Chetan Chandra: ಕನ್ನಡದ ನಟ ಚೇತನ್​ ಚಂದ್ರ ಮೇಲೆ ಬೆಂಗಳೂರಿನಲ್ಲಿ 20 ಜನರಿಂದ ಹಲ್ಲೆ

ತಾಯಂದಿರ ದಿನದ ಆ ಪ್ರಯುಕ್ತ ತಾಯಿಯ ಜೊತೆ ದೇವಸ್ಥಾನಕ್ಕೆ ಹೋಗಿ ವಾಪಸ್ಸು ಬರುವ ಸಂದರ್ಭದಲ್ಲಿ ನಟ ಚೇತನ್​ ಚಂದ್ರ ಅವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ನಟನ ಕಾರಿಗೂ ಹಾನಿ ಮಾಡಿದ್ದಾರೆ. ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿರುವ ಚೇತನ್​ ಚಂದ್ರ ಅವರು ಕಗ್ಗಲಿಪುರ ಪೊಲೀಸ್​ ಠಾಣೆಗೆ ಹೋಗಿ ದೂರು ನೀಡಿದ್ದಾರೆ.

Chetan Chandra: ಕನ್ನಡದ ನಟ ಚೇತನ್​ ಚಂದ್ರ ಮೇಲೆ ಬೆಂಗಳೂರಿನಲ್ಲಿ 20 ಜನರಿಂದ ಹಲ್ಲೆ
ಹಲ್ಲೆಗೆ ಒಳಗಾದ ನಟ ಚೇತನ್​ ಚಂದ್ರ
Follow us
TV9 Web
| Updated By: ಮದನ್​ ಕುಮಾರ್​

Updated on:May 12, 2024 | 11:18 PM

ಕನ್ನಡದ ಹಲವು ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ಚೇತನ್​ ಚಂದ್ರ (Chetan Chandra) ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಬೆಂಗಳೂರಿನ ಕಗ್ಗಲಿಪುರ ಸಮೀಪ ಈ ಘಟನೆ ನಡೆದಿದೆ. ಸುಮಾರು 20 ಜನರು ಚೇತನ್​ ಚಂದ್ರ ಅವರ ಕಾರನ್ನು ಅಡ್ಡಗಟ್ಟಿ ಹಲ್ಲೆ (Assault) ನಡೆಸಿದ್ದಾರೆ. ನಂತರ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಚೇತನ್​ ಚಂದ್ರ ಅವರು ಘಟನೆ ಬಗ್ಗೆ ವಿವರ ನೀಡಿದ್ದಾರೆ. ಹಲ್ಲೆಗೆ ಒಳಗಾದ ಬಳಿಕ ಅವರು ಕಗ್ಗಲಿಪುರ (Kaggalipura) ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇಂದು (ಮೇ 12) ತಾಯಂದಿರ ದಿನ. ಆ ಪ್ರಯುಕ್ತ ತಾಯಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಾಪಸ್​ ಬರುವಾಗ ಚೇತನ್​ ಚಂದ್ರ ಅವರ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಅವರ ಕಾರಿಗೂ ಹಾನಿ ಮಾಡಲಾಗಿದೆ. ಈ ಘಟನೆ ಯಾವ ರೀತಿ ನಡೆಯಿತು ಎಂದು ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ಚೇತನ್​ ಚಂದ್ರ ಅವರು ಮಾಹಿತಿ ನೀಡಿದ್ದಾರೆ.

‘ಇದು ನನ್ನ ಜೀವನದ ಅತಿ ಕೆಟ್ಟ ಅನುಭವ. ನ್ಯಾಯ ಬೇಕು’ ಎಂದು ಚೇತನ್​ ಚಂದ್ರ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಚೇತನ್​ ಚಂದ್ರ ಅವರು ಇನ್​ಸ್ಟಾಗ್ರಾಮ್​ ಲೈವ್​ ಬಂದು ಹಲ್ಲೆ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ: ಪ್ರಲ್ಹಾದ್​ ಜೋಶಿ ಭೇಟಿಯಾಗಿ ಹಲ್ಲೆ ಘಟನೆ ಬಗ್ಗೆ ವಿವರಿಸಿದ ಹರ್ಷಿಕಾ, ಭುವನ್​

‘ಇವತ್ತು ಒಂದು ಕೆಟ್ಟ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡೆ. ನನ್ನ ಗಾಡಿ ಅಡ್ಡ ಹಾಕಿ ಹೊಡೆದರು. ಚೆನ್ನಾಗಿ ಕುಡಿದು ನನ್ನ ಗಾಡಿ ಅಡ್ಡ ಹಾಕಿದ್ದಾರೆ. ಏನಿಲ್ಲ ಅಂದರೂ 20 ಜನರು ಸೇರಿಕೊಂಡು ನನಗೆ ಹೊಡೆದಿದ್ದಾರೆ. ಅದರ ವಿಡಿಯೋ ಇದೆ. ಮೂಗು ಮುರಿದು ಹಾಕಿದ್ದಾರೆ. ಕಗ್ಗಲಿಪುರ ಪೊಲೀಸ್​ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ. ಈಗ ಮತ್ತೆ ಬಂದು ಕಾರು ಒಡೆದು ಹಾಕಿದ್ದಾರೆ. ತುಂಬ ಕೆಟ್ಟ ಜನರು’ ಎಂದು ಚೇತನ್​ ಚಂದ್ರ ಹೇಳಿದ್ದಾರೆ

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:36 pm, Sun, 12 May 24

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​