Puneeth Rajkumar: ‘ಗಂಧದ ಗುಡಿ’ ಪ್ರೀ-ರಿಲೀಸ್ ಇವೆಂಟ್​; ಸಿಎಂಗೆ ಆಹ್ವಾನ ನೀಡಿದ ಡಾ. ರಾಜ್​ಕುಮಾರ್ ಕುಟುಂಬ

Gandhada Gudi pre-release event: ಅ.21ರಂದು ನಡೆಯುವ ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ಗೆ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ವಿನಂತಿಸಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಅನೇಕ ದಿಗ್ಗಜರು ಆಗಮಿಸುವ ನಿರೀಕ್ಷೆ ಇದೆ.

Puneeth Rajkumar: ‘ಗಂಧದ ಗುಡಿ’ ಪ್ರೀ-ರಿಲೀಸ್ ಇವೆಂಟ್​; ಸಿಎಂಗೆ ಆಹ್ವಾನ ನೀಡಿದ ಡಾ. ರಾಜ್​ಕುಮಾರ್ ಕುಟುಂಬ
ಸಿಎಂಗೆ ಆಹ್ವಾನ ನೀಡಿದ ಡಾ. ರಾಜ್​ಕುಮಾರ್ ಕುಟುಂಬ
Follow us
| Updated By: Digi Tech Desk

Updated on:Oct 21, 2022 | 12:43 PM

ಪುನೀತ್​ ರಾಜ್​ಕುಮಾರ್ ಅವರ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ಇದರ ಟ್ರೇಲರ್ ಸಖತ್​ ಸದ್ದು ಮಾಡುತ್ತಿದೆ. ಈ ಡಾಕ್ಯುಮೆಂಟರಿ​ ಬಿಡುಗಡೆ​ ಆಗುವುದಕ್ಕೂ ಮುನ್ನ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್​ ಮಾಡಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಸಲಕ ತಯಾರಿ ನಡೆಯುತ್ತಿದೆ. ಅ.21ರಂದು ಪ್ರೀ-ರಿಲೀಸ್​ ಕಾರ್ಯಕ್ರಮ ಜರುಗಲಿದೆ. ಅದಕ್ಕಾಗಿ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಇಂದು (ಅ.11) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಈ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar), ರಾಘವೇಂದ್ರ ರಾಜ್​ಕುಮಾರ್​, ಯುವ ರಾಜ್​ಕುಮಾರ್​ ಮುಂತಾದವರು ಉಪಸ್ಥಿತರಿದ್ದರು.

ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’. ಹಾಗಾಗಿ ರಾಜ್​ ಕುಟುಂಬದವರು ತುಂಬಾ ಕಾಳಜಿ ವಹಿಸಿ ಇದನ್ನು ದೊಡ್ಡ ಮಟ್ಟದಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಸಿನಿಮಾದ ರೀತಿ ಚಿತ್ರಮಂದಿರದಲ್ಲೇ ಇದು ಬಿಡುಗಡೆ ಆಗಲಿದೆ. ಇದರ ಟ್ರೇಲರ್​ ಬಿಡುಗಡೆ ಆದ ಬಳಿಕ ಅನೇಕ ಗಣ್ಯರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ.

ಅ.21ರಂದು ನಡೆಯಲಿರುವ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ವಿನಂತಿಸಿಕೊಂಡಿದ್ದಾರೆ. ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ‘ಪುನೀತ ಪರ್ವ’ ಎಂದು ಕರೆಯಲಾಗುತ್ತಿದೆ. ಅದಕ್ಕೆ ಭಾರತೀಯ ಚಿತ್ರರಂಗದ ಅನೇಕ ದಿಗ್ಗಜರು ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ಹಲವರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

ಕರುನಾಡಿನ ಅರಣ್ಯ ಸಂಪತ್ತು, ವನ್ಯಜೀವಿಗಳ ಜಗತ್ತು, ಕಾಡಿನ ಜನರ ಬದುಕು ಸೇರಿದಂತೆ ಅನೇಕ ವಿಚಾರಗಳ ಮೇಲೆ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬೆಳಕು ಚೆಲ್ಲಲಿದೆ. ಇದರ ಟ್ರೇಲರ್​ ಒಂದು ಕೋಟಿಗೂ ಅಧಿಕ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ.

ವಿಶೇಷವಾಗಿದೆ ಆಮಂತ್ರಣ ಪತ್ರಿಕೆ:

‘ಗಂಧದ ಗುಡಿ’ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಈಗಾಗಲೇ ಅನೇಕರಿಗೆ ಆಮಂತ್ರಣ ಪತ್ರಿಕೆ ತಲುಪಿದೆ. ಸಂಪೂರ್ಣ ಮರದಿಂದ ಮಾಡಲಾದ ಈ ಪತ್ರಿಕೆಯಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪುತ್ಥಳಿ ಇದೆ. ಜೊತೆಗೆ ಶ್ರೀಗಂಧದ ತುಂಡಿನ ಮೇಲೆ ಪುನೀತ್ ರಾಜ್​ಕುಮಾರ್​ ಎಂದು ಬರೆದಿರುವ ಹಸ್ತಾಕ್ಷರ ಇದೆ. ಅಮಿತಾಭ್ ಬಚ್ಚನ್​, ರಜನಿಕಾಂತ್​ ಮುಂತಾದ ಗಣ್ಯರಿಗೆ ಇದೇ ಆಹ್ವಾನ ಪತ್ರಿಕೆಯನ್ನು ನೀಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:32 am, Tue, 11 October 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ