ಸಿನಿಮಾಗಾಗಿ ಪುನೀತ್​ ಪಡೆದಿದ್ದ ಅಡ್ವಾನ್ಸ್​ ಹಣವನ್ನು ನಿರ್ಮಾಪಕರಿಗೆ ಹಿಂದಿರುಗಿಸಿ ದೊಡ್ಡತನ ಮೆರೆದ ಅಶ್ವಿನಿ ಪುನೀತ್​ ರಾಜ್​ಕುಮಾರ್​

ಸಿನಿಮಾಗಾಗಿ ಪುನೀತ್​ ಪಡೆದಿದ್ದ ಅಡ್ವಾನ್ಸ್​ ಹಣವನ್ನು ನಿರ್ಮಾಪಕರಿಗೆ ಹಿಂದಿರುಗಿಸಿ ದೊಡ್ಡತನ ಮೆರೆದ ಅಶ್ವಿನಿ ಪುನೀತ್​ ರಾಜ್​ಕುಮಾರ್​
ಪುನೀತ್​-ಅಶ್ವಿನಿ

ಪುನೀತ್​ ನಿಧನರಾಗುವುದಕ್ಕೂ ಮೊದಲು ಅನೇಕ ಚಿತ್ರಗಳನ್ನು ಒಪ್ಪಿಕೊಂಡಿದ್ದರು. ಈ ಪೈಕಿ ಅವರು ಮುಖ್ಯಭೂಮಿಕೆ ನಿರ್ವಹಿಸಿರುವ ‘ಜೇಮ್ಸ್​’ ಹಾಗೂ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಲಕ್ಕಿ ಮ್ಯಾನ್​’ ಚಿತ್ರದ ಕೆಲಸಗಳು ಪೂರ್ಣಗೊಂಡಿವೆ.

TV9kannada Web Team

| Edited By: Rajesh Duggumane

Dec 23, 2021 | 1:54 PM

ಡಾ. ರಾಜ್​ಕುಮಾರ್​ ಕುಟುಂಬದ ಔದಾರ್ಯತೆ, ಆ ಕುಟುಂಬದವರ ಒಳ್ಳೆತನದ ಬಗ್ಗೆ ಮತ್ತೆ ವಿವರಿಸಿ ಹೇಳಬೇಕಿಲ್ಲ. ಇಂಥ ಕುಟುಂಬದ ಕುಡಿ ಪುನೀತ್​ ರಾಜ್​ಕುಮಾರ್​ ಅವರು ನಿಧನ ಹೊಂದಿದ ಮೇಲೆ ಅಭಿಮಾನಿಗಳು ತುಂಬಾನೇ ಬೇಸರಗೊಂಡಿದ್ದಾರೆ. ಆದರೆ, ರಾಜ್​ಕುಮಾರ್​ ಕುಟುಂಬಕ್ಕೆ ಅವರು ಬೆಂಬಲವಾಗಿ ನಿಲ್ಲುವುದನ್ನು ಎಂದಿಗೂ ನಿಲ್ಲಿಸಿಲ್ಲ. ಈಗ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಮಾಡಿದ ಒಂದು ಒಳ್ಳೆಯ ಕೆಲಸ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಸಿನಿಮಾ ಇಂಡಸ್ಟ್ರಿಯಲ್ಲಿ ಸಂಭಾವನೆ ವಿಚಾರದಲ್ಲಿ ಜಗಳ, ವೈಮನಸ್ಸು ಏರ್ಪಟ್ಟ ಸಾಕಷ್ಟು ಉದಾಹರಣೆ ಇದೆ. ನಿರ್ಮಾಪಕರು ಸಂಭಾವನೆ ಕೊಟ್ಟಿಲ್ಲ ಎಂದು ದೂರುವ ಅನೇಕ ನಟ/ನಟಿಯರಿದ್ದಾರೆ. ನಿರ್ಮಾಪಕರೂ ಅಷ್ಟೇ, ಹೀರೋ/ಹೀರೋಯಿನ್​​ಗೆ ಹಣ ಕೊಟ್ಟ ಹೊರತಾಗಿಯೂ ಶೂಟಿಂಗ್​ ಬಂದಿಲ್ಲ ಎಂದು ಹೇಳಿಕೊಂಡ ಹಲವಾರು ಪ್ರಕರಣಗಳು ಸಿಗುತ್ತವೆ. ಅಡ್ವಾನ್ಸ್ ಹಣ​ ಪಡೆದುಕೊಂಡ ನಂತರ ಸಿನಿಮಾ ಕ್ಯಾನ್ಸಲ್​ ಆದರೆ, ನಿರ್ಮಾಪಕರಿಗೆ ಹಣ ಹಿಂದಿರುಗಿಸೋಕೆ ಯಾರೂ ಅಷ್ಟು ಸುಲಭವಾಗಿ ಮುಂದೆ ಬರುವುದಿಲ್ಲ. ಆದರೆ, ಪುನೀತ್​ ಕುಟುಂಬದವರು ಆ ರೀತಿ ಅಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಪುನೀತ್​ ನಿಧನರಾಗುವುದಕ್ಕೂ ಮೊದಲು ಅನೇಕ ಚಿತ್ರಗಳನ್ನು ಒಪ್ಪಿಕೊಂಡಿದ್ದರು. ಈ ಪೈಕಿ ಅವರು ಮುಖ್ಯಭೂಮಿಕೆ ನಿರ್ವಹಿಸಿರುವ ‘ಜೇಮ್ಸ್​’ ಹಾಗೂ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಲಕ್ಕಿ ಮ್ಯಾನ್​’ ಚಿತ್ರದ ಕೆಲಸಗಳು ಪೂರ್ಣಗೊಂಡಿವೆ. ಉಳಿದ ಹಲವು ಚಿತ್ರಗಳು ಅರ್ಧಕ್ಕೆ ನಿಂತಿವೆ. ಈ ಪೈಕಿ ಕೆಲ ಸಿನಿಮಾಗಳಿಗೆ ಪುನೀತ್​ ಅಡ್ವಾನ್ಸ್​ ಕೂಡ ಪಡೆದುಕೊಂಡಿದ್ದರು. ಈ ಪೈಕಿ ಒಂದು ಸಿನಿಮಾದ ಅಡ್ವಾನ್ಸ್​ ಅನ್ನು ಪುನೀತ್ ಪತ್ನಿ ಅಶ್ವಿನಿ ಅವರು ನಿರ್ಮಾಪಕರಿಗೆ​ ಹಿಂದಿರುಗಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಹಿರಿಯ ಪತ್ರಕರ್ತ ಶಶಿಧರ್​ ಭಟ್​ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ‘ಅವರು ಕನ್ನಡ ಸಿನಿಮಾ ನಿರ್ಮಾಪಕರು. ಅವರು ನನ್ನ ಪಕ್ಕ ಕುಳಿತಿದ್ದರು. ಆಗ ಅವರಿಗೆ ದೂರವಾಣಿ ಕರೆಯೊಂದು ಬಂತು. ದೂರವಾಣಿ ಕರೆ  ಮಾಡಿದವರು, ‘ಪುನೀತ್​ ತಮ್ಮ ಡೈರಿಯಲ್ಲಿ ಬರೆದಿದ್ದಾರೆ. ನಿಮ್ಮಿಂದ ಸಿನಿಮಾ ಒಂದರ ಮುಂಗಡವಾಗಿ 2.50 ಕೋಟಿ ಪಡೆದಿದ್ದರಂತೆ. ನಾಳೆ ನೀವು ಮನೆಗೆ ಬಂದು ಈ ಹಣವನ್ನು ಪಡೆದುಕೊಂಡು ಹೋಗಿ’ ಎಂದರು ಆ ಮಹಿಳೆ. ಹೀಗೆ ಹೇಳಿದ‌ ಮಹಿಳೆ ಅಶ್ವಿನಿ ಪುನೀತ್ ರಾಜ್​ಕುಮಾರ್. ಇದು ಪ್ರಾಮಾಣಿಕತೆ. ಕನ್ನಡದ ಜನ ಈ ಕುಟುಂಬವನ್ನು ಪ್ರೀತಿಸುವುದು ಈ ಕಾರಣಕ್ಕಾಗಿ. ಕನ್ನಡಿಗರ ಆರಾಧ್ಯ ದೈವ ರಾಜ್ ಕುಟುಂಬ ಇರುವುದೇ ಹೀಗೆ’ ಎಂದು ಅವರು ಬರೆದುಕೊಂಡಿದ್ದಾರೆ. ಆದರೆ, ನಿರ್ಮಾಪಕರ ಹೆಸರನ್ನು ಎಲ್ಲಿಯೂ ಬಿಟ್ಟುಕೊಟ್ಟಿಲ್ಲ. ಸದ್ಯ, ಈ ಪೋಸ್ಟ್​ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಪುನೀತ್​ ಕಂಡ ಕನಸಿನ ಟೈಟಲ್​ ಟೀಸರ್ ರಿಲೀಸ್​​ ದಿನಾಂಕ ಘೋಷಣೆ ಮಾಡಿದ ಅಶ್ವಿನಿ

Follow us on

Related Stories

Most Read Stories

Click on your DTH Provider to Add TV9 Kannada