‘ಪುನೀತ್ ವಿದಾಯದ ದುಃಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ’​;  ಮೊದಲ ಬಾರಿಗೆ ಮೌನ ಮುರಿದ ಅಶ್ವಿನಿ

‘ಪುನೀತ ನಮನ’ ಕಾರ್ಯಕ್ರಮದಲ್ಲೂ ಅಶ್ವಿನಿ ಕಣ್ಣೀರು ಹಾಕಿದರು. ಅಲ್ಲದೆ, ಅರ್ಧದಲ್ಲೆ ಕಾರ್ಯಕ್ರಮದಿಂದ ಹೊರ ನಡೆದರು. ನಂತರ ಅವರು ಸೋಶಿಯಲ್​ ಮೀಡಿಯಾದಲ್ಲಿ ಮೊದಲ ಬಾರಿಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ.

‘ಪುನೀತ್ ವಿದಾಯದ ದುಃಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ’​;  ಮೊದಲ ಬಾರಿಗೆ ಮೌನ ಮುರಿದ ಅಶ್ವಿನಿ
ಅಶ್ವಿನಿ ಪುನೀತ್​


ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಅವರ ಪತ್ನಿ ಅಶ್ವಿನಿ ರಾಜ್​ಕುಮಾರ್​ಗೆ ಈ ನೋವನ್ನು ತಡೆದುಕೊಳ್ಳಲು ಆಗುತ್ತಿಲ್ಲ. ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು. ಅಲ್ಲದೆ, ಅರ್ಧದಲ್ಲೆ ಕಾರ್ಯಕ್ರಮದಿಂದ ಹೊರ ನಡೆದರು. ನಂತರ ಅವರು ಸೋಶಿಯಲ್​ ಮೀಡಿಯಾದಲ್ಲಿ ಮೊದಲ ಬಾರಿಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ.

‘ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಟಾರ್ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೆ ಅವರ ವಿದಾಯ ತಂದಿತ್ತ ದುಃಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ. ಆದರೂ ಇಂತಹ ಸಂದರ್ಭದಲ್ಲಿ ನೀವುಗಳು ಎಲ್ಲಿಯೂ ಸಂಯಮ ಕಳೆದುಕೊಳ್ಳದೇ ಅಹಿತಕರ ಘಟನೆಗಳು ನಡೆಯಲು ಬಿಡದೇ ಅವರಿಗೊಂದು ಅತ್ಯಂತ ಗೌರವಯುತ ಬೀಳ್ಕೊಡುಗೆ ನೀಡುವಲ್ಲಿ ಸಹಕರಿಸಿದ್ದಿರಿ’ ಎಂದು ಪತ್ರ ಆರಂಭಿಸಿದ್ದಾರೆ

‘ಸಿನಿಮಾ ಪ್ರೇಮಿಗಳಷ್ಟೇ ಅಲ್ಲದೇ, ವಯೋಮಾನದ ಮಿತಿಯಿಲ್ಲದೇ, ದೇಶವಿದೇಶಗಳಿಂದ ಕೋಟ್ಯಂತರ ಜನರು ಸಂತಾಪ ಸೂಚಿಸುವುದನ್ನು ಕಂಡಾಗ ಮನಸ್ಸು ಭಾರವಾಗುತ್ತದೆ. ನಿಮ್ಮ ಪ್ರೀತಿಯ ಅಪ್ಪು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಾ ಸಾವಿರಾರು ಸಂಖ್ಯೆಯಲ್ಲಿ ನೇತ್ರದಾನಕ್ಕೆ ನೋಂದಣಿ ಮಾಡಿಸುವುದನ್ನು ನೋಡಿದಾಗ ಕಣ್ಣುಂಬಿ ಬರುತ್ತದೆ. ಅವರನ್ನು ಆದರ್ಶವಾಗಿಟ್ಟುಕೊಂಡು ನೀವುಗಳು ಮಾಡುವ ಸತ್ಕಾರ್ಯಗಳಲ್ಲಿ, ಅವರ ನೆನಪುಗಳು ನಿಮ್ಮಲ್ಲಿ ಮೂಡಿಸುವ ಉತ್ಸಾಹದಲ್ಲಿ ಅವರೆಂದಿಗೂ ಜೀವಂತವಾಗಿರುತ್ತಾರೆ. ವಿಶ್ವದಾದ್ಯಂತ ನಮ್ಮ ಶೋಕವನ್ನು ಹಂಚಿಕೊಂಡು ಬೆಂಬಲಕ್ಕೆ ನಿಂತ ಎಲ್ಲಾ ಸಹೃದಯಿ ಅಭಿಮಾನಿ ದೇವರುಗಳು ಮತ್ತು ಸಾರ್ವಜನಿಕರಿಗೆ ನಮ್ಮ ಇಡೀ ಕುಟುಂಬದ ಪರವಾಗಿ ಹತ್ತೂರ್ವಕ ಧನ್ಯವಾದಗಳು’ ಎಂದು ಪತ್ರ ಪೂರ್ಣಗೊಳಿಸಿದ್ದಾರೆ ಅಶ್ವಿನಿ ಅವರು.

ಇದನ್ನೂ ಓದಿ: ‘ದೇವರು ಪುನೀತ್​ ಬದಲು ನನ್ನನ್ನು ಕರೆದುಕೊಳ್ಳಬಹುದಿತ್ತು’; ಹಿರಿಯ ನಟ ಶರತ್​ಕುಮಾರ್​ ಭಾವುಕ ನುಡಿ

Click on your DTH Provider to Add TV9 Kannada