Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

Ashwini Puneeth Rajkumar Interview: ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ವಿಶೇಷ ಸಂದರ್ಶನ ನಡೆಸಿದ್ದಾರೆ. ‘ಗಂಧದ ಗುಡಿ’ ಬಗ್ಗೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ
ಅಶ್ವಿನಿ ಪುನೀತ್​ ರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on:Oct 26, 2022 | 11:04 PM

ನಟ ಪುನೀತ್​ ರಾಜ್​ಕುಮಾರ್​ ಅವರ ನಿಧನದಿಂದ ಅವರ ಇಡೀ ಕುಟುಂಬಕ್ಕೆ ಆದ ನೋವು ಅಷ್ಟಿಷ್ಟಲ್ಲ. ಅದನ್ನು ಪದಗಳಲ್ಲಿ ವಿವರಿಸಲು ಕೂಡ ಸಾಧ್ಯವಿಲ್ಲ. ಆ ಘಟನೆ ಬಳಿಕ ಅಪ್ಪು ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಅವರು ಸಂಪೂರ್ಣ ಮೌನಕ್ಕೆ ಜಾರಿದರು. ಹಲವು ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳಿದರೂ ಕೂಡ ಎಲ್ಲಿಯೂ ಹೆಚ್ಚು ಮಾತನಾಡಿರಲಿಲ್ಲ. ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರದ ಬಗ್ಗೆಯೂ ಅವರು ಸಂದರ್ಶನ (Ashwini Puneeth Rajkumar Interview) ನೀಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಅವರು ಮನಸಾರೆ ಮಾತನಾಡಿದ್ದಾರೆ. ನಿರ್ದೇಶಕ ಸಂತೋಷ್​ ಆನಂದ್​ರಾಮ್​ ನಡೆಸಿದ ವಿಶೇಷ ಸಂದರ್ಶನದಲ್ಲಿ ಅಶ್ವಿನಿ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

‘ಪುನೀತ​ ಪರ್ವ’ ಆಯೋಜನೆ ಮಾಡಿದ ಅನುಭವ ಯಾವ ರೀತಿ ಇತ್ತು ಎಂದು ಕೇಳಿದ ಪ್ರಶ್ನೆಗೆ ಅಶ್ವಿನಿ ಉತ್ತರಿಸಿದ್ದಾರೆ. ‘ನಾವು ಪುನೀತ ಪರ್ವ ಕಾರ್ಯಕ್ರಮ ಮಾಡಿದ್ದೇ ಅಭಿಮಾನಿಗಳಿಗೋಸ್ಕರ. ಎಲ್ಲರಿಗೂ ಆಹ್ವಾನ ನೀಡಿದ್ದೆವು. ಒಂದು ಲಕ್ಷಕ್ಕೂ ಅಧಿಕ ಜನರು ಸೇರಿದ್ದರು. ಚಿತ್ರರಂಗದ ಅನೇಕರು ಬಂದರು. ಅದು ನನಗೆ ಖುಷಿ ನೀಡಿತು. ಅಭಿಮಾನಿಗಳಿಗೆ ನಮ್ಮ ಕುಟುಂಬ ಚಿರಋಣಿ. ಅಪ್ಪು ಅವರ ಕೊನೆಯ ಕಾರ್ಯಕ್ರಮ ಯಶಸ್ವಿ ಆಯಿತು ಅಂತ ನನಗೆ ತೃಪ್ತಿ ಇದೆ. ಮಳೆ ಬರುತ್ತೆ ಎಂಬ ಟೆನ್ಷನ್​ ಇತ್ತು. ಎಲ್ಲರೂ ಚೆನ್ನಾಗಿ ನಡೆಸಿಕೊಟ್ಟರು. ಸರ್ಕಾರ ಮತ್ತು ಪೊಲೀಸರ ಬೆಂಬಲದಿಂದ ನಮ್ಮ ಈ ಕಾರ್ಯಕ್ರಮ ಚೆನ್ನಾಗಿ ಆಯಿತು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Image
Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು
Image
‘ನಾನಿರುವವರೆಗೂ ಈ ಹಾಡು ನನ್ನ ಜತೆ ಇರುತ್ತದೆ’; ‘ಪುನೀತ ಪರ್ವ’ ವೇದಿಕೆ ಮೇಲೆ ರಾಘಣ್ಣ ಭಾವುಕ ನುಡಿ
Image
Puneetha Parva: ‘ಪುನೀತ ಪರ್ವ’ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ

‘ಗಂಧದ ಗುಡಿ’ಯಲ್ಲಿ ಏನು ಡಿಫರೆಂಟ್​?

‘ಇದರಲ್ಲಿ ನಟನೆ ಇಲ್ಲ. ಅಪ್ಪು ಅವರ ಜರ್ನಿಯನ್ನೇ ನೇರವಾಗಿ ಸೆರೆ ಹಿಡಿಯಲಾಗಿದೆ. ನನಗೆ ಇದರ ಬಗ್ಗೆ ತುಂಬ ಹೆಮ್ಮೆ ಇದೆ. ಕನ್ನಡದ ಜನತೆಗೆ ಪುನೀತ್​ ಅವರ ಮೂಲಕ ಕರ್ನಾಟಕವನ್ನು ತೋರಿಸುವ ಕಾರ್ಯ ಆಗುತ್ತಿದೆ. ಶೂಟಿಂಗ್​ ವೇಳೆ ಅವರು ಅವರಾಗಿಯೇ ಇದ್ದರು. ಪ್ರತಿ ಹಂತದ ಶೂಟಿಂಗ್​ನಲ್ಲೂ ಅವರು ಖುಷಿಯಾಗಿದ್ದರು’ ಎಂದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಹೇಳಿದ್ದಾರೆ.

ಕೆಲವೇ ನಿಮಿಷಗಳಲ್ಲಿ ಪ್ರೀಮಿಯರ್​ ಶೋ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿರುವ ಬಗ್ಗೆ ಅಶ್ವಿನಿ ಪ್ರತಿಕ್ರಿಯಿಸಿದ್ದಾರೆ. ‘ಇದು ನನಗೆ ಹೆಮ್ಮೆ ಕೊಟ್ಟಿರುವ ಪ್ರಾಜೆಕ್ಟ್​. ಒಂದು ಕಡೆ ಬೇಸರ, ಇನ್ನೊಂದು ಕಡೆ ಖುಷಿ ಇದೆ. ಎಲ್ಲರೂ ಗಂಧದ ಗುಡಿ ನೋಡಿ, ಆಶೀರ್ವದಿಸಿ’ ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್​ 28ರಂದು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದೆ. ಅದಕ್ಕೂ ಒಂದು ದಿನ ಮುನ್ನ ಅನೇಕ ಕಡೆಗಳಲ್ಲಿ ಪ್ರೀಮಿಯರ್​ ಪ್ರದರ್ಶನ ಆಯೋಜಿಸಲಾಗಿದೆ. ಬಹುತೇಕ ಎಲ್ಲ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. ಇದು ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ಆದ್ದರಿಂದ ದೊಡ್ಡ ಮಟ್ಟದಲ್ಲಿ ಗೆಲುವು ಸಿಗಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:44 pm, Wed, 26 October 22

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ