AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವನಿರಬೇಕಿತ್ತು’ ಸಿನಿಮಾ ಟ್ರೇಲರ್ ನೋಡಿ ಮೆಚ್ಚಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಭರತ್ ಮತ್ತು ಸೌಮ್ಯಾ ಅವರು ‘ಅವನಿರಬೇಕಿತ್ತು’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಶೋಕ್ ಸಾಮ್ರಾಟ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದಾರೆ. ಈ ಚಿತ್ರದ ಟ್ರೇಲರ್ ನೋಡಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮುರಳಿ ಬಿ.ಟಿ. ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

‘ಅವನಿರಬೇಕಿತ್ತು’ ಸಿನಿಮಾ ಟ್ರೇಲರ್ ನೋಡಿ ಮೆಚ್ಚಿದ ಅಶ್ವಿನಿ ಪುನೀತ್ ರಾಜ್​ಕುಮಾರ್
Avanirabekittu Movie Poster
ಮದನ್​ ಕುಮಾರ್​
|

Updated on: Jun 20, 2025 | 6:11 PM

Share

ಹೊಸಬರ ‘ಅವನಿರಬೇಕಿತ್ತು’ ಸಿನಿಮಾ (Avanirabekittu Movie) ಟ್ರೇಲರ್ ಬಿಡುಗಡೆ ಆಗಿದೆ. ಟ್ರೇಲರ್ ನೋಡಿ ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಅವರು ಇಷ್ಟಪಟ್ಟಿದ್ದಾರೆ. ಅಂದಕಾಲತ್ತಿಲ್ ಇಂದ ಕಾಲತ್ತಿಲ್ ಹಾಡಿನಿಂದ ‘ಅವನಿರಬೇಕಿತ್ತು’ ಸಿನಿಮಾ ಗಮನ ಸೆಳೆದಿದೆ.‘ಓ ಹೃದಯ’ ಸಾಂಗ್​ನಿಂದ ಸಿನಿಮಾದ ಮೇಲಿನ ನಿರೀಕ್ಷೆ ಜಾಸ್ತಿ ಆಗಿದೆ. ಟ್ರೇಲರ್ (Avanirabekittu Trailer) ನೋಡಿದ ಪ್ರೇಕ್ಷಕರು ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ. ಆರ್ಗ್ಯಾನಿಕ್ ಆಗಿ ಉತ್ತಮ ವೀವ್ಸ್ ಪಡೆದುಕೊಳ್ಳುತ್ತಿದೆ. ಇದು ಚಿತ್ರತಂಡದ ಭರವಸೆಯನ್ನು ಹೆಚ್ಚು ಮಾಡಿದೆ. ‘ಅವನಿರಬೇಕಿತ್ತು’ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ..

ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ ಅನುಭವ ಇರುವ ಅಶೋಕ್ ಸಾಮ್ರಾಟ್ ಅವರು ‘ಅವನಿರಬೇಕಿತ್ತು’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ಅವರ ಸ್ನೇಹಿತ ಮುರಳಿ ಬಿ.ಟಿ. ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಹಂಸಲೇಖ ಅವರ ಶಿಷ್ಯ ಲೋಕಿ ತವಸ್ಯಾ ಅವರು ಸಂಗೀತ ಸಂಯೋಜಿಸಿದ್ದಾರೆ.

ದೇವರಾಜ್ ಪೂಜಾರಿ ಅವರು ಛಾಯಾಗ್ರಹಣ ಮಾಡಿದ್ದಾರೆ. ತಾಂತ್ರಿಕವಾಗಿ ನಿಪುಣರ ತಂಡವನ್ನ ಕಟ್ಟಿಕೊಂಡಿರುವ ಅಶೋಕ್ ಸಾಮ್ರಾಟ್ ಅವರು ಗುಣ ಮಟ್ಟದ ಮೇಕಿಂಗ್ ಮೂಲಕ ಜನರನ್ನು ಸೆಳೆಯಲಿದ್ದಾರೆ ಎಂಬುದಕ್ಕೆ ಟ್ರೇಲರ್ ಸಾಕ್ಷಿಯಾಗಿದೆ. ಈ ಸಿನಿಮಾದಲ್ಲಿ ನಾಯಕನಾಗಿ ಭರತ್ ನಟಿಸಿದ್ದಾರೆ. ನಾಯಕಿ ಪಾತ್ರದಲ್ಲಿ ಸೌಮ್ಯಾ ಅಭಿನಯಿಸಿದ್ದಾರೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

‘ಅವನಿರಬೇಕಿತ್ತು’ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿರುವ ಭರತ್ ಮತ್ತು ಸೌಮ್ಯಾ ಅವರು ಹೊಸ ಪ್ರತಿಭೆಗಳು. ಇವರ ಅಭಿನಯ ಹಾಗೂ ಡ್ಯಾನ್ಸ್ ಝಲರ್ ಟ್ರೇಲರ್​ನಲ್ಲಿ ಕಾಣಿಸಿದೆ. ಪ್ರಶಾಂತ್ ಸಿದ್ದಿ, ಹಿರಿಯ ನಟಿ ಲಕ್ಷ್ಮೀ ದೇವಮ್ಮ, ಕಿರಣ್ ನಾಯಕ್ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ. ನಿರ್ಮಾಪಕ ಮುರಳಿ, ನಿರ್ದೇಶಕ ಅಶೋಕ್ ಕೂಡ ಹೊಸಬರು.

ಇದನ್ನೂ ಓದಿ: ಯುವರಾಜ್ ಕುಮಾರ್ ‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್

ಜೂನ್ 27ರಂದು ‘ಅವನಿರಬೇಕಿತ್ತು’ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಚಿತ್ರತಂಡ ಈಗ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ‘ಕೆ.ಆರ್.ಜಿ. ಸ್ಟುಡಿಯೋಸ್’ ಈ ಸಿನಿಮಾವನ್ನು ವಿತರಣೆ ಮಾಡಲು ಮುಂದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ