯ ಇಂಜಿನಿಯರ್​ ಆಗಿ ರೇವನಾಥ್​ ಕೆಲಸ ಮಾಡಿದ್ದರು. ಪುನೀತ್​ ರಾಜ್​ಕುಮಾರ್​ ನಿಧನದ ನಂತರ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ನಿಧನ ಹೊಂದಿದ್ದಾರೆ. ಕೆಲವೇ ತಿಂಗಳ ಹಿಂದೆ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಅಶ್ವಿನಿ ಅವರಿಗೆ ತೀವ್ರ ಆಘಾತ ಉಂಟು ಮಾಡಿತ್ತು. ಆ ನೋವು ಇನ್ನೂ ಹಸಿಯಾಗಿ ಇರುವಾಗಲೇ ಮತ್ತೊಂದು ಶಾಕ್ ಎದುರಾಗಿದೆ.

ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರ ಸ್ಥಿತಿ ಕಂಡು ಅಭಿಮಾನಿಗಳು ಮರುಗುತ್ತಿದ್ದಾರೆ. ಕೆಲವೇ ತಿಂಗಳ ಅಂತರದಲ್ಲಿ ಪತಿ ಮತ್ತು ತಂದೆಯನ್ನು ಅವರು ಕಳೆದುಕೊಳ್ಳುವಂತಾಗಿದ್ದು ನಿಜಕ್ಕೂ ದುಃಖದ ಸಂಗತಿ. ಪತಿಯ ಅಗಲಿಕೆಯ ನೋವನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮರೆಯಲು ಸಾಧ್ಯವಿಲ್ಲ. ಅದರ ನಡುವೆಯೂ ಅವರು ಪುನೀತ್ ಬಿಟ್ಟುಹೋದ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ಗಮನ ಹರಿಸಿದ್ದರು. ಅಷ್ಟರಲ್ಲಾಗಲೇ ತಂದೆಯ ನಿಧನದಿಂದ ಅವರಿಗೆ ಮತ್ತೆ ಆಘಾತ ಎದುರಾಗಿದೆ.

ಡಾ. ರಾಜ್​ಕುಮಾರ್​ ಕುಟುಂಬದ ರೀತಿಯೇ ರೇವನಾಥ್ ಫ್ಯಾಮಿಲಿ ಕೂಡ ನೇತ್ರದಾನಕ್ಕೆ ಮುಂದಾಗಿದ್ದಾರೆ. ಅಳಿಯ ಪುನೀತ್​ ರಾಜ್​ಕುಮಾರ್​ ರೀತಿ ರೇವನಾಥ್​ ಕೂಡ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನೇತ್ರದಾನಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ರಾಜ್​ಕುಮಾರ್ ಐ ಬ್ಯಾಂಕ್ ಸಿಬ್ಬಂದಿಗಳು ಎಂ.ಎಸ್​. ರಾಮಯ್ಯ ಆಸ್ಪತ್ರೆಗೆ ಆಗಮಿಸಿದ್ದಾರೆ.

ಭಾನುವಾರ ಬೆಳಗ್ಗೆ ವಾಕ್ ಮಾಡುವಾಗ ರೇವನಾಥ್​ ಕುಸಿದು ಬಿದ್ದಿದ್ದರು. ನಂತರ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ನೇತ್ರದಾನದ ಬಳಿಕ ಬೆಂಗಳೂರಿನ ಆರ್​ಟಿ ನಗರದ ನಿವಾಸ ಅಥವಾ ಚಿಕ್ಕಮಗಳೂರಿಗೆ ಅವರ ಮೃತದೇಹ ರವಾನೆ ಆಗುವ ಸಾಧ್ಯತೆ ಇದೆ.

ಸದಾ ಫಿಟ್​ ಆಗಿರುತ್ತಿದ್ದ ಪುನೀತ್​ ರಾಜ್​ಕುಮಾರ್​ ಅವರಿಗೆ ಹಾರ್ಟ್​ ಅಟ್ಯಾಕ್​ ಆಗಲಿದೆ ಎಂದು ಯಾರೂ ಊಹಿಸಿರಲಿಲ್ಲ. ಆದರೆ ವಿಧಿಯ ಕ್ರೂರತೆಗೆ ಅವರು ಇಹಲೋಕ ತ್ಯಜಿಸುವಂತಾಯಿತು. ಆ ಘಟನೆ ನಡೆದ ಬಳಿಕ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಸೇರಿದಂತೆ ಪುನೀತ್​ ಅವರ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈತೊಳೆದಿತ್ತು. ಅದರಲ್ಲೂ ಪುನೀತ್​ ಪತ್ನಿ ಅಶ್ವಿನಿ ಅವರಿಗೆ ಆದ ನೋವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಎಲ್ಲರೂ ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ. ಪರಭಾಷೆಯ ಅನೇಕ ಸ್ಟಾರ್​ ಕಲಾವಿದರು ಮತ್ತು ತಂತ್ರಜ್ಞರು ಪುನೀತ್​ ನಿವಾಸಕ್ಕೆ ಭೇಟಿ ನೀಡಿ, ಅಶ್ವಿನಿಗೆ ಧೈರ್ಯ ತುಂಬುತ್ತಿದ್ದಾರೆ. ಇನ್ನೇನು ಅವರು ಸಹಜ ಸ್ಥಿತಿಗೆ ಮರಳಲಿದ್ದಾರೆ ಎನ್ನುವಾಗಲೇ ಅವರ ಕುಟುಂಬದಲ್ಲಿ ಮತ್ತೊಂದು ಸಾವು ಸಂಭವಿಸಿದೆ. ತಂದೆಯ ನಿಧನದಿಂದ ಅಶ್ವಿನಿ ಅವರಿಗೆ ತೀವ್ರ ನೋವಾಗಿದೆ.

ಇದನ್ನೂ ಓದಿ:

‘ಕಲಾತಪಸ್ವಿ’ ರಾಜೇಶ್​ ಅಂತ್ಯಸಂಸ್ಕಾರ; ಮಾವನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಅರ್ಜುನ್​ ಸರ್ಜಾ

‘ಒಬ್ಬರಾದ ಮೇಲೆ ಒಬ್ಬರು ಹೋಗುತ್ತಿದ್ದಾರೆ’; ರಾಜೇಶ್​ ನಿಧನಕ್ಕೆ ಕಂಬನಿ ಮಿಡಿದ ಎಸ್​. ನಾರಾಯಣ್​

Published On - 3:37 pm, Sun, 20 February 22

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ